Just In
- 7 hrs ago
ಕೋವಿಡ್ ವ್ಯಾಕ್ಸಿನ್ ಸಾಗಾಣಿಕೆಗಾಗಿ ಹೊಸ ಮಾದರಿಯ ಟ್ರಕ್ ಸಿದ್ದಪಡಿಸಿದ ಭಾರತ್ ಬೆಂಝ್
- 8 hrs ago
ಮೊದಲ ವರ್ಷದ ಸಂಭ್ರಮ- ಟಾಟಾ ನೆಕ್ಸಾನ್ ಇವಿ ಖರೀದಿ ಮೇಲೆ ಹೊಸ ಆಫರ್
- 8 hrs ago
ಸ್ಥಗಿತವಾಯ್ತು ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳು
- 9 hrs ago
75 ಸಾವಿರ ಯುನಿಟ್ ಮಾರಾಟದೊಂದಿಗೆ 300 ಮಾರಾಟ ಮಳಿಗೆಗಳ ಗುರಿತಲುಪಿದ ಆಂಪಿಯರ್
Don't Miss!
- Lifestyle
"ಶನಿವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ "
- News
‘ನಕಲಿ ವ್ಯಾಕ್ಸಿನೇಷನ್’ ವಿಡಿಯೋ ವೈರಲ್: ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಸುಧಾಕರ್
- Education
Karnataka SSLC Exam 2021: ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾತಿ ಕಡ್ಡಾಯ ಇಲ್ಲ
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Movies
ಶಾರುಖ್ ಖಾನ್ ಬಂಗಲೆಯಲ್ಲಿ ವರುಣ್ ಧವನ್ ಮದುವೆ ಸಂಭ್ರಮ
- Sports
ಭಾರತ vs ಆಸೀಸ್: ಕಾಕತಾಳೀಯ, ಕುತೂಹಲಕಾರಿ ಅಂಕಿ-ಅಂಶಗಳು!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಮ್ಮ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ಗ್ರಿನ್ ಸಿಗ್ನಲ್
ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿಯು ಸನ್ ಮೊಬಿಲಿಟಿ ಜೊತೆಗೂಡಿ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಚಾರ್ಜಿಂಗ್ ಒದಗಿಸಲು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ಮಾಣ ಮಾಡುತ್ತಿವೆ.

ಬ್ಯಾಟರಿ ವಿನಿಯಮ ಕೇಂದ್ರಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಖಾಲಿಯಾದ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.

ಸದ್ಯ ಬೆಂಗಳೂರು, ಮುಂಬೈ, ದೆಹಲಿ ಮತ್ತು ಅಹಮದಾಬಾದ್ ನಗರಗಳಲ್ಲಿನ ಆಯ್ದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಬಂಕ್ ಆವರಣಗಳಲ್ಲೇ ಹೊಸ ಬ್ಯಾಟರಿ ವಿನಿಯಮ ಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಪ್ರಾಯೋಗಿಕವಾಗಿ ವಿವಿಧ ನಗರಗಳಲ್ಲಿ ತಲಾ ಒಂದೊಂದು ಬ್ಯಾಟರಿ ವಿನಿಯಮ ತೆರೆದಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿಯು ಶೀಘ್ರದಲ್ಲೇ ಬೆಂಗಳೂರು ಒಂದಲ್ಲೇ ನೂರು ಕೇಂದ್ರಗಳಿಗೆ ಚಾಲನೆ ನೀಡಲಿದೆ.

ಮೊದಲ ಹಂತದಲ್ಲಿ ವಾಣಿಜ್ಯ ವಾಹನಗಳಿಗೆ ಮಾತ್ರವೇ ಬ್ಯಾಟರಿ ವಿನಿಮಯ ಸೌಲಭ್ಯವನ್ನು ತೆರೆಯಲಾಗಿದ್ದು, ವ್ಯಯಕ್ತಿಕ ಬಳಕೆಯ ಎಲೆಕ್ಟ್ರಿಕ್ ವಾಹನಗಳಿಗಾಗಿ ಶೀಘ್ರದಲ್ಲೇ ಪ್ರತ್ಯೇಕ ಸೌಲಭ್ಯವನ್ನು ತೆರೆಯುವ ಯೋಜನೆ ರೂಪಿಸಲಾಗಿದೆ.

ಹೆಚ್ಚುತ್ತಿರುವ ಮಾಲಿನ್ಯಕ್ಕೆ ಪರಿಣಾಮಕಾರಿ ತಗ್ಗಿಸುವ ಸಂಬಂಧ ವಿವಿಧ ರಾಜ್ಯ ಸರ್ಕಾರವು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ನಮ್ಮ ಬೆಂಗಳೂರಿನಲ್ಲೂ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಸಂಬಂಧ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೆ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿ ಇ-ರಿಕ್ಷಾದಲ್ಲಿ ಪ್ರಯಾಣ ಮಾಡಿದ್ದಾರೆ.

ಎಲೆಕ್ಟ್ರಿಕ್ ರಿಕ್ಷಾದಲ್ಲಿ ಪ್ರಯಾಣ ಮಾಡುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರೆ ನೀಡಿದ ಬಿಎಸ್‌ವೈ ಅವರು ಇ ಮೊಲಿಬಿಟಿಯನ್ನು ಪರಿಣಾಮಕಾರಿ ಜಾರಿಗೊಳಿಸಲು ಸರ್ಕಾರ ಬದ್ದವಾಗಿದೆ ಎಂದಿದ್ದಾರೆ.

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಸ್ವಂತ ಬಳಕೆಗೆ ಮಾತ್ರ ಮಾರಾಟವಾಗುತ್ತಿದ್ದು, ವಾಣಿಜ್ಯ ಬಳಕೆಗೂ ಇವಿ ವಾಹನಗಳು ಮಾರಾಟ ಹೆಚ್ಚಳವಾಗಬೇಕೆಂಬ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಯಾವುದೇ ಪ್ರದೇಶಗಳಿಗೂ ಹೋದರೂ ಚಾರ್ಜಿಂಗ್ ಸೌಲಭ್ಯ ಲಭ್ಯವಾಗುವಂತೆ ಯೋಜನೆ ಸಿದ್ದಪಡಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದಕ್ಕಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಬಂಕ್ ಮತ್ತು ಖಾಸಗಿ ಕಂಪನಿಗಳ ಪೆಟ್ರೋಲ್ ಬಂಕ್‌ಗಳಲ್ಲಿ ಸ್ಥಳಾವಕಾಶಕ್ಕೆ ಅನುಗುಣವಾಗಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುವ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಮುಂದಿನ ಎರಡು ವರ್ಷಗಳಲ್ಲಿ ದೇಶದ್ಯಾಂತ 69 ಸಾವಿರ ಪೆಟ್ರೋಲ್ ಬಂಕ್‌ಗಳಲ್ಲಿ ಕನಿಷ್ಠ ಒಂದು ಚಾರ್ಜಿಂಗ್ ಪಾಯಿಂಟ್ ಹೊಂದಿರಲಿವೆ ಎಂದಿದ್ದಾರೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೆಚ್ಚಿನ ಮಟ್ಟದ ಚಾರ್ಜಿಂಗ್ ನಿಲ್ದಾಣಗಳು ಲಭ್ಯವಾದರಲ್ಲಿ ಇವಿ ವಾಹನಗಳ ಮೂಲಕ ದೀರ್ಘಾವಧಿಯ ಪ್ರಯಾಣಕ್ಕೆ ಅನುಕೂರಲಕವಾಗಲಿದ್ದು, ಮಾರ್ಗಮಧ್ಯದಲ್ಲೇ ಚಾರ್ಜಿಂಗ್ ಸಮಸ್ಯೆಯನ್ನು ನಿವಾರಿಸಲು ಹೊಸ ಯೋಜನೆ ಸಾಕಷ್ಟು ಸಹಕಾರಿಯಾಗಿದೆ.