ಲಾಕ್‌ಡೌನ್ ವಿನಾಯ್ತಿ: ಇಂದಿನಿಂದ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ ಬಿಎಂಡಬ್ಲ್ಯು

ಕೇಂದ್ರ ಸರ್ಕಾರವು 3ನೇ ಹಂತದ ಲಾಕ್‌ಡೌನ್ ನಡುವೆಯೂ ಪರಿಸ್ಥಿತಿಗೆ ಅನುಗುಣವಾಗಿ ಕೈಗಾರಿಕಾ ವಲಯಕ್ಕೆ ಕೆಲವು ವಿನಾಯ್ತಿಗಳನ್ನು ಘೋಷಣೆ ಮಾಡಿದ್ದು, ಬಿಎಂಡಬ್ಲ್ಯು ಕಂಪನಿಯು ಹೊಸ ಮಾರ್ಗಸೂಚಿ ಅನುಸಾರವಾಗಿ ವಾಹನಗಳ ಉತ್ಪಾದನೆಯನ್ನು ಇಂದಿನಿಂದ ಪುನಾರಂಭಿಸಿದೆ.

ಲಾಕ್‌ಡೌನ್ ವಿನಾಯ್ತಿ: ಇಂದಿನಿಂದ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ ಬಿಎಂಡಬ್ಲ್ಯು

ಕರೋನಾ ಹತ್ತಿಕ್ಕಲು 3ನೇ ಹಂತದ ಲಾಕ್‌ಡೌನ್ ಅನ್ನು ಮುಂದುವರಿಸಿಕೊಂಡೆ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿರುವ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ದೇಶಾದ್ಯಂತ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಕಳೆದ ಒಂದೂವರೆ ತಿಂಗಳ ನಂತರ ವಾಹನ ಉತ್ಪಾದನೆಯನ್ನು ಪುನಾರಂಭಿಸಿವೆ. ಬಿಎಂಡಬ್ಲ್ಯು ಕೂಡಾ ಇದೀಗ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ್ದು, ಸೋಂಕು ಹರಡದಂತೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿದೆ.

ಲಾಕ್‌ಡೌನ್ ವಿನಾಯ್ತಿ: ಇಂದಿನಿಂದ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ ಬಿಎಂಡಬ್ಲ್ಯು

ಚೆನ್ನೈ ಹೊರವಲಯದಲ್ಲಿರುವ ಬಿಎಂಡಬ್ಲ್ಯು ಕಾರು ಉತ್ಪಾದನಾ ಘಟಕದಲ್ಲಿ ಹೊಸ ಕಾರುಗಳ ಉತ್ಪಾದನಾ ಪ್ರಕ್ರಿಯೆಯನ್ನು ಪುನಾರಂಭಿಸಲಾಗಿದ್ದು, ಶೇ.33 ರಷ್ಟು ಉದ್ಯೋಗಿಗಳೊಂದಿಗೆ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್‌ಡೌನ್ ವಿನಾಯ್ತಿ: ಇಂದಿನಿಂದ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ ಬಿಎಂಡಬ್ಲ್ಯು

ಕೇಂದ್ರ ಸರ್ಕಾರ ನೀಡಿರುವ ಹೊಸ ಗೈಡ್‌ಲೆನ್ಸ್ ಪ್ರಕಾರ, ಹಸಿರು ಮತ್ತು ಕಿತ್ತಳೆ ವಲಯದಲ್ಲಿರುವ ಮುನ್ಸಿಪಲ್ ಕಾರ್ಪೊರೇಶನ್ ಮಿತಿ ಹೊರಗಿನ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಅನುಮತಿ ನೀಡಲಾಗುತ್ತಿದ್ದು, ಗರಿಷ್ಠ ಪ್ರಮಾಣದ ಸುರಕ್ಷಾ ಸಾಧನಗಳನ್ನು ಬಳಕೆ ಮಾಡುವುದು ಕಡ್ಡಾಯವಾಗಿದೆ.

ಲಾಕ್‌ಡೌನ್ ವಿನಾಯ್ತಿ: ಇಂದಿನಿಂದ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ ಬಿಎಂಡಬ್ಲ್ಯು

ಸದ್ಯ ಉತ್ಪಾದನೆಗೆ ಅನುಮತಿ ಪಡೆದುಕೊಂಡಿರುವ ಕೈಗಾರಿಕಾ ಸಂಸ್ಥೆಗಳು ಕೇವಲ ಶೇ.33 ರಷ್ಟು ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದ್ದು, ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರದ ಜೊತೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಬಳಕೆಯು ಕಡ್ಡಾಯವಾಗಿರಲಿದೆ.

MOST READ: ಕರೋನಾ ವೈರಸ್: ಹೊಸ ವಿಧಾನದ ಮೂಲಕ ಜನರ ಬಳಿ ಬರಲಿರುವ ಪೊಲೀಸರು..

ಲಾಕ್‌ಡೌನ್ ವಿನಾಯ್ತಿ: ಇಂದಿನಿಂದ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ ಬಿಎಂಡಬ್ಲ್ಯು

ಒಟ್ಟಿನಲ್ಲಿ ಇಷ್ಟು ದಿನಗಳ ಕಾಲ ಯಾವುದೇ ಉತ್ಪಾದನಾ ಚಟುವಟಿಕೆಗಳಿಲ್ಲದೆ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದ ಆಟೋ ಕಂಪನಿಗಳಿಗೆ ಇದೀಗ ನೀಡಿರುವ ಕೆಲವು ವಿನಾಯ್ತಿಗಳಿಂದ ಉತ್ಪಾದನೆಗೆ ಮತ್ತೆ ಚಾಲನೆ ಸಿಕ್ಕಿರುವುದು ತುಸು ಸಮಾಧಾನ ತಂದಿದೆ.

ಲಾಕ್‌ಡೌನ್ ವಿನಾಯ್ತಿ: ಇಂದಿನಿಂದ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ ಬಿಎಂಡಬ್ಲ್ಯು

ಆದರೆ ಉತ್ಪಾದನಾ ಸ್ಥಳದಲ್ಲಿ ಗರಿಷ್ಠ ಪ್ರಮಾಣದ ಸುರಕ್ಷತೆಯನ್ನು ತೆಗೆದುಕೊಳ್ಳಬೇಕಿರುವುದು ಆಯಾ ಕಂಪನಿಗಳ ಆದ್ಯ ಕರ್ತವ್ಯವಾಗಿದ್ದು, ಬಿಎಂಡಬ್ಲ್ಯು ಕಂಪನಿಯು ತನ್ನ ಉದ್ಯೋಗಿಗಳಿಗೆ ಗರಿಷ್ಠ ಸುರಕ್ಷತೆ ನೀಡುವ ಖಾತ್ರಿ ವ್ಯಕ್ತಪಡಿಸಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಲಾಕ್‌ಡೌನ್ ವಿನಾಯ್ತಿ: ಇಂದಿನಿಂದ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ ಬಿಎಂಡಬ್ಲ್ಯು

ಇನ್ನು ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡುತ್ತಿದ್ದು, ಬಿಎಂಡಬ್ಲ್ಯು ಕೂಡಾ ಪಿಎಂ ತುರ್ತು ನಿಧಿಗೆ ರೂ.3 ಕೋಟಿ ದೇಣಿಯೊಂದಿಗೆ ಸಾವಿರಾರು ಪಿಪಿಇ ಕಿಟ್‌ಗಳನ್ನು ವಿತರಣೆ ಮಾಡಿದೆ.

Article Published On: Thursday, May 7, 2020, 21:11 [IST]
English summary
BMW India Announces Resumption Of Limited Operations At Chennai Facility. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+