ಭಾರತದಲ್ಲಿ ಬಿಡುಗಡೆಯಾಗಲಿದೆ ಆಡಿ ಬಹುನೀರಿಕ್ಷಿತ ಕ್ಯೂ2 ಎಸ್‌ಯುವಿ
ಜರ್ಮನ್ ಕಾರು ಉತ್ಪಾದನಾ ಕಂಪನಿ ಆಡಿ ತನ್ನ ಜನಪ್ರಿಯ ಎಂಟ್ರಿ ಲೆವಲ್ ಕಾರು ಮಾದರಿಯಾದ ಕ್ಯೂ2 ಕ್ರಾಸ್ ಓವರ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಐಷಾರಾಮಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲಿದೆ.

ಭಾರತದಲ್ಲಿ ಐಷಾರಾಮಿ ಕಾರುಗಳ ಮಾರಾಟ ವ್ಯಾಪ್ತಿ ವಿಸ್ತರಿಸುತ್ತಿರುವ ಆಡಿ ಕಂಪನಿಯು ವರ್ಷಾಂತ್ಯದಲ್ಲಿ ಮತ್ತಷ್ಟು ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಕಾರು ಮಾದರಿಗಳ ಸಂಖ್ಯೆಯನ್ನು ಕೂಡಾ ಹೆಚ್ಚಿಸುತ್ತಿದೆ. ಸದ್ಯ ಆಡಿ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಎ7 ಸೆಡಾನ್, ಎ8 ಸೆಡಾನ್, ಕ್ಯೂ8 ಎಸ್‌ಯುವಿ, ಎ6 ಸೆಡಾನ್ ಮತ್ತು ಪರ್ಫಾಮೆನ್ಸ್ ಮಾದರಿಯಾದ ಆರ್‌ಎಸ್7 ಮಾದರಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಆದರೆ ಮಾರುಕಟ್ಟೆಯಲ್ಲಿ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಿಗೆ ಉತ್ತಮ ಬೇಡಿಕೆ ಉಂಟಾಗುತ್ತಿದ್ದು, ಆಡಿ ಕೂಡಾ ತನ್ನ ಜನಪ್ರಿಯ ಕಾರು ಮಾದರಿಯಾದ ಕ್ಯೂ2 ಮಾದರಿಯನ್ನು ಭಾರತದಲ್ಲಿ ಬಿಡುಗಡೆಯಾಗಿ ಸಿದ್ದವಾಗಿದೆ.

ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ 2017ರಿಂದಲೇ ಮಾರಾಟವಾಗುತ್ತಿರುವ ಕ್ಯೂ2 ಎಸ್‌ಯುವಿ ಮಾದರಿಯು ಐಷಾರಾಮಿ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದ್ದು, ಇದೀಗ ಹೊಸ ಕಾರು ಮಾದರಿಯು ಭಾರತದಲ್ಲೂ ಬಿಡುಗಡೆಯಾಗುತ್ತಿದೆ.

ಹೊಸ ಕ್ಯೂ2 ಕಾರು ಕ್ಯೂ3 ಎಸ್‌ಯುವಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮಾಹಿತಿಗಳ ಪ್ರಕಾರ, ಕ್ಯೂ2 ಕ್ರಾಸ್ ಓವರ್ ಎಸ್‌ಯುವಿ ಮಾದರಿಯು ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಬಿಡುಗಡೆಯಾಗಲಿದ್ದು, 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್ ಪ್ರೇರಣೆಯ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 190-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಹೊಸ ಕಾರು ಹ್ಯಾಚ್‌ಬ್ಯಾಕ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ವೈಶಿಷ್ಟ್ಯತೆಗಳೊಂದಿಗೆ ಮತ್ತು ಎಸ್‌ಯುವಿ ಮಾದರಿಗಿಂತಲೂ ಕಡಿಮೆ ವೈಶಿಷ್ಟ್ಯತೆಗಳನ್ನು ಹೊಂದಿರುವುದರಿಂದ ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾಗಿ ಗುರುತಿಸಿಕೊಂಡಿದ್ದು, 4,191-ಎನ್ಎಂ ಉದ್ದ, 1,794-ಎನ್ಎಂ ಅಗಲ, 1,508-ಎಂಎಂ ಎತ್ತರ ಮತ್ತು 2,601-ಎಂಎಂ ನಷ್ಟು ವೀಲ್ಹ್ ಬೆಸ್ ಹೊಂದಿದೆ.

ಆಡಿ ಉತ್ಪಾದನಾ ಕಾರುಗಳಲ್ಲೇ ವಿಶೇಷ ವಿನ್ಯಾಸ ಹೊಂದಿರುವ ಕ್ಯೂ2 ಕಾರು ಎಂಟ್ರಿ ಲೆವಲ್ ಮಾದರಿಯಾಗಿದ್ದರೂ ಹಲವಾರು ಸ್ಪೋರ್ಟಿ ಮತ್ತು ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿದ್ದು, ಸ್ಟ್ಯಾಂಡರ್ಡ್, ಪ್ರೀಮಿಯಂ ಮತ್ತು ಪ್ರೀಮಿಯಂ ಪ್ಲಸ್ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳಲಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಕಾರಿನ ಮೂಲಕ ಭಾರತದಲ್ಲಿ ಬಿಎಂಡಬ್ಲ್ಯು ಎಕ್ಸ್1 ಸೇರಿದಂತೆ ಫುಲ್ ಸೈಜ್ ಎಸ್‌ಯುವಿ ಮಾದರಿಗಳಾದ ಟೊಯೊಟೊ ಫಾರ್ಚೂನರ್, ಫೋರ್ಡ್ ಎಂಡಿವರ್ ಕಾರುಗಳಿಗೂ ಪೈಪೋಟಿ ನೀಡುವ ತವದಲ್ಲಿದ್ದು, ಇದೇ ವರ್ಷ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಮಾರಾಟಕ್ಕೆ ಲಭ್ಯವಾಗಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.32 ಲಕ್ಷದಿಂದ ರೂ.36 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.


Click it and Unblock the Notifications








