Just In
Don't Miss!
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು
2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಬಹಿರಂಗವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2020ರ ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಇಲ್ಲಿವೆ.

ಮಾರುತಿ ಸುಜುಕಿ ಸ್ವಿಫ್ಟ್
2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಅಗ್ರಸ್ಥಾನವನ್ನು ಪಡೆದುಕೊಂಡಿದೆ. 2020ರ ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ 18,498 ಯುನಿಟ್‌ಗಳು ಮಾರಾಟವಾಗಿವೆ. ಆದರೆ 2019ರ ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ 24,589 ಯುನಿಟ್‌ಗಳು ಮಾರಾಟವಾಗಿತ್ತು. 2020ರ ಅಕ್ಟೋಬರ್ ತಿಂಗಳ ಮಾರಟಕ್ಕೆ ಹೋಲಿಸಿದರೆ ನವೆಂಬರ್ ತಿಂಗಳ ಮಾರಾಟದಲ್ಲಿ ಮಾರುತಿ ಸ್ವಿಪ್ಟ್ ಕಾರು ಕುಸಿತವನ್ನು ಕಂಡಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಇತರ ಕಾರುಗಳನ್ನು ಹಿಂದಿಕ್ಕಿ ನವೆಂಬರ್ ತಿಂಗಳ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ಮಾರುತಿ ಸುಜುಕಿ ಬಲೆನೊ
ಮಾರುತಿ ಸುಜುಕಿ ಬಲೆನೊ ಕಾರು ಸತತವಾಗಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ 17,872 ಯುನಿಟ್‌ಗಳು ಮಾರಾಟವಾಗಿವೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅನ್ನು ನೆಕ್ಸಾ ಡೀಲರ್ಸ್‌ಗಳ ಮೂಲಕ ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ.
MOST READ: ಕ್ರ್ಯಾಶ್ ಟೆಸ್ಟ್‌ನಲ್ಲಿ ಶೂನ್ಯ ಸ್ಟಾರ್ ರೇಟಿಂಗ್ ಪಡೆದ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ ಕಾರು

ಮಾರುತಿ ಸುಜುಕಿ ವ್ಯಾಗನ್ಆರ್
ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಮಾರುತಿ ಸುಜುಕಿಯ ವ್ಯಾಗನ್ಆರ್ ಕಾರು ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. 2020ರ ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ 16,256 ಯುನಿಟ್‌ಗಳು ಮಾರಾಟವಾಗಿವೆ.

ಮಾರುತಿ ಸುಜುಕಿ ಆಲ್ಟೋ
ಮಾರುತಿ ಸುಜುಕಿ ಆಲ್ಟೋ ಮಾದರಿಯು ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಆಗಿದೆ. ಕೆಲವು ತಿಂಗಳ ಕಾಲ ಆಲ್ಟೋ ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುವ ಹ್ಯಾಚ್‌ಬ್ಯಾಕ್ ಆಗಿತ್ತು. ಆದರೆ ಇದೀಗ ಮಾರಾಟದ ಪ್ರಮಾಣ ಸಣ್ಣ ಮಟ್ಟದಲ್ಲಿ ಇಳಿಮುಖವಾಗಿದೆ. ಕಳೆದ ತಿಂಗಳು ಆಲ್ಟೋ 15,321 ಯುನಿಟ್‌ಗಳು ಮಾರಾಟವಾಗಿವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರುತಿ ಸುಜುಕಿ ಡಿಜೈರ್
ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಟಾಪ್ -5 ಸ್ಥಾನಗಳನ್ನು ಮಾರುತಿ ಸುಜುಕಿ ಆಕ್ರಮಿಸಿಕೊಂಡಿದೆ. ಈ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಮಾರುತಿ ಡಿಜೈರ್ ಪಡೆದುಕೊಂಡಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಡಿಜೈರ್ 13,536 ಯುನಿಟ್‌ಗಳು ಮಾರಾಟವಾಗಿವೆ.

ಹ್ಯುಂಡೈ ಕ್ರೆಟಾ
ಹ್ಯುಂಡೈ ಕ್ರೆಟಾ ಮಿಡ್ ಎಸ್‍ಯುವಿಯು ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಆರನೇ ಸ್ಥಾನವನ್ನು ಪಡೆದುಕೊಂಡಿದೆ. ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಯಾದ ಹೊಸ ಹ್ಯುಂಡೈ ಕ್ರೆಟಾ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಹ್ಯುಂಡೈ ಕ್ರೆಟಾ 12,017 ಯುನಿಟ್‌ಗಳು ಮಾರಾಟವಾಗಿವೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಕಿಯಾ ಸೊನೆಟ್
ಕಿಯಾ ಸೊನೆಟ್ ಮಾರುಕಟ್ಟೆಯಲ್ಲಿ ಅತ್ಯುತ್ತಮ ಕಂಪ್ಯಾಕ್ಟ್-ಎಸ್‌ಯುವಿ ಆಗಿ ಮಾರ್ಪಟ್ಟಿದೆ ಮತ್ತು ಈ ಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಸ್ಥಾನವನ್ನು ಪಡೆದುಕೊಂಡಿದೆ. ಈ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಬ್ರ್ಯಾಂಡ್‌ನ ಮೊದಲ ಕಾಂಪ್ಯಾಕ್ಟ್-ಎಸ್‌ಯುವಿಯಾಗಿದೆ. 2020ರ ನವೆಂಬರ್ ತಿಂಗಳಲ್ಲಿ ಕಿಯಾ ಸೊನೆಟ್ 11,417 ಯುನಿಟ್‌ಗಳು ಮಾರಾಟವಾಗಿವೆ.
Rank | Model | Nov-20 | Nov-19 | Growth (%) |
1 | Maruti Swift | 18,498 | 19,314 | -4 |
2 | Maruti Baleno | 17,872 | 18,047 | -1 |
3 | Maruti WagonR | 16,256 | 14,650 | 11 |
4 | Maruti Alto | 15,321 | 15,086 | 2 |
5 | Maruti Dzire | 13,536 | 17,659 | -23 |
6 | Hyundai Creta | 12,017 | 6,684 | 80 |
7 | Kia Sonet | 11,417 | - | - |
8 | Maruti Eeco | 11,183 | 10,162 | 10 |
9 | Hyundai Grand i10 | 10,936 | 10,186 | 7 |
10 | Maruti Ertiga | 9,557 | 7,537 | 27 |

ಮಾರುತಿ ಸುಜುಕಿ ಇಕೋ ಮತ್ತು ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್
ಇನ್ನು 2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಎಂಟನೇ ಮತ್ತು ಒಂಬತ್ತನೇ ಸ್ಥಾನವನ್ನು ಕ್ರಮವಾಗಿ ಮಾರುತಿ ಸುಜುಕಿ ಕಂಪನಿಯ ಇಕೋ ಮತ್ತು ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಪಡೆದುಕೊಂಡಿದೆ. ಕಳೆದ ತಿಂಗಳಲ್ಲಿ ಇಕೋ 11,183 ಯುನಿಟ್‌ಗಳು ಮಾರಾಟವಾಗಿದ್ದರೆ, ಹ್ಯುಂಡೈ ಗ್ರ್ಯಾಂಡ್ ಐ10 ಮಾದರಿಯ 10,936 ಯುನಿಟ್‌ಗಳು ಮಾರಾಟವಾಗಿವೆ.

ಮಾರುತಿ ಸುಜುಕಿ ಎರ್ಟಿಗಾ
2020ರ ನವೆಂಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಅಂತಿಮ ಸ್ಥಾನವನ್ನು ಮಾರುತಿ ಸುಜುಕಿ ಕಂಪನಿಯ ಎರ್ಟಿಗಾ ಎಂಪಿವಿ ಪಡೆದುಕೊಂಡಿದೆ. 2020ರ ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಎರ್ಟಿಗಾ 9,557 ಯುನಿಟ್‌ಗಳು ಮಾರಾಟವಾಗಿವೆ. ಇದು ದೇಶದಲ್ಲಿ ಹೆಚ್ಚು ಮಾರಾಟವಾದ ಎಂಪಿವಿ ಆಗಿದೆ.