Just In
- 1 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅತಿ ಹೆಚ್ಚು ಬೇಡಿಕೆಯಲ್ಲಿರುವ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಿವು..!
ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ವಿವಿಧ ಕಾರು ಕಂಪನಿಗಳು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಅತಿ ಹೆಚ್ಚು ಬೇಡಿಕೆಯಲ್ಲಿರುವ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾಹಿತಿ ಇಲ್ಲಿದೆ.

ದೇಶಿಯ ಮಾರುಕಟ್ಟೆಯಲ್ಲಿ ಕೋವಿಡ್ ಪರಿಣಾಮ ಸ್ವಂತ ವಾಹನಗಳ ಬಳಕೆಯಲ್ಲಿ ಸಾಕಷ್ಟು ಹೆಚ್ಚಳವಾಗಿದ್ದು, ಬಜೆಟ್ ಮಾದರಿಯ ಕಾರು ಮಾರಾಟದಲ್ಲಿ ಸಾಕಷ್ಟು ಬೇಡಿಕೆ ಕಂಡುಬರುತ್ತಿದೆ. ಅದರಲ್ಲೂ ನಾಲ್ಕು ಮೀಟರ್ ಉದ್ದಳತೆಯ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗವು ತೀವ್ರ ಬೆಳವಣಿಗೆ ಸಾಧಿಸುತ್ತಿದ್ದು, ಸದ್ಯ ಅತಿ ಹೆಚ್ಚು ಬೇಡಿಕೆಯಲ್ಲಿರುವ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳ ಮಾಹಿತಿಯನ್ನು ಇಲ್ಲಿ ಚರ್ಚಿಸಲಾಗಿದೆ.

ನಿಸ್ಸಾನ್ ಮ್ಯಾಗ್ನೈಟ್
ನಿಸ್ಸಾನ್ ಇಂಡಿಯಾ ಕಂಪನಿಯು ಕಳೆದ ವಾರವಷ್ಟೇ ತನ್ನ ಹೊಚ್ಚ ಹೊಸ ಕಾರು ಮಾದರಿಯಾದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಿದ್ದು, 1.0-ಲೀಟರ್ ಎನ್ಎ ಪೆಟ್ರೋಲ್, 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆ ಮೊದಲ ವಾರದಲ್ಲೇ 5 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

ಬಜೆಟ್ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಹೊಂದಿದೆ.

ಹ್ಯುಂಡೈ ವೆನ್ಯೂ
ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿ ಕಾರು ಮಾದರಿಗಳಲ್ಲಿ ಹ್ಯುಂಡೈ ವೆನ್ಯೂ ಕೂಡಾ ಪ್ರಮುಖವಾಗಿದ್ದು, 1.2-ಲೀಟರ್ ಕಪ್ಪಾ ಪೆಟ್ರೋಲ್, 1.5-ಲೀಟರ್ ಡೀಸೆಲ್ ಎಂಜಿನ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.

ವೆನ್ಯೂ ಕಾರು 33 ಫೀಚರ್ಸ್‌ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಸಹ ಹೊಂದಿದ್ದು, ಹೊಸ ಕಾರಿಗೆ ಗರಿಷ್ಠ ಭದ್ರತೆಯನ್ನು ನೀಡುತ್ತದೆ. ಹಾಗೆಯೇ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿದ್ದು, ವೆನ್ಯೂ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಆರಂಭಿಕವಾಗಿ ರೂ. 6.75 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.65 ಲಕ್ಷ ಬೆಲೆ ಪಡೆದುಕೊಂಡಿದೆ.

ಟಾಟಾ ನೆಕ್ಸಾನ್
ಬಿಎಸ್-6 ಎಮಿಷನ್ ನಿಮಮ ಅನುಸಾರವಾಗಿ ಉನ್ನತೀಕರಣಗೊಳ್ಳುವ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಅತ್ಯುತ್ತಮ ಫೀಚರ್ಸ್ ಹೊಂದಿದೆ.

ಪ್ರಯಾಣಿಕರ ಸುರಕ್ಷತೆಗಾಗಿ ಗರಿಷ್ಠ ಫೀಚರ್ಸ್ ಹೊಂದಿರುವ ನೆಕ್ಸಾನ್ ಕಾರು ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. ರೂ. 6.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.70 ಲಕ್ಷ ಬೆಲೆ ಹೊಂದಿದೆ.

ಮಾರುತಿ ವಿಟಾರಾ ಬ್ರೆಝಾ
ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಭರ್ಜರಿ ಯಶಸ್ಸು ಕಂಡಿರುವ ಮಾರುತಿ ಸುಜುಕಿ ಬ್ರೆಝಾ ಆವೃತ್ತಿಯು ಬಿಎಸ್-6 ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನಲ್ಲಿ ಈ ಹಿಂದಿನ 1.3-ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಮಾದರಿಯನ್ನು ಪರಿಚಯಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಹೊಂದಿರುವ 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು ಅತ್ಯುತ್ತಮ ಪರ್ಫಾಮೆನ್ಸ್ ಜೊತೆಗೆ ಅಧಿಕ ಇಂಧನ ದಕ್ಷತೆ ಹೊಂದಿದ್ದು, ಹೊಸ ಕಾರನ್ನು ಎಕ್ಸ್‌ಶೋರಂ ಪ್ರಕಾರ ಆರಂಭಿಕವಾಗಿ ರೂ.7.34 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯನ್ನು ರೂ. 11.41 ಲಕ್ಷಕ್ಕೆ ಮಾರಾಟ ಮಾಡಲಾಗುತ್ತಿದೆ.

ಕಿಯಾ ಸೊನೆಟ್
ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದತ್ತ ಲಗ್ಗೆಯಿಡುತ್ತಿರುವ ಕಿಯಾ ಮೋಟಾರ್ಸ್ ಹೊಚ್ಚ ಹೊಸ ಸೊನೆಟ್ ಕಾರು ಮಾದರಿಯು ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 70 ಸಾವಿರ ಯುನಿಟ್‌ಗೆ ಬುಕ್ಕಿಂಗ್ ಪಡೆದುಕೊಂಡಿದೆ. ಸೆಪ್ಟೆಂಬರ್ 18ರಂದು ಬಿಡುಗಡೆಗೊಂಡಿದ್ದ ಸೊನೆಟ್ ಕಾರು ಆಕರ್ಷಕ ಬೆಲೆಯೊಂದಿಗೆ ವಿವಿಧ ವೆರಿಯೆಂಟ್‌ಗಳನ್ನು ಹೊಂದಿದ್ದು, ಪ್ರೀಮಿಯಂ ಫೀಚರ್ಸ್‌ಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿವೆ.

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ300
ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ಅತಿ ಹೆಚ್ಚು ಸೇಫ್ಟಿ ಫೀಚರ್ಸ್ ಹೊಂದಿರುವ ಎಕ್ಸ್‌ಯುವಿ300 ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಅತ್ಯುತ್ತಮ ಬೇಡಿಕೆ ಹೊಂದಿದೆ.

ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12.29 ಲಕ್ಷ ಬೆಲೆ ಹೊಂದಿದ್ದು, ಹೊಸ ಮಾದರಿಯಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ ಶೀಘ್ರದಲ್ಲೇ ಟರ್ಬೋ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದೆ.

ಫೋರ್ಡ್ ಇಕೋಸ್ಪೋರ್ಟ್
ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ತನ್ನದೆ ಜನಪ್ರಿಯತೆ ಹೊಂದಿರುವ ಫೋರ್ಡ್ ಇಕೋಸ್ಪೋರ್ಟ್ ಮಾದರಿಯು ಬೇಡಿಕೆಯಲ್ಲಿ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹಿಂದೆ ಬಿದ್ದಿದ್ದರೂ ತಾಂತ್ರಿಕವಾಗಿ ಅತ್ಯುತ್ತಮ ಕಾರು ಮಾದರಿಯಾಗಿದೆ.

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.8.19 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.11.73 ಲಕ್ಷಕ್ಕೆ ಮಾರಾಟಗೊಳ್ಳುತ್ತಿದ್ದು, ಇಕೋಸ್ಪೋರ್ಟ್ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.