ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು

ಬಿಎಂಡಬ್ಲ್ಯೂ ಕಂಪನಿಯು ತನ್ನ 2 ಸೀರಿಸ್ ಗ್ರ್ಯಾನ್ ಕೂಪೆ ಕಾರನ್ನು ಈ ವರ್ಷದ ಕೊನೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಹೊಸ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು

ಈ ಹೊಸ ಬಿಎಂಡಬ್ಲ್ಯೂ ಕಂಪನಿಯು 2 ಸೀರಿಸ್ ಗ್ರ್ಯಾನ್ ಕೂಪೆ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದರ ಸಲುವಾಗಿ ಪುಣೆಯಲ್ಲಿ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಕಾರು ಸ್ಪಾಟ್ ಟೆಸ್ಟ್ ನಡೆಸಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. ಈ ಎಂಟ್ರಿ ಲೆವೆಲ್ 2 ಸೀರೀಸ್ ಗ್ರ್ಯಾನ್ ಕೂಪೆ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.33 ಲಕ್ಷಗಳಾಗಿರಲಿದೆ ಎಂದು ನಿರೀಕ್ಷಿಸುತ್ತೇವೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು

ಈ ಎಂಟ್ರಿ ಲೆವೆಲ್ ಬಿಎಂಡಬ್ಲ್ಯೂ 2 ಸೀರಿಸ್ ಕಾರು ಕಂಪನಿಯ ಮಾಡ್ಯುಲರ್ ಎಫ್‌ಎಆರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ, ಈ ಐಷಾರಾಮಿ ಕಾರು ಫ್ರಂಟ್-ವ್ಹೀಲ್-ಡ್ರೈವ್ ಕಾನ್ಫಿಗರೇಶನ್ ಹೊಂದಿದೆ.

MOST READ: ಡೀಲರ್ ಬಳಿ ತಲುಪಿದ ಹೊಸ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು

ಎಫ್‌ಎಆರ್ ಪ್ಲಾಟ್‌ಫಾರ್ಮ್ ಅನ್ನು ಬಿಎಂಡಬ್ಲ್ಯು ಗ್ರೂಪ್‌ನ ಭಾಗವಾಗಿರುವ ಮಿನಿ ಬ್ರಾಂಡ್‌ನಿಂದ ಪಡೆಯಲಾಗಿದೆ. ಈ ಪ್ಲಾಟ್‌ಫಾರ್ಮ್ ವಿಶಾಲವಾದ ಕ್ಯಾಬಿನ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ ಮತ್ತು ಇದು ಉತ್ಪಾದನಾ ವೆಚ್ಚವನ್ನೂ ಕಡಿಮೆ ಮಾಡುತ್ತದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು

ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು 4,526 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,420 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಐಷಾರಾಮಿ ಕಾರು 2,670 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ತನ್ನ ಪ್ರತಿಸ್ಪರ್ಧಿ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರಿಗಿಂತ 59 ಎಂಎಂ ಉದ್ದದ ವ್ಹೀಲ್ ಬೇಸ್ ಹೆಚ್ಚಿದೆ.

MOST READ: ಹೊಸ ನಿವಸ್ ಎಸ್‍ಯುವಿಯನ್ನು ಅನಾವರಣಗೊಳಿಸಿದ ಫೋಕ್ಸ್‌ವ್ಯಾಗನ್

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು

ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು 8-ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯ ವಿನ್ಯಾಸದಿಂದ ಪ್ರೇರಣೆ ಪಡೆದುಕೊಂಡಿದೆ. ಈ ಸೆಡಾನ್ ಕಾರಿನ ಮುಂಭಾಗದಲ್ಲಿ ಐ ಶೇಪಿನ ಹೆಡ್‌ಲ್ಯಾಂಪ್‌ಗಳು ಹಾಗೂ ಡಿಆರ್‌ಎಲ್ ಸಿಸ್ಟಂ ಹೊಂದಿರುವ ದೊಡ್ಡ ಗ್ರಿಲ್ ನೀಡಲಾಗಿದೆ. ಇವುಗಳ ಜೊತೆಗೆ ದೊಡ್ಡ ಗಾತ್ರದ ವ್ಹೀಲ್ ಗಳು, ಲಾಂಗ್‌ಬೋರ್ಡ್ ಹಾಗೂ ಸ್ಲೊಪ್ ರೂಫ್‌ಲೈನ್ ಗಳಿದ್ದು, ಹೊಸ ಬಿಎಂಡಬ್ಲ್ಯು ಕಾರನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತವೆ. ಹಿಂಭಾಗದಲ್ಲಿ ಹಾರಿಜಾಂಟಲ್ ಆಗಿರುವ ಟೇಲ್ ಲ್ಯಾಂಪ್‌ಗಳಿವೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು

ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರಿನ ಇಂಟಿರಿಯರ್ ನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಇನ್ಫೋಟೇನೆಮೆಂಟ್ ಸಿಸ್ಟಂಗಾಗಿ ಎರಡು ದೊಡ್ಡ ಡಿಸ್ ಪ್ಲೇಯನ್ನು ಅಳವಡಿಸಿದ್ದಾರೆ. ಈ ಕಾರಿನಲ್ಲಿ ಇತ್ತೀಚಿನ ಐಡ್ರೈವ್ ಸಿಸ್ಟಂ ಅನ್ನು ಸಹ ಅಳವಡಿಸಲಾಗಿದೆ. ಇದರೊಂದಿಗೆ ಏರ್-ಕಾನ್ ವೆಂಟ್ಸ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು

ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರಲ್ಲಿ ‘220 ಐ' 2.0-ಲೀಟರ್ ಪೆಟ್ರೋಲ್ ಎಂಜಿನ್, 192 ಬಿಹೆಚ್‌ಪಿ ಉತ್ಪಾದಿಸಿದರೆ, ‘220 ಡಿ' 2.0-ಲೀಟರ್ ಡೀಸೆಲ್ ಎಂಜಿನ್ 190 ಬಿಹೆಚ್‌ಪಿ ಉತ್ಪಾದಿಸುತ್ತದೆ. ಈ ಎಂಜಿನ್ ಗಳೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಬಿಎಂಡಬ್ಲ್ಯೂ 2 ಸೀರಿಸ್ ಗ್ರ್ಯಾನ್ ಕೂಪೆ ಕಾರು

ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರಿಗೆ ಪೈಪೋಟಿಯನ್ನು ನೀಡುತ್ತದೆ. ಈ ಐಷಾರಾಮಿ ಸೆಡಾನ್ ಅನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

Most Read Articles

Kannada
English summary
BMW 2 Series Gran Coupe spied in Pune. Read In Kannada.
Story first published: Saturday, May 30, 2020, 21:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X