Just In
- 9 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 11 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 11 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
- 12 hrs ago
ಎರಡನೇ ಬಾರಿ ರೋಲ್ಸ್ ರಾಯ್ಸ್ ಕುಲಿನನ್ ಕಾರು ಖರೀದಿಸಿದ ಮುಖೇಶ್ ಅಂಬಾನಿ
Don't Miss!
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- News
ವಿಶ್ವದಾದ್ಯಂತ ಕೊರೊನಾಗೆ ಬಲಿಯಾದವರ ಸಂಖ್ಯೆ 2 ಕೋಟಿ ದಾಟಿದೆ!
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅನಾವರಣವಾಯ್ತು ಆಡಿ ಕ್ಯೂ4 ಸ್ಪೋರ್ಟ್‌ಬ್ಯಾಕ್ ಇ-ಟ್ರಾನ್ ಎಸ್‍ಯುವಿ
ಆಡಿ ಕಂಪನಿಯು ತನ್ನ ಹೂಸ ಕ್ಯೂ4 ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ ಆವೃತ್ತಿಯನ್ನು ಅನಾವರಣಗೊಳಿಸಿದೆ. ಈ ಆಡಿ ಕ್ಯೂ4 ಇ-ಟ್ರಾನ್ ಕಾನ್ಸೆಪ್ಟ್ ಅನ್ನು 2019ರ ಜಿನೀವಾ ಮೋಟಾರು ಶೋನಲ್ಲಿ ಮೊದಲ ಬಾರಿಗೆ ಪ್ರದರ್ಶಿಸಿದ್ದರು.

ಈ ಆಡಿ ಕ್ಯೂ4 ಇ-ಟ್ರಾನ್ ಎಸ್‍ಯುವಿಯ ಉತ್ಪಾದನೆಯನ್ನು ಮುಂದಿನ ವರ್ಷ ಪ್ರಾರಂಭಿಸಬಹುದು. ಆಡಿ ಕ್ಯೂ4 ಎಸ್‌ಯುವಿ ಮತ್ತು ಕ್ಯೂ4 ಸ್ಪೋರ್ಟ್‌ಬ್ಯಾಕ್ ಇ-ಟ್ರಾನ್ ಎಸ್‍ಯುವಿಗಳು ಹೆಚ್ಚು ಕಡಿಮೆ ಒಂದೇ ರೀತಿಯಲ್ಲಿದೆ. ಹೊಸ ಕ್ಯೂ4 ಸ್ಪೋರ್ಟ್‌ಬ್ಯಾಕ್ ಇ-ಟ್ರಾನ್ ಎಸ್‍ಯುವಿಯು 4600 ಎಂಎಂ ಉದ್ದ, 1600 ಎಂಎಂ ಎತ್ತರ ಮತ್ತು 1900 ಎಂಎಂ ಅಗಲವನ್ನು ಹೊಂದಿದೆ. ಇನ್ನು ಈ ಇ-ಟ್ರಾನ್ ಎಸ್‍ಯುವಿಯು 2770 ಎಂಎಂ ವೀಲ್‌ಬೇಸ್ ಅನ್ನು ಹೊಂದಿದೆ.

ಹೊಸ ಕ್ಯೂ4 ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ ಎಂಇಬಿ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಈ ಹೊಸ ಕ್ಯೂ4 ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ ಎಸ್‍ಯುವಿಯು 50 ಕ್ವಾಟ್ರೋ ಮತ್ತು 55 ಕ್ವಾಟ್ರೋ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರಲಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಹೊಸ ಟಾಟಾ ಎಲೆಕ್ಟ್ರಿಕ್ ಕಾರು

ಈ ಎರಡು ರೂಪಾಂತರಗಳಲ್ಲಿ ಒಂದೇ ರೀತಿಯ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಿದೆ. ಈ ಎರಡು ರೂಪಾಂತರಗಳು ಒಂದೇ ಮಾದರಿಯು ಪವರ್ ಅನ್ನು ಉತ್ಪಾದಿಸುತ್ತದೆ. ಈ ಹೊಸ ಆಡಿ ಕ್ಯೂ4 ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ ರೇರ್ ವ್ಹೀಲ್ ಮೋಟಾರ್ 201 ಪವರ್ ಮತ್ತು 310 ಎನ್ಎಂ ಟರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಮುಂಭಾಗದ ಮೋಟಾರ್ 100 ಬಿಹೆಚ್‍ಪಿ ಪವರ್ 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಸ್‍ಯುವಿಯು ಕೇವಲ 6.3 ಸೆಕೆಂಡುಗಳಲ್ಲಿ ಗಂಟೆಗೆ 0-100 ಕಿಮೀ ವೇಗವನ್ನು ಕ್ರಮಿಸುತ್ತದೆ. ಈ ಆಡಿ ಕ್ಯೂ4 ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ 180 ಕಿ,ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಆಡಿ ಕ್ಯೂ ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ ನಲ್ಲಿ 82 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗಿದೆ. ಈ ಆಡಿ ಕ್ಯೂ4 ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ 450 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಎಲೆಕ್ಟ್ರಿಕ್ ಎಸ್‍ಯುವಿಯು ಬ್ಯಾಟರಿ ಪ್ಯಾಕ್ ಕೇವಲ 30 ನಿಮಿಷಗಳಲ್ಲಿ ಶೇ.80 ರಷ್ಟು ಚಾರ್ಜ್ ಆಗುತ್ತದೆ.

ಈ ಆಡಿ ಕ್ಯೂ ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ ರೂಫ್ ಲೈನ್ ಅನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಫುಲ್ ಎಲ್‌ಇಡಿ ಹೆಡ್‌ಲೈಟ್ ಸೆಟಪ್ ಮತ್ತು ಮುಂಭಾಗ ಮತ್ತು ಹಿಂಭಾಗದಲ್ಲಿ ಟ್ವೀಕ್ಡ್ ಬಂಪರ್‌ಗಳನ್ನು ಸಹ ಹೊಂದಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್ಯುವಿ

ಈ ಕ್ಯೂ ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ ಆಡಿ ವರ್ಚುವಲ್ ಕಾಕ್‌ಪಿಟ್, ಹೆಡ್-ಅಪ್ ಡಿಸ್ ಪ್ಲೇ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಮತ್ತು ಸೆಲ್ ಫೋನ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ.

ಈ ಆಡಿ ಕ್ಯೂ4 ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ ಎಸ್‍ಯುವಿಯು ದೇಶಿಯ ಮಾರುಕಟ್ಟೆಯಲ್ಲಿ 2022ರಲ್ಲಿ ಬಿಡುಗಡೆಯಾಗಬಹುದು. ಭಾರತದಲ್ಲಿ ಇತ್ತೀಚೆಗೆ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.