ಕೋವಿಡ್‌-19: 5 ಮಿನಿಯನ್ ಯುರೋ ಡಾಲರ್ ದೇಣಿಗೆ ನೀಡಿದ ಆಡಿ

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುವುದುದಾಗಿ ಹೇಳಿಕೊಂಡಿದ್ದು, ಫೋಕ್ಸ್‌ವ್ಯಾಗನ್ ಅಂಗಸಂಸ್ಥೆಯಾದ ಆಡಿ ಕೂಡಾ 5 ಮಿನಿಯನ್ ಯುರೋ ಡಾಲರ್ ದೇಣಿಗೆ( ರೂ.35 ಕೋಟಿ) ನೀಡಿದ್ದು, ಅಗತ್ಯ ವೈದ್ಯಕೀಯ ಉಪಕರಣಗಳ ಉತ್ಪಾದನೆ ಸಹಕರಿಸುವುದಾಗಿ ಹೇಳಿಕೊಂಡಿದೆ.

ಕೋವಿಡ್‌-19: 5 ಮಿನಿಯನ್ ಯುರೋ ಡಾಲರ್ ದೇಣಿಗೆ ನೀಡಿದ ಆಡಿ

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಭಾರತ ಸೇರಿ ವಿಶ್ವದ ಹಲವು ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದೆ. ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ಕೋವಿಡ್‌-19: 5 ಮಿನಿಯನ್ ಯುರೋ ಡಾಲರ್ ದೇಣಿಗೆ ನೀಡಿದ ಆಡಿ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮುಂದಾಗಿವೆ.

ಕೋವಿಡ್‌-19: 5 ಮಿನಿಯನ್ ಯುರೋ ಡಾಲರ್ ದೇಣಿಗೆ ನೀಡಿದ ಆಡಿ

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.

ಕೋವಿಡ್‌-19: 5 ಮಿನಿಯನ್ ಯುರೋ ಡಾಲರ್ ದೇಣಿಗೆ ನೀಡಿದ ಆಡಿ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.

ಕೋವಿಡ್‌-19: 5 ಮಿನಿಯನ್ ಯುರೋ ಡಾಲರ್ ದೇಣಿಗೆ ನೀಡಿದ ಆಡಿ

ಇನ್ನು ಚೀನಾದಿಂದ ಶುರುವಾದ ಕರೋನಾ ವೈರಸ್ ದಾಳಿಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 13 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 71 ಸಾವಿರ ಜನ ಪ್ರಾಣಕಳೆದುಕೊಂಡಿದ್ದಾರೆ. 12 ಲಕ್ಷ ಜನರಲ್ಲಿ ಇದುವರೆಗೆ ಸುಮಾರು 2.73 ಲಕ್ಷ ಜನ ಗುಣಮುಖರಾಗಿದ್ದು, ಶೇ.5 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.

ಕೋವಿಡ್‌-19: 5 ಮಿನಿಯನ್ ಯುರೋ ಡಾಲರ್ ದೇಣಿಗೆ ನೀಡಿದ ಆಡಿ

ಹೀಗಾಗೀ ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಎದ್ದುಕಾಣುತ್ತಿದೆ.

ಕೋವಿಡ್‌-19: 5 ಮಿನಿಯನ್ ಯುರೋ ಡಾಲರ್ ದೇಣಿಗೆ ನೀಡಿದ ಆಡಿ

ಈ ಹಿನ್ನಲೆಯಲ್ಲಿ ಸದ್ಯ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ನಿರ್ಧರಿಸಲಾಗಿದ್ದು, ವೆಂಟಿಲೆಟರ್, ಮಾಸ್ಕ್‌, ಟೆಸ್ಟಿಂಗ್ ಕಿಟ್ ಉತ್ಪಾದನೆ ಪ್ರಮುಖ ಕಾರು ಕಂಪನಿಗಳು ಒಪ್ಪಿಗೆ ಸೂಚಿಸಿವೆ.

Most Read Articles

Kannada
Read more on ಆಡಿ audi
English summary
Audi donates 5 million euro globally in fight against Covid-19. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X