ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

2020ರ ಅಕ್ಟೋಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಬಹಿರಂಗವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2020ರ ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಇಲ್ಲಿವೆ.

ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಸ್ವಿಫ್ಟ್

2020ರ ಅಕ್ಟೋಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಅಗ್ರಸ್ಥಾನವನ್ನು ಪಡೆದುಕೊಂಡಿದೆ. 2020ರ ಅಕ್ಟೋಬರ್ ತಿಂಗಳಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ 24,589 ಯುನಿಟ್‌ಗಳು ಮಾರಾಟವಾಗಿವೆ. ಇನ್ನು 2020ರ ಸೆಪ್ಟೆಂಬರ್‌ ತಿಂಗಳಿನಲ್ಲಿ 22,643 ಯುನಿಟ್‌ಗಳನ್ನು ಮಾರಾಟವಾಗಿವೆ. ಮಾರುತಿ ಬಾಲೆನೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಗ್ಲಾಂಝಾ, ಫೋಕ್ಸ್ ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಬಲೆನೊ

ಮಾರುತಿ ಸುಜುಕಿ ಬಲೆನೊ ಕಾರು ಸತತವಾಗಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ 21,971 ಯುನಿಟ್‌ಗಳು ಮಾರಾಟವಾಗಿವೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅನ್ನು ನೆಕ್ಸಾ ಡೀಲರುಗಳ ಮೂಲಕ ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ವ್ಯಾಗನ್ಆರ್

ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಮಾರುತಿ ಸುಜುಕಿಯ ವ್ಯಾಗನ್ಆರ್ ಕಾರು ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. 2020ರ ಅಕ್ಟೋಬರ್ ತಿಂಗಳಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ 18,703 ಯುನಿಟ್‌ಗಳು ಮಾರಾಟವಾಗಿವೆ. ಹಿಂದಿನ ತಿಂಗಳ ಮಾರಾಟವನ್ನು ಹೋಲಿಸಿದರೆ ತನ್ನದೇ ಕಿರಿಯ ಸಹೋದರ ಆಲ್ಟೋವನ್ನು ಹಿಂದಿಕ್ಕಿ ಮೂರನೇ ಸ್ಥಾನವನ್ನು ಪಡೆದಿದಿದೆ.

ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಆಲ್ಟೋ

ಮಾರುತಿ ಸುಜುಕಿ ಆಲ್ಟೋ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಆಗಿದೆ. ಕೆಲವು ತಿಂಗಳ ಕಾಲ ಆಲ್ಟೋ ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುವ ಹ್ಯಾಚ್‌ಬ್ಯಾಕ್ ಆಗಿತ್ತು, ಆದರೆ ಇದೀಗ ಮಾರಾಟದ ಪ್ರಮಾಣ ಸಣ್ಣ ಮಟ್ಟದ ಇಳಿಮುಖವಾಗಿದೆ. ಕಳೆದ ತಿಂಗಳು ಆಲ್ಟೋ 17,850 ಯುನಿಟ್‌ಗಳು ಮಾರಾಟವಾಗಿವೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಡಿಜೈರ್

ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಟಾಪ್ -5 ಸ್ಥಾನಗಳನ್ನು ಮಾರುತಿ ಸುಜುಕಿ ಆಕ್ರಮಿಸಿಕೊಂಡಿದೆ. ಈ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಮಾರುತಿ ಡಿಜೈರ್ ಪಡೆದುಕೊಂಡಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಡಿಜೈರ್ 17,675 ಯುನಿಟ್‌ಗಳು ಮಾರಾಟವಾಗಿವೆ,

ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹ್ಯುಂಡೈ ಕ್ರೆಟಾ

ಹ್ಯುಂಡೈ ಕ್ರೆಟಾ ಮಿಡ್ ಎಸ್‍ಯುವಿಯು ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಆರನೇ ಸ್ಥಾನವನ್ನು ಪಡೆದುಕೊಂಡಿದೆ. ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಯಾದ ಹೊಸ ಹ್ಯುಂಡೈ ಕ್ರೆಟಾ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಹ್ಯುಂಡೈ ಕ್ರೆಟಾ 14,023 ಯುನಿಟ್‌ಗಳು ಮಾರಾಟವಾಗಿವೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹ್ಯುಂಡೈ ಐ10 ಗ್ರ್ಯಾಂಡ್

ಹ್ಯುಂಡೈ ಕಂಪನಿಯ ಐ10 ಗ್ರ್ಯಾಂಡ್/ನಿಯೊಸ್ ಈ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಹ್ಯುಂಡೈ ಐ10 ಹ್ಯಾಚ್‌ಬ್ಯಾಕ್ ಗ್ರ್ಯಾಂಡ್ ಮತ್ತು ನಿಯೊಸ್ ಎಂಬ ಎರಡು ಮಾದರಿಗಳನ್ನು ಒಳಗೊಂಡಿದೆ, ಕಳೆದ ತಿಂಗಳಲ್ಲಿ ಈ ಮಾದರಿಗಳ 14,003 ಯುನಿಟ್‌ಗಳು ಮಾರಾಟವಾಗಿವೆ,

ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಇಕೋ ಮತ್ತು ಬ್ರೆಝಾ

ಇನ್ನು ಅಕ್ಟೋಬರ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಎಂಟನೇ ಮತ್ತು ಒಂಬತ್ತನೇ ಸ್ಥಾನವನ್ನು ಕ್ರಮವಾಗಿ ಮಾರುತಿ ಸುಜುಕಿ ಕಂಪನಿಯ ಇಕೋ ಮತ್ತು ವಿಟಾರಾ ಬ್ರೆಝಾ ಪಡೆದುಕೊಂಡಿದೆ. ಕಳೆದ ತಿಂಗಳಲ್ಲಿ ಇಕೊ 13,309 ಯುನಿಟ್‌ಗಳು ಮಾರಾಟವಾಗಿದ್ದರೆ, ಬ್ರೆಝಾ ಎಸ್‍ಯುವಿಯ 12,087 ಯುನಿಟ್‌ಗಳು ಮಾರಾಟವಾಗಿವೆ.

ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಕಿಯಾ ಸೊನೆಟ್

ಇನ್ನು ಈ ಪಟ್ಟಿಯಲ್ಲಿ ಅಂತಿಮ ಸ್ಥಾನವನ್ನು ಕಿಯಾ ಸೊನೆಟ್ ಪಡೆದುಕೊಂಡಿದೆ. .ಈ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನ ಮೊದಲ ಕಾಂಪ್ಯಾಕ್ಟ್-ಎಸ್‌ಯುವಿಯಾಗಿದೆ. 2020ರ ಅಕ್ಟೋಬರ್ ತಿಂಗಳಲ್ಲಿ ಕಿಯಾ ಸೊನೆಟ್ 111,721 ಯುನಿಟ್‌ಗಳು ಮಾರಾಟವಾಗಿವೆ.

Article Published On: Wednesday, November 4, 2020, 16:48 [IST]
English summary
Best-Selling Cars In India For October 2020. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+