ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಆಡಿ ಕಂಪನಿಯು ಭಾರತದಲ್ಲಿ ಕ್ಯೂ8 ಫ್ಲ್ಯಾಗ್‌ಶಿಫ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆಗೊಳಿಸಿ ಮಾರಾಟಕ್ಕೆ ಚಾಲನೆ ನೀಡಿದ್ದು, ಇದೀಗ ಫರ್ಪಾಮೆನ್ಸ್ ಪ್ರಿಯರಿಗಾಗಿ ಹೈ ಪರ್ಫಾಮೆನ್ಸ್ ಮಾದರಿಯಾದ ಆರ್‌ಎಸ್ ಕ್ಯೂ8 ಮಾದರಿಯನ್ನು ಸಹ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಆಡಿ ಹೊಸ ಆರ್‌ಎಸ್ ಕ್ಯೂ8 ಮಾದರಿಯು ಈಗಾಗಲೇ ಯುರೋಪ್ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಿದ್ದು, ಕಳೆದ ಕೆಲ ದಿನಗಳ ಹಿಂದಷ್ಟೆ ಸ್ಟ್ಯಾಂಡರ್ಡ್ ಮಾದರಿಯಾದ ಕ್ಯೂ8 ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಇದೀಗ ಹೈ ಪರ್ಫಾಮೆನ್ಸ್ ಜೊತೆಗೆ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಆರ್‌ಎಸ್ ಕ್ಯೂ8 ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ಟೀಸರ್ ಬಿಡುಗಡೆ ಮಾಡುವ ಮೂಲಕ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಕೇಂದ್ರ ಸರ್ಕಾರವು 2018ರಲ್ಲಿ ಜಾರಿಗೆ ಬಂದಿದರುವ ಹೊಸ ಆಮದು ನೀತಿ ಅಡಿ ಆರ್‌ಎಸ್ ಕ್ಯೂ8 ಬಿಡುಗಡೆಗೆ ಸಿದ್ದವಾಗಿರುವ ಆಡಿ ಕಂಪನಿಯು ವಿವಿಧ ಮಾದರಿಯ ಹೈ ಎಂಡ್ ಕಾರುಗಳನ್ನು ಮಾತ್ರವಲ್ಲದೆ ಎಂಟ್ರಿ ಲೆವಲ್ ಕಾರುಗಳನ್ನು ಸಹ ಬಿಡುಗಡೆ ಮಾಡಲಿದೆ.

ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಹೊಸ ಆಮದು ನೀತಿಯು ವಿದೇಶಿ ಆಟೋ ಉತ್ಪಾದನಾ ಕಂಪನಿಗಳಿಗೆ ವರವಾಗಿ ಪರಿಣಮಿಸಿದ್ದು, ಹೊಸ ಆಮದು ನೀತಿ ಅಡಿ ವಿದೇಶಿ ವಾಹನ ಕಂಪನಿಗಳು ಭಾರತಕ್ಕೆ ವಾರ್ಷಿಕವಾಗಿ 2,500 ವಾಹನಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ಆಮದು ಮಾಡಿಕೊಳ್ಳುವ ಅವಕಾಶವನ್ನು ನೀಡಲಾಗಿದೆ.

ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಈ ಹಿನ್ನಲೆಯಲ್ಲಿ ಆಡಿ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಕಂಪನಿಗಳು ವಿದೇಶಿ ಮಾರುಕಟ್ಟೆಯಲ್ಲಿರುವ ತಮ್ಮ ಜನಪ್ರಿಯ ವಾಹನಗಳನ್ನು ಭಾರತದಲ್ಲೂ ನಿರ್ದಿಷ್ಟ ಪ್ರಮಾಣದಲ್ಲಿ ಮಾರಾಟ ಮಾಡಲು ಸಿದ್ದವಾಗುತ್ತಿದ್ದು, ವಿಶೇಷ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿರುವ ಆರ್‌ಎಸ್ ಕ್ಯೂ8 ಕಾರು ಆರಂಭಿಕ ಸೂಪರ್ ಎಸ್‌ಯುವಿ ವಿಭಾಗದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಸದ್ಯ ಮಾರುಕಟ್ಟೆಯಲ್ಲಿರುವ ಲ್ಯಾಂಬೋರ್ಗಿನಿ ಉರಸ್ ಎಸ್‌ಯುವಿ ಕಾರು ಮಾದರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿರುವ ಹೊಸ ಆರ್‌ಎಸ್ ಕ್ಯೂ8 ಕಾರು 4.0-ಲೀಟರ್ ಟರ್ಬೋಚಾರ್ಜ್ಡ್ ವಿ8 ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಈ ಮೂಲಕ 600-ಬಿಎಚ್‌ಪಿ ಮತ್ತು 800-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿರುವ ಆರ್‌ಎಸ್ ಕ್ಯೂ8 ಕಾರು ಕೇವಲ 3.8-ಸೆಕೆಂಡುಗಳಲ್ಲಿ ಸೊನ್ನೆಯಿಂದ ನೂರು ಕಿ.ಮೀ ವೇಗ ಪಡೆದುಕೊಳ್ಳುತ್ತದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಇದರೊಂದಿಗೆ 13.7 ಸೆಕೆಂಡುಗಳಲ್ಲಿ 200 ಕಿ.ಮೀ ವೇಗವನ್ನು ಪಡೆದುಕೊಳ್ಳುವ ಹೊಸ ಕಾರು ಪ್ರತಿ ಗಂಟೆಗೆ 250ಕಿ.ಮೀ ಟಾಪ್ ಸ್ಪೀಡ್ ಪಡೆದುಕೊಂಡಿದ್ದು, ಡೈನಾಮಿಕ್ ಪ್ಯಾಕೇಜ್ ಅಳವಡಿಕೆಯ ಮೂಲಕ ಕಾರಿನ ಟಾಪ್ ಸ್ಪೀಡ್ ಅನ್ನು ಪ್ರತಿಗಂಟೆಗೆ 250ಕಿ.ಮೀ ನಿಂದ 305ಕಿ.ಮೀ ವೇಗ ಹೆಚ್ಚಿಸಿಕೊಳ್ಳಬಹುದಾದ ಆಯ್ಕೆ ಹೊಂದಿದೆ.

ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಸದ್ಯ ಮಾರುಕಟ್ಟೆಯಲ್ಲಿರುವ ಸ್ಟ್ಯಾಂಡರ್ಡ್ ಕ್ಯೂ8 ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.33 ಕೋಟಿ ಬೆಲೆ ಹೊಂದಿದ್ದು, ಪರ್ಫಾಮೆನ್ಸ್ ಜೊತೆಗೆ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿರುವ ಆರ್‌ಎಸ್ ಕ್ಯೂ8 ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ. 1.75 ಕೋಟಿಯಿಂದ ರೂ. 1.90 ಕೋಟಿ ಇರಬಹುದೆಂದು ಅಂದಾಜಿಸಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಆರ್‌ಎಸ್ ಕ್ಯೂ8 ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭಿಸಿದ ಆಡಿ

ಈ ಮೊದಲಿನ ಯೋಜನೆಯೆಂತೆ ಹೊಸ ಕಾರನ್ನು ಏಪ್ರಿಲ್ ತಿಂಗಳಿನಲ್ಲಿಯೇ ಬಿಡುಗಡೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆ ಮುಂದೂಡುತ್ತಾ ಇದೀಗ ಬಿಡುಗಡೆ ಮಾಡಲಾಗುತ್ತಿದೆ.

Most Read Articles

Kannada
Read more on ಆಡಿ audi
English summary
Audi RS Q8 Bookings Commence Ahead Of India Launch. Read in Kannada.
Story first published: Thursday, August 6, 2020, 17:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X