ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳಿವು

2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳ ಪಟ್ಟಿ ಬಹಿರಂಗವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯ ಎರ್ಟಿಗಾ ಅಗ್ರಸ್ಥಾನವನ್ನು ಪಡೆದುಕೊಂಡಿದೆ. 2020ರ ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳ ಪಟ್ಟಿಯ ಮಾಹಿತಿ ಇಲ್ಲಿವೆ.

ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳಿವು

2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ಕಳೆದ ತಿಂಗಳಿನಲ್ಲಿ ಜನಪ್ರಿಯ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯ 9,557 ಯುನಿಟ್‌ಗಳು ಮಾರಾಟಗೊಳಿಸಿವೆ. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮಾದರಿಯ 7,537 ಯುನಿಟ್‌ಗಳು ಮಾರಾಟವಾಗಿತ್ತು. ಕಳೆದ ವರ್ಷದ ನವೆಂಬರ್ ತಿಂಗಳ ಮಾರಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.27 ಬೆಳವಣಿಗೆಯನ್ನು ಸಾಧಿಸಿದೆ.

ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳಿವು

2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳ ಪಟ್ಟಿಯಲ್ಲಿ ಮಹೀಂದ್ರಾ ಬೊಲೆರೊ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಮಹೀಂದ್ರಾ ಬೊಲೆರೊ ಎಂಪಿವಿಯ 6,055 ಯುನಿಟ್‌ಗಳು ಮಾರಾಟವಾಗಿವೆ. ಮಹೀಂದ್ರಾ ಬೊಲೆರೊ ಎಂಪಿವಿಯು ಮಾರಾಟದಲ್ಲಿ ಶೇ.18 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳಿವು

ರೆನಾಲ್ಟ್ ಟ್ರೈಬರ್ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಮಾದರಿಯಾಗಿದೆ. 2020ರ ನವೆಂಬರ್ ತಿಂಗಳಲ್ಲಿ ರೆನಾಲ್ಟ್ ಟ್ರೈಬರ್ 4,809 ಯುನಿಟ್‌ಗಳು ಮಾರಾಟವಾಗಿವೆ. ಆದರೆ ಕಳೆದ ವರ್ಷದ ನವೆಂಬರ್ ತಿಂಗಳ ಮಾರಾಟವನ್ನು ಹೋಲಿಸಿದರೆ ಈ ಬಾರಿ ಶೇ.21 ರಷ್ಟು ಕುಸಿತವನ್ನು ಕಂಡಿದೆ.

ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳಿವು

2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಎಕ್ಸ್‌ಎಲ್ 6 ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. 2020ರ ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಎಕ್ಸ್‌ಎಲ್ 6 ಮಾದರಿಯ 3,388 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ನವೆಂಬರ್ ತಿಂಗಳ ಮಾರಾಟವನ್ನು ಹೋಲಿಸಿದರೆ ಈ ಬಾರಿ ಶೇ. 54 ರಷ್ಟು ಬೆಳವಣಿಗೆಯಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳಿವು

ಟೊಯೊಟಾ ಇನೊವಾ ಕ್ರಿಸ್ಟಾ 2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ. 2020ರ ನವೆಂಬರ್ ತಿಂಗಳಲ್ಲಿ ಟೊಯೊಟಾ ಇನೊವಾ ಕ್ರಿಸ್ಟಾ ಎಂಪಿವಿಯ 2,192 ಯುನಿಟ್‌ಗಳು ಮಾರಾಟವಾಗಿವೆ. ಆದರೆ ಕಳೆದ ವರ್ಷದ ನವೆಂಬರ್ ತಿಂಗಳ ಮಾರಾಟವನ್ನು ಹೋಲಿಸಿದರೆ ಈ ಬಾರಿ ಶೇ.36 ರಷ್ಟು ಕುಸಿತವನ್ನು ಕಂಡಿದೆ.

Rank Model Nov'20 Nov'19 Growth (%)
1 Maruti Ertiga 9,557 7,537 27
2 Mahindra Bolero 6,055 5,127 18
3 Renault Triber 4,809 6,071 -21
4 Maruti XL6 3,388 2,195 54
5 Toyota Innova Crysta 2,192 3,414 -36
6 Kia Carnival 400 0 -
7 Mahindra Marazzo 226 1,007 -78
8 Toyota Vellfire 23 8 188
9 Datsun Go+ 17 115 -85
10 Mahindra Xylo - 87 -
11 Tata Hexa - 126 -
12 Honda BR-V - 151 -
13 Renault Lodgy - 6 -

Source: Autopunditz.com

ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳಿವು

2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳ ಪಟ್ಟಿಯಲ್ಲಿ ಟೊಯೊಟಾ ಇನ್ನೊವಾದ ಬಳಿಕ ಪ್ರೀಮಿಯಂ ಕಿಯಾ ಕಾರ್ನಿವಲ್ ನಂತರದ ಸ್ಥಾನವನ್ನು ಪಡೆದುಕೊಂದಿದೆ. 2020ರ ನವೆಂಬರ್ ತಿಂಗಳಲ್ಲಿ ಕಿಯಾ ಕಾರ್ನಿವಲ್ ಎಂಪಿವಿಯ 400 ಯುನಿಟ್‌ಗಳು ಮಾರಾಟವಾಗಿವೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳಿವು

ಕಿಯಾ ಕಾರ್ನಿವಲ್ ಎಂಪಿವಿ ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಮರಾಜೋವನ್ನು ಮಾರಾಟದಲ್ಲಿ ಹಿಂದಿಕ್ಕಿದೆ. 2020ರ ನವೆಂಬರ್ ತಿಂಗಳಲ್ಲಿ ಮಹೀಂದ್ರಾ ಮರಾಜೋ ಎಂಪಿವಿಯ 226 ಯುನಿಟ್‌ಗಳು ಮಾರಾಟವಾಗಿವೆ. ಆದರೆ ಕಳೆದ ವರ್ಷದ ನವೆಂಬರ್ ತಿಂಗಳ ಮಾರಾಟವನ್ನು ಹೋಲಿಸಿದರೆ ಈ ಬಾರಿ ಶೇ.78 ರಷ್ಟು ಕುಸಿತವನ್ನು ಕಂಡಿದೆ.

ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳಿವು

2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಎಂಪಿವಿಗಳ ಪಟ್ಟಿಯಲ್ಲಿ ಕ್ರಮವಾಗಿ ಟೊಯೊಟಾ ವೆಲ್‌ಫೈರ್ ಮತ್ತು ದಟ್ಸನ್ ಗೋ ಎಂಪಿವಿಗಳು ನಂತರದ ಸ್ಥಾನಗಳನ್ನು ಪಡೆದುಕೊಂಡಿದೆ. ಟೊಯೊಟಾ ವೆಲ್‌ಫೈರ್ ವೆಲ್‌ಫೈರ್ ಯುನಿಟ್ ಮಾರಾಟವಾಗಿದ್ದರೆ, ದಟ್ಸನ್ ಗೋ ಎಂಪಿವಿಯ 17 ಯುನಿಟ್ ಮಾರಾಟವಾಗಿವೆ.

Most Read Articles

Kannada
English summary
Best-Selling MPV In India For November 2020. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X