Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಕ್ಯೂ2 ಎಸ್‌ಯುವಿ ಬಿಡುಗಡೆಗಾಗಿ ಟೀಸರ್ ಬಹಿರಂಗಪಡಿಸಿದ ಆಡಿ
ಆಡಿ ಕಂಪನಿಯು ತನ್ನ ಎಂಟ್ರಿ ಲೆವಲ್ ಎಸ್‌ಯುವಿ ಕಾರು ಮಾದರಿಯಾದ ಕ್ಯೂ2 ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತಿರುವ ಆಡಿ ಕಂಪನಿಯು ಹೊಸ ಕಾರಿನ ಟೀಸರ್ ಬಿಡುಗಡೆ ಮಾಡಿದೆ.

ಕ್ಯೂ2 ಎಸ್‌ಯುವಿ ಕಾರು ಮಾದರಿಯು ಯುರೋಪಿನ ಹಲವು ರಾಷ್ಟ್ರಗಳಲ್ಲಿ ಖರೀದಿಗೆ ಲಭ್ಯವಿದ್ದು, ಈ ಹೊಸ ಕಾರು ಭಾರತದಲ್ಲೂ ಶೀಘ್ರದಲ್ಲೇ ಬಿಡುಗೆಯಾಗುವ ನೀರಿಕ್ಷೆಯಲ್ಲಿದೆ. ಹೊಸ ಕ್ಯೂ2 ಬಿಡುಗಡೆ ಕುರಿತಂತೆ ಈಗಾಗಲೇ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಆಡಿ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿ 2021ರ ಆವೃತ್ತಿಯೊಂದಿಗೆ ಹೊಸ ಬದಲಾವಣೆಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ವಿಸ್ತರಿತ ಮುಂಭಾಗದ ವಿನ್ಯಾಸಕ್ಕೆ ಅನುಕೂಲಕರವಾದ ಸಿಂಗಲ್ ಫ್ರೇಮ್ ಗ್ರಿಲ್ ಮತ್ತು ಬಾನೆಟ್ ಮತ್ತು ಗ್ರಿಲ್ ನಡುವೆ ತ್ರಿ ಸ್ಲೈಟ್ ಲೈನ್ ಪಡೆದುಕೊಂಡಿದ್ದು, ಸ್ಟ್ಯಾಂಡರ್ಡ್ ಆಗಿ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹೈ ಎಂಡ್ ಮಾದರಿಯಲ್ಲಿ ಮ್ಯಾಟ್ರಿಕ್ಸ್ ಎಲ್ಇಡಿ ಅಡಾಪ್ಟಿವ್ ಯುನಿಟ್‌ನೊಂದಿಗೆ ಡೈನಾಮಿಕ್ ಟರ್ನ್ ಇಂಡಿಕೇಟರ್ ಹೊಂದಿದೆ.

ಹಾಗೆಯೇ ಕಾರಿನ ಒಳಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳಾಗಿದ್ದು, ಹಲವಾರು ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಮರುವಿನ್ಯಾಸಗೊಳಿಸಲಾದ ಗೇರ್‌ಲೀವರ್, ಎಸಿ ವೆಂಟ್ಸ್, ನಾಲ್ಕು ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಮುಂಭಾಗದ ಆಸನಗಳನ್ನು ನೀಡಲಾಗಿದೆ.

ಜೊತೆಗೆ ಹೊಸ ಕಾರಿನಲ್ಲಿ 12.3-ಇಂಚಿನ ವರ್ಚುವಲ್ ಕುಕ್‌ಪಿಟ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 8.3-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಧ್ವನಿ ಸಂಜ್ಞೆಗಳ ಮೂಲಕ ಬದಲಾಯಿಸಬಹುದಾದ ಮಲ್ಟಿ ಡ್ರೈವಿಂಗ್ ಮೋಡ್‌ಗಳು, ಎಲೆಕ್ಟ್ರಾನಿಕ್ ಬೂಟ್ ಲೀಡ್, ಕ್ರೂಸ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿರಲಿದೆ.
ಮಾಹಿತಿಗಳ ಪ್ರಕಾರ, 2021ರ ಕ್ಯೂ2 ಕಾರು ಮಾದರಿಯು ಎಂಜಿನ್ ಆಯ್ಕೆ ಮಹತ್ವದ ಬದಲಾವಣೆ ಪಡೆದುಕೊಳ್ಳುತ್ತಿದ್ದು, ಹೊಸ ಎಂಜಿನ್ ಆಯ್ಕೆ ಬಗೆಗೆ ಇನ್ನು ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ. ಆದರೆ ಹೊಸ ಕಾರಿನಲ್ಲಿ ಹೊಸದಾಗಿ 2.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆ ನೀಡಬಹುದಾಗಿದೆ.

ಹೊಸ ಕ್ಯೂ2 ಕಾರು ಕ್ಯೂ3 ಎಸ್‌ಯುವಿಗಿಂತಲೂ ಕೆಳದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಕೇವಲ 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿದೆ.

ಕ್ಯೂ2 ಕ್ರಾಸ್ ಓವರ್ ಎಸ್‌ಯುವಿ ಮಾದರಿಯು ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಬಿಡುಗಡೆಯಾಗಲಿದ್ದು, 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್ ಪ್ರೇರಣೆಯ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 190-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಕಾರು ಹ್ಯಾಚ್‌ಬ್ಯಾಕ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ವೈಶಿಷ್ಟ್ಯತೆಗಳೊಂದಿಗೆ ಮತ್ತು ಎಸ್‌ಯುವಿ ಮಾದರಿಗಿಂತಲೂ ಕಡಿಮೆ ವೈಶಿಷ್ಟ್ಯತೆಗಳನ್ನು ಹೊಂದಿರುವುದರಿಂದ ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾಗಿ ಗುರುತಿಸಿಕೊಂಡಿದ್ದು, 4,191-ಎನ್ಎಂ ಉದ್ದ, 1,794-ಎನ್ಎಂ ಅಗಲ, 1,508-ಎಂಎಂ ಎತ್ತರ ಮತ್ತು 2,601-ಎಂಎಂ ನಷ್ಟು ವೀಲ್ಹ್ ಬೆಸ್ ಹೊಂದಿದೆ.

ಆಡಿ ಉತ್ಪಾದನಾ ಕಾರುಗಳಲ್ಲೇ ವಿಶೇಷ ವಿನ್ಯಾಸ ಹೊಂದಿರುವ ಕ್ಯೂ2 ಕಾರು ಎಂಟ್ರಿ ಲೆವಲ್ ಮಾದರಿಯಾಗಿದ್ದರೂ ಹಲವಾರು ಸ್ಪೋರ್ಟಿ ಮತ್ತು ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿದ್ದು, ಸ್ಟ್ಯಾಂಡರ್ಡ್, ಪ್ರೀಮಿಯಂ ಮತ್ತು ಪ್ರೀಮಿಯಂ ಪ್ಲಸ್ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಕಾರಿನ ಮೂಲಕ ಭಾರತದಲ್ಲಿ ಬಿಎಂಡಬ್ಲ್ಯು ಎಕ್ಸ್1 ಸೇರಿದಂತೆ ಫುಲ್ ಸೈಜ್ ಎಸ್‌ಯುವಿ ಮಾದರಿಗಳಾದ ಟೊಯೊಟೊ ಫಾರ್ಚೂನರ್, ಫೋರ್ಡ್ ಎಂಡಿವರ್ ಕಾರುಗಳಿಗೂ ಪೈಪೋಟಿ ನೀಡುವ ತವದಲ್ಲಿದ್ದು, ಇದೇ ವರ್ಷ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಮಾರಾಟಕ್ಕೆ ಲಭ್ಯವಾಗಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.32 ಲಕ್ಷದಿಂದ ರೂ.36 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷಿಸಲಾಗಿದೆ.