Just In
- 5 hrs ago ಬಿಡುಗಡೆಗೆ ಸಜ್ಜಾದ ಫೋರ್ಸ್ ಗೂರ್ಖಾ 5-ಡೋರ್ ಎಸ್ಯುವಿ: ಮಹೀಂದ್ರಾ ಥಾರ್ಗೆ ಎದೆಬಡಿತ ಶುರು
- 7 hrs ago 1.5 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಸಿಗುವ ಪ್ರೀಮಿಯಂ ಬೈಕ್ಗಳಿವು.. ಇವುಗಳಿಗೆ ಸರಿ ಸಾಟಿಯೇ ಇಲ್ಲ!
- 9 hrs ago Tata Nexon: ಬಹುಬೇಡಿಕೆಯ ಟಾಟಾ ನೆಕ್ಸಾನ್ ಕಾರನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 11 hrs ago ಟ್ರಾಫಿಕ್ ನಿಯಮ ಉಲ್ಲಂಘನೆ: ಮಹಿಳೆಗೆ 1.36 ಲಕ್ಷ ರೂ. ದಂಡ, ಆದ್ರೆ ಸ್ಕೂಟರ್ ಬೆಲೆ 1 ಲಕ್ಷ!
Don't Miss!
- News ಕೇರಳದಲ್ಲೂ ಖಾತೆ ತೆರೆಯಲ್ಲ ಬಿಜೆಪಿ: ಈ ಬಾರಿಯೂ ಮೋದಿ ಅಲೆ ಸೊನ್ನೆ ಎಂದ ಸಮೀಕ್ಷೆ- ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
- Sports MI vs CSK IPL 2024: ಮುಂಬೈ vs ಚೆನ್ನೈ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Lifestyle ಬೇಸಿಗೆಯಲ್ಲಿ ನಿತ್ಯ ಸೌತೆಕಾಯಿ ತಿಂದರೆ ಏನಾಗುತ್ತೆ? ರಾತ್ರಿ ಸೇವಿಸಬಾರದು ಏಕೆ.?
- Movies "ಏ ಏನಮ್ಮ ಬೇಜಾರು ಮಾಡಿಕೊಳ್ಳುತ್ತೀಯಾ? ಆರಾಮಾಗಿ ಇರೋಣ" ಎಂದಿದ್ದ ಸೌಂದರ್ಯ ಜಗದೀಶ್
- Finance ಅಮೇರಿಕನ್ ಕಂಪನಿಗಳಿಗೆ ಸೆಡ್ಡು ಹೊಡೆಯಲು ಮುಂದಾದ ಆರ್ಬಿಐ, ಫೋನ್ಪೇ, ಗೂಗಲ್ಗೆ ಆತಂಕ!
- Technology Poco: ಶೀಘ್ರದಲ್ಲೇ ಲಾಂಚ್ ಆಗಲಿದೆ ಪೊಕೊ F6 ಸ್ಮಾರ್ಟ್ಫೋನ್: ನಿರೀಕ್ಷಿತ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರಿನ ಟೀಸರ್ ಬಿಡುಗಡೆ
ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯೂ ಕಂಪನಿಯು ಹೊಸ 5-ಸೀರಿಸ್ ಫೇಸ್ಲಿಫ್ಟ್ ಕಾರಿನ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿದೆ. ಇದು ಬಹುನಿರೀಕ್ಷಿತ ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರಿನ ಮುಂಭಾಗವನ್ನು ಪ್ರದರ್ಶಿಸುವ ಆಕರ್ಷಕ ಆಕರ್ಷಕ ಟೀಸರ್ ಚಿತ್ರವವಾಗಿದೆ.
ಪ್ರಸ್ತುತ ಬಿಎಂಡಬ್ಲ್ಯೂ 5-ಸೀರಿಸ್ ಕಾರನ್ನು ಭಾರತದಲ್ಲಿ ಮೊದಲ ಬಾರಿಗೆ ಸುಮಾರು ಮೂರು ವರ್ಷಗಳ ಹಿಂದೆ ಬಿಡುಗಡೆಗೊಳಿಸಿತು. ಇದೀಗ ಬಿಎಂಡಬ್ಲ್ಯೂ ಕಂಪನಿಯು ಮೂರು ವರ್ಷಗಳ ಬಳಿಕ 5-ಸೀರಿಸ್ ಫೇಸ್ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಬಿಎಂಡಬ್ಲ್ಯೂ 5-ಸೀರೀಸ್ ಫೇಸ್ಲಿಫ್ಟ್ ಕಾರು ಮುಂಭಾಗ ಗ್ರಿಲ್ ಅನ್ನು ಹೊಂದಿದೆ. ಈ ಕಾರಿನಲ್ಲಿ ಹೊಸ ಗ್ರಿಲ್ ಮತ್ತು ಹೊಸ ಸ್ಲೀಕ್ ಹೆಡ್ ಲೈಟ್ ಅನ್ನು ಅಳವಡಿಸಿದ್ದಾರೆ. ಈ ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರು ಹಿಂದಿನ ಮಾದರಿಗಿಂತ ಆಕರ್ಷಕವಾಗಿದೆ.
ಈ ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಕಾರಿನ ಬಂಪರ್ ಗಳೊಂದಿಗೆ ಆಗ್ರೆಸಿವ್ ವಿನ್ಯಾಸಗೊಳಿಸಿದ ಏರ್ ಡ್ಯಮ್ ಗಳನ್ನು ಹೊಂದಿದೆ, ಇನ್ನು ಈ ಕಾರಿನಲ್ಲಿ ಮರುವಿನ್ಯಾಸಗೊಳಿಸಿದ ಡ್ಯುಯಲ್ ಟೋನ್ ಅಲಾಯ್ ವ್ಜೀಲ್ ಗಳನ್ನು ಅಳವಡಿಸಲಾಗಿದೆ.
MOST READ: ವಿಶ್ವದ ಅತಿ ದೊಡ್ಡ ಮಾಲ್ ಮಾಲೀಕನ ಬಳಿಯಿರುವ ಕಾರುಗಳಿವು..!
ಟೀಸರ್ ಚಿತ್ರದಲ್ಲಿ ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಕಾರಿನ ಮುಂಭಾಗ ಹೊಸ ಆಕಾರದ ಎಲ್ಇಡಿ ಡಿಆರ್ಎಲ್ಗಳೊಂದಿಗೆ ಹೊಸ ತೆಳ್ಳನೆಯ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇದನ್ನು ಹೊರತುಪಡಿಸಿದರೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯನ್ನು ಹೋಲುತ್ತದೆ. ಕಾರಿನ ಹಿಂಭಾಗಾದಲ್ಲಿ ಮರುವಿನ್ಯಾಸಗೊಳಿಸಲಾದ ಟೇಲ್ ಲ್ಯಾಂಪ್ ಮತ್ತು ಕ್ವಾಡ್-ಎಕ್ಸಾಸ್ಟ್ ಗಳೊಂದಿಗೆ ಸ್ಪೋರ್ಟಿಯರ್ ಬಂಪರ್ ಅನ್ನು ಹೊಂದಿದೆ.
ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಕಾರಿನ ಇಂಟಿರಿಯರ್ ಚಿತ್ರಗಳು ಬಹಿರಂಗವಾಗಿಲ್ಲ. ಇಂಟಿರಿಯರ್ ನಲ್ಲಿ ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲ ಎಂದು ನಿರೀಕ್ಷಿಸುತ್ತೇವೆ.
MOST READ: ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ ಮಾದಕ ನಟಿ..!
ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರು ಡಿಜಿಟಲ್ ಇನ್ಸ್ ಟ್ರೂಮೆಂಟ್ ಪ್ಯಾನೆಲ್, ಆಂಬಿಯೆಂಟ್ ಲೈಟಿಂಗ್, ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಂ, ಸನ್ರೂಫ್, ಹೆಡ್ಸ್-ಅಪ್ ಡಿಸ್ಪ್ಲೇ ಮತ್ತು ವೈರ್ಲೆಸ್ ಆಪಲ್ ಕಾರ್ಪ್ಲೇಯೊಂದಿಗೆ ಬಿಎಂಡಬ್ಲ್ಯು ಐ-ಡ್ರೈವ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿರುತ್ತದೆ.
ಈ 5-ಸೀರಿಸ್ ಫೇಸ್ಲಿಫ್ಟ್ ಕಾರಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬಹುದು. ಸುರಕ್ಷತೆಗಾಗಿ 8 ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಬಿಡಿ, ಪಾರ್ಕಿಂಗ್ ಸೆನ್ಸರ್ಗಳು, ರಿಯರ್ ವ್ಯೂ ಕ್ಯಾಮೆರಾ, ಜೊತೆಗೆ ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಅನ್ನು ಹೊಂದಿರುತ್ತದೆ.
MOST READ: ಇತಿಹಾಸದ ಪುಟ ಸೇರಿದ ಫೋಕ್ಸ್ವ್ಯಾಗನ್ ಎಮಿಯೊ ಕಾರು
5-ಸೀರಿಸ್ ಫೇಸ್ಲಿಫ್ಟ್ ಕಾರಿನ ಮ್ಯಾಕಾನಿಕಲ್ ಅಂಶಗಳು ಬಹಿರಂಗವಾಗಿಲ್ಲ. ಆದರೆ ಚಾರ್ಜಿಂಗ್ ಪೋರ್ಟ್ ಹೈಬ್ರಿಡ್ ರೂಪಾಂತರವನ್ನು ಪರಿಚಯಿಸುವ ಸಾದ್ಯತೆಗಳಿದೆ. 5-ಸೀರಿಸ್ ಕಾರಿನಲ್ಲಿರುವ 2.0-ಲೀಟರ್ ಡೀಸೆಲ್ ಎಂಜಿನ್ 190 ಬಿಹೆಚ್ಪಿ ಪವರ್ ಉತ್ಪಾದಿಸಿದರೆ, 2.0-ಲೀಟರ್ ಪೆಟ್ರೋಲ್ ಎಂಜಿನ್ 252 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇನ್ನು 3.0-ಲೀಟರ್ ಡೀಸೆಲ್ ಎಂಜಿನ್ 265 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ.
ಈ ಹೊಸ ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಆಡಿ ಎ6, ಮರ್ಸಿಡಿಸ್ ಬೆಂಝ್ ಇ-ಕ್ಲಾಸ್, ಜಾಗ್ವಾರ್ ಎಕ್ಸ್ಎಫ್ ಮತ್ತು ವೋಲ್ವೋ ಎಸ್90 ಕಾರುಗಳಿಗೆ ಪೈಪೋಟಿ ನೀಡುತ್ತದೆ, ಬಿಎಂಡಬ್ಲ್ಯೂ 5-ಸೀರಿಸ್ ಫೇಸ್ಲಿಫ್ಟ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.55.40 ಲಕ್ಷಗಳಾಗಿದೆ.