Just In
- 10 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 11 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 12 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 13 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಟೋ ಎಕ್ಸ್ಪೋ 2020: ಬಿಡುಗಡೆಯಾಯ್ತು ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್ 245
ಸ್ಕೋಡಾ ಇಂಡಿಯಾ ತನ್ನ ಹೊಸ ಆಕ್ಟೀವಿಯಾ ಆರ್ಎಸ್ 245 ಕಾರನ್ನು 2020ರ ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್ 245 ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.36 ಲಕ್ಷಗಳಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಆಕ್ಟೀವಿಯಾ ಆರ್ಎಸ್ 245 ಕಾರನ್ನು ಕೇವಲ 200 ಯುನಿಟ್ಗಳಿಗೆ ಸೀಮಿತಗೊಳಿಸಿ ಬಿಡುಗಡೆಗೊಳಿಸಿದೆ.
ಸ್ಕೋಡಾ ಅಕ್ಟೀವಿಯಾ ಆರ್ಎಸ್ ಕಾರ್ ಅನ್ನು ಮೊದಲ ಬಾರಿಗೆ 2017ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಆಕ್ಟೀವಿಯಾ ಆರ್ಎಸ್ ಮಾದರಿಯು ಬಿಡುಗಡೆಯಾದ ಮೊದಲ ವಾರದಲ್ಲಿ 250 ಯುನಿಟ್ಗಳು ಮಾರಾಟವಾಗಿದ್ದವು. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಆಕ್ಟೀವಿಯಾ ಆರ್ಎಸ್ ಒಂದಾಗಿದೆ. ಆರ್ಎಸ್ ಮಾದರಿಯು ಪ್ರಸ್ತುತ ತಲೆಮಾರಿನ ಸ್ಕೋಡಾ ಆಕ್ಟೀವಿಯಾವನ್ನು ಆಧರಿಸಿದೆ.
ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್ 245 ಸೆಡಾನ್ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಬ್ಲ್ಯಾಕ್ ಗ್ರಿಲ್ನಲ್ಲಿ ಆರ್ಎಸ್ ಬ್ಯಾಡ್ಜ್ ಹೊಂದಿರುವ ಡ್ಯುಯಲ್ ಸ್ಪ್ಲಿಟ್ ಹೆಡ್ಲ್ಯಾಂಪ್ಗಳನ್ನು ಒಳಗೊಂಡಿದೆ. ಸ್ಕೋಡಾ ಆಕ್ಟೀವಿಯಾ ಆರ್ಎಸ್ 245 ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆರ್ವಿಎಂಗಳು ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್ಗಳು, ವೈಡರ್ ಏರ್ ಡ್ಯಾಮ್ಗಳು ಮತ್ತು ಫ್ರಂಟ್ ಬಂಪರ್ಗಳನ್ನು ಹೊಂದಿದೆ.
ವಾಹನವು ಬೂಟ್ ಲಿಡ್ ಸ್ಪಾಯ್ಲರ್ ಮತ್ತು ಹಿಂಭಾಗದಲ್ಲಿ ಸಿ - ಆಕಾರಾದ ಟೇಲ್ಲ್ಯಾಂಪ್ಗಳನ್ನು ಒಳಗೊಂಡಿದೆ. ಇನ್ನೂ ಇಂಟಿರಿಯರ್ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್ನೆಟ್ ಕನೆಕ್ಟಿವಿಟಿ ಫೀಚರ್ಸ್ಗಳೊಂದಿಗೆ ಎಂಟು ಇಂಚಿನ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.
ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್ 245 ಸೆಡಾನ್ 2.0 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 242 ಬಿಹೆಚ್ಪಿ ಪವರ್ ಮತ್ತು 370 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 7 ಸ್ಪೀಡ್ ಡಿಎಸ್ಜಿ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್ಎಸ್245 ಸೆಡಾನ್ ಕೇವಲ 6.6 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.
ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿದೆ. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಬಹುನೀರಿಕ್ಷಿತ ಸ್ಕೋಡಾ ಆಕ್ಟೀವಿಯಾ ಆರ್ಎಸ್ ಕಾರು ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ. ಈ ಕಾರು ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್, ಬಿಎಂಡಬ್ಲ್ಯೂ 3 ಸೀರಿಸ್ ಮತ್ತು ಜಾಗ್ವಾರ್ ಎಕ್ಸ್ಇ ಕಾರುಗಳಿಗೆ ಪೈಪೋಟಿ ನೀಡಲಿದೆ.