ಎಲೆಕ್ಟ್ರಿಕ್ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ತೈಲ ಬೆಲೆಗಳ ಏರಿಕೆಯಿಂದ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲೂ ನಿಧಾನವಾಗಿ ಚೇತರಿಕೆ ಕಾಣುತ್ತಿದೆ.

ಇವಿ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ಆದರೆ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಹೊಸ ವಾಹನ ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) ಕಂಪನಿಯು ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಿದೆ.

ಇವಿ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ಬ್ಯಾಟರಿ ವಿನಿಯಮ ಕೇಂದ್ರಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

ಇವಿ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಖಾಲಿಯಾದ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಇದರಿಂದ ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿ ಖಾಲಿಯಾದರೂ ತಕ್ಷಣವೇ ಚಾರ್ಜ್ ಮಾಡಿಕೊಳ್ಳಲು ಇದು ಸಹಕಾರಿಯಾಗಿದೆ.

ಇವಿ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ಸದ್ಯ ಬೆಂಗಳೂರು, ಮುಂಬೈ, ದೆಹಲಿ ಮತ್ತು ಅಹಮದಾಬಾದ್ ನಗರಗಳಲ್ಲಿನ ಆಯ್ದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಬಂಕ್ ಆವರಣಗಳಲ್ಲೇ ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳನ್ನು ತೆರೆದಿದ್ದು, ಮುಂಬರುವ ದಿನಗಳಲ್ಲಿ ದೇಶದ ವಿವಿಧ ನಗರಗಳಲ್ಲಿ ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳು ಸ್ಥಾಪನೆಯಾಗಲಿವೆ.

ಇವಿ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ಮೊದಲ ಹಂತದಲ್ಲಿ ವಾಣಿಜ್ಯ ವಾಹನಗಳಿಗೆ ಮಾತ್ರವೇ ಬ್ಯಾಟರಿ ವಿನಿಮಯ ಸೌಲಭ್ಯವನ್ನು ತೆರೆಯಲಾಗಿದ್ದು, ವ್ಯಯಕ್ತಿಕ ಬಳಕೆಯ ಎಲೆಕ್ಟ್ರಿಕ್ ವಾಹನಗಳಿಗಾಗಿ ಶೀಘ್ರದಲ್ಲೇ ಪ್ರತ್ಯೇಕ ಸೌಲಭ್ಯವನ್ನು ತೆರೆಯುವ ಯೋಜನೆ ರೂಪಿಸಲಾಗಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಇವಿ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ಇನ್ನು ಮಹಾಮಾರಿ ವೈರಸ್‌ನಿಂದಾಗಿ ಲಾಕ್‌ಡೌನ್ ವಿಧಿಸಿದ್ದರಿಂದ ಆಟೋ ಉತ್ಪಾದನಾ ವಲಯ ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದು, ಈ ಹಿನ್ನಲೆಯಲ್ಲಿ ಆಟೋ ಉತ್ಪಾದನಾ ವಲಯಕ್ಕೆ ಕೇಂದ್ರ ಮತ್ತ ರಾಜ್ಯ ಸರ್ಕಾರಗಳು ಹಲವಾರು ವಿನಾಯ್ತಿ ಘೋಷಣೆ ಮಾಡಿವೆ.

ಇವಿ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ಆಟೋ ಉತ್ಪಾದನಾ ವಲಯಕ್ಕೆ ನೀಡಲಾಗಿರುವ ವಿನಾಯ್ತಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕಾಗಿ ನೀಡಲಾಗುವ ಫೇಮ್-2 ಯೋಜನೆಯ ಸಬ್ಸಡಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. 2019-20ರ ಆರ್ಥಿಕ ವರ್ಷದ ಫೇಮ್-2 ಸಬ್ಸಡಿ ಅವಧಿಯು ಮಾರ್ಚ್‌ಗೆ ಅಂತ್ಯಗೊಳ್ಳಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಲಾಕ್‌ಡೌನ್ ವಿಧಿಸಿದ್ದರಿಂದ ಇದೀಗ ಸಬ್ಸಡಿ ಅವಧಿಯನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಇವಿ ವಾಹನಗಳಿಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್

ಹೊಸ ಸುತ್ತೋಲೆ ಪ್ರಕಾರ, ವಿಸ್ತರಣೆಗೊಂಡ ಫೇಮ್-2 ಸಬ್ಸಡಿಯು ಜುಲೈ 1ರಿಂದ ಸೆಪ್ಟೆಂಬರ್ 30ರ ತನಕ ಅನ್ವಯವಾಗಲಿದ್ದು, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಆಟೋ ಕಂಪನಿಗಳಿಗೆ ಮತ್ತು ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೂ ಈ ಹೊಸ ಯೋಜನೆ ಅಡಿ ಸಬ್ಸಡಿ ಲಭ್ಯವಿರುತ್ತದೆ.

Most Read Articles

Kannada
English summary
Battery Swapping Facility Launched By Indian Oil For Electric Vehicles. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X