ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಕಾರು ಮಾದರಿಯಾದ ಮ್ಯಾಗ್ನೈಟ್ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳು 26ಕ್ಕೆ ಬಿಡುಗಡೆ ಮಾಡುವ ನೀರಿಕ್ಷೆಗಳಿದ್ದು, ಹೊಸ ಕಾರು ಬಿಡುಗಡೆಗೂ ಕಾರಿನ ಇಂಧನ ದಕ್ಷತೆಯ ಮಾಹಿತಿ ಹಂಚಿಕೊಳ್ಳಲಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಪ್ರತಿ ಸ್ಪರ್ಧಿಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್‌ಗಳೊಂದಿಗೆ ಬೆಲೆಯಲ್ಲೂ ಗಮನಸೆಳೆಯಲಿದೆ. ಹೊಸ ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆ ಹೊಂದಿದ್ದು, ಸೆಗ್ಮೆಂಟ್ ಇನ್ ಬೆಸ್ಟ್ ಫೀಚರ್ಸ್‌ಗಳೊಂದಿಗೆ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರ ಅಭಿವೃದ್ದಿಗೊಂಡಿರುವ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಈ ಮೂಲಕ ಇಂಧನ ದಕ್ಷತೆಯಲ್ಲೂ ಗಮನಸೆಳೆಯುವ ಮ್ಯಾಗ್ನೈಟ್ ಕಾರು ಮಾದರಿಯು ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ಕಾರಿನಲ್ಲಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌‌ಗೆ ಗರಿಷ್ಠ 18.75 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಟರ್ಬೋ ಪೆಟ್ರೋಲ್ ಮಾದರಿಯು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಪ್ರತಿ ಲೀಟರ್‍‌ಗೆ 17.7 ಕಿ.ಮೀ ನಿಂದ 20 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 40 ಲೀಟರ್ ಸಾಮರ್ಥ್ಯದ ಫ್ಯೂಲ್ ಟ್ಯಾಂಕ್ ಅನ್ನು ಒಂದು ಬಾರಿ ಪೂರ್ತಿಯಾಗಿ ತುಂಬಿಸಿದರೆ ಗರಿಷ್ಠ 800 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಮ್ಯಾಗ್ನೈಟ್ ಹೊಸ ಕಾರಿನ ಇಂಧನ ದಕ್ಷತೆಯನ್ನು ARAI(ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ) ಸಂಸ್ಥೆಯು ಪ್ರಮಾಣೀಕರಿಸಿದ್ದು, ಟರ್ಬೋ ಆವೃತ್ತಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ಇಂಧನ ದಕ್ಷತೆ ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಇಂಧನ ದಕ್ಷತೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಮಾಹಿತಿಗಳ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.55 ಲಕ್ಷ ಬೆಲೆಯೊಂದಿಗೆ ಇದೇ ತಿಂಗಳು 26ಕ್ಕೆ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ವೆರಿಯೆಂಟ್‌ಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

Article Published On: Thursday, November 19, 2020, 21:02 [IST]
English summary
Nissan Magnite Mileage Figures Revealed Ahead Of Launch.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+