ಭಾರತದಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ

ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಮಾದರಿಯನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಿದ್ದು, ಹೊಸ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.39.3 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 41.4 ಲಕ್ಷ ಬೆಲೆ ಹೊಂದಿದೆ.

ಭಾರತದಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ

2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ 220ಡಿ ಸ್ಪೋರ್ಟ್ ಮತ್ತು 220ಡಿ ಎಂ ಸ್ಪೋರ್ಟ್ ವೆರಿಯೆಂಟ್‌ಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಬಿಎಂಡಬ್ಲ್ಯು ಭಾರತದಲ್ಲೇ ಸಂಪೂರ್ಣವಾಗಿ ಉತ್ಪಾದನೆ ಮಾಡಲಾಗುತ್ತಿರುವ 11ನೇ ಕಾರು ಮಾದರಿಯಾಗಿದೆ. 2 ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯು ಬಿಎಂಡಬ್ಲ್ಯು ಉತ್ಪಾದನೆಯ ಎಂಟ್ರಿ ಲೆವಲ್ ಸೆಡಾನ್ ಮಾದರಿಯಾಗಿದ್ದು, ಬಿಎಂಡಬ್ಲ್ಯು ಕಂಪನಿಯ ಎಫ್ಎಎಆರ್ ಪ್ಲ್ಯಾಟ್‌ಫಾರ್ಮ್ ಅಡಿ ನಿರ್ಮಾಣಗೊಂಡಿದೆ.

ಭಾರತದಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ

2 ಸೀರಿಸ್ ಗ್ರ್ಯಾನ್ ಕೂಪೆ 220ಡಿ ಸ್ಪೋರ್ಟ್ ಮಾದರಿಯು ರೂ.39.3 ಲಕ್ಷಕ್ಕೆ ಮತ್ತು 220ಡಿ ಎಂ ಸ್ಪೋರ್ಟ್ ಮಾದರಿಯು ರೂ. 41.4 ಲಕ್ಷ ಬೆಲೆ ಹೊಂದಿದ್ದು, ಮೊದಲ ನೂರು ಯುನಿಟ್ ಖರೀದಿಸುವ ಗ್ರಾಹಕರಿಗೆ ಮಾತ್ರ ಈ ಬೆಲೆ ಅನ್ವಯಿಸಲಿದೆ.

ಭಾರತದಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ

ನಿಗದಿತ ಯುನಿಟ್ ಮಾರಾಟದ ನಂತರ ಕಾರಿನ ಬೆಲೆ ಮತ್ತಷ್ಟು ಹೆಚ್ಚಳವಾಗಲಿದ್ದು, ಮೊದಲ ನೂರು ಯುನಿಟ್ ಖರೀದಿಸುವ ಗ್ರಾಹಕರಿಗೆ ಆಫರ್ ನೀಡಲಾಗಿದೆ. ಜೊತೆಗೆ ಹೊಸ ಕಾರು ಖರೀದಿಗೆ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಇಂದಿನಿಂದಲೇ ಕಾರು ವಿತರಣೆಯು ಆರಂಭವಾಗಲಿದ್ದು, ಹೊಸ ಕಾರು 8 ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯಿಂದ ಹಲವಾರು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಂಡಿದೆ.

ಭಾರತದಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ

2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಮಾದರಿಯಲ್ಲಿ ಆಕರ್ಷಕವಾದ ಗ್ರಿಲ್, ಫುಲ್ ಎಲ್ಇಡಿ ಹೆಡ್‌ಲ್ಯಾಂಪ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್‌ಎಸ್, ಸ್ಟೈಲಿಷ್ ಆಗಿರುವ ಅಲಾಯ್ ವೀಲ್ಹ್, ವಿಸ್ತರಿತ ಎಲ್ಇಡಿ ಟೈಲ್‌ಲೈಟ್ಸ್, 8 ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯ ಇಳಿಜಾರಿನಂತಿರುವ ರೂಫ್ ಲೈನ್ ಸೌಲಭ್ಯವು ಕೂಪೆ ವೈಶಿಷ್ಟ್ಯತೆಗೆ ಪೂರಕವಾಗಿವೆ.

ಭಾರತದಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ

ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳನ್ನು ಬಳಕೆ ಮಾಡಲಾಗಿದ್ದು, ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಇನ್ಪೋಟೈನ್‌ಮೆಂಟ್ ಕ್ಲಸ್ಟರ್, ರಿಯರ್ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಚಾರ್ಜರ್ ಮತ್ತು ಆ್ಯಂಬಿಯೆಂಟ್ ಲೈಟಿಂಗ್ಸ್ ಸೌಲಭ್ಯಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಭಾರತದಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್

2 ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯಲ್ಲಿ ಸದ್ಯಕ್ಕೆ 2.0-ಲೀಟರ್ ಟ್ವಿನ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರ ನೀಡಲಾಗುತ್ತಿದ್ದು, ಹೊಸ ಎಂಜಿನ್ ಮಾದರಿಯು ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಯೊಂದಿಗೆ 190-ಬಿಎಚ್‌ಪಿ ಮತ್ತು 400-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಭಾರತದಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ

ಹೊಸ ಕಾರು ಮಾದರಿಯಲ್ಲಿ ಶೀಘ್ರದಲ್ಲೇ ಟರ್ಬೋ ಪೆಟ್ರೋಲ್ ಮಾದರಿಯನ್ನು ಸಹ ಬಿಡುಗಡೆ ಮಾಡುವುದಾಗಿ ಖಚಿತಪಡಿಸಿರುವ ಬಿಎಂಡಬ್ಲ್ಯು ಕಂಪನಿಯು ಹೊಸ ಎಂಜಿನ್ ಮೂಲಕ ಐಷಾರಾಮಿ ಕಾರು ಖರೀದಿದಾರರನ್ನು ಸೆಳೆಯಲಿದ್ದು, ಹೊಸ ಎಂಜಿನ್ ಮಾದರಿಯು 7.5 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗ ಸಾಧಿಸುತ್ತದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಬಿಡುಗಡೆ

ಈ ಮೂಲಕ ಮಾರುಕಟ್ಟೆಯಲ್ಲಿರುವ ಜನಪ್ರಿಯ ಮರ್ಸಿಡಿಸ್ ಬೆಂಝ್ ಎ ಕ್ಲಾಸ್ ಸೆಡಾನ್ ಮಾದರಿಗೆ ಭರ್ಜರಿ ಪೈಟೋಟಿ ನೀಡಲಿದ್ದು, ಹೊಸ ಕಾರು ಚೆನ್ನೈನಲ್ಲಿರುವ ಘಟಕದಲ್ಲೇ ಪೂರ್ಣ ಪ್ರಮಾಣದಲ್ಲಿ ನಿರ್ಮಾಣಗೊಳ್ಳುವ ಮೇಡ್ ಇನ್ ಇಂಡಿಯಾ ಕಾರು ಮಾದರಿಯಾಗಿ ಹೊರಹೊಮ್ಮಿದೆ.

More from DriveSpark

Article Published On: Thursday, October 15, 2020, 12:33 [IST]
English summary
BMW 2 Series Gran Coupe Launched In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+