Just In
- 19 min ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- 36 min ago Hyundai: ಹ್ಯುಂಡೈ ಎಕ್ಸ್ಟರ್ ಮೊದಲ ಅಪಘಾತ: ಮುಗಿಬಿದ್ದು ಖರೀದಿಸಿದವರು ಇದನ್ನೊಮ್ಮೆ ನೋಡಿ
- 47 min ago Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- 1 hr ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
Don't Miss!
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- News Namma Metro Service Extend: ಲೋಕಸಭಾ ಚುನಾವಣೆಗಾಗಿ ಮೆಟ್ರೋ ಸೇವೆ ವಿಸ್ತರಣೆ, ಗಮನಿಸಿ
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಖರೀದಿಗೆ ಬುಕ್ಕಿಂಗ್ ಆರಂಭ
ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ 2-ಸೀರಿಸ್ ಗ್ರ್ಯಾನ್ ಕೂಪೆ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಕಾರು ಇದೇ ತಿಂಗಳ 15ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.
ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಕಾರಿಗಾಗಿ ಪ್ರೀ ಬುಕ್ಕಿಂಗ್ ಅನ್ನು ಆರಂಭಿಸಲಾಗಿದೆ. ಈ ಐಷಾರಾಮಿ ಕಾರನ್ನು ಖರೀದಿಸಲು ಬಯಸುವವರು ಕೇವಲ ರೂ.50,000 ಗಳನ್ನು ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಈ ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾನ್ ಕೂಪೆ ಭಾರತದಲ್ಲಿ ಬ್ರಾಂಡ್ನ ಹೊಸ ಎಂಟ್ರಿ ಲೆವೆಲ್ ಸೆಡಾನ್ ಆಗಿದೆ. ಈ ಎಂಟ್ರಿ ಲೆವೆಲ್ ಬಿಎಂಡಬ್ಲ್ಯು 2-ಸೀರೀಸ್ ಗ್ರ್ಯಾನ್ ಕೂಪೆ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.33 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.
ಈ ಎಂಟ್ರಿ ಲೆವೆಲ್ ಬಿಎಂಡಬ್ಲ್ಯು 2-ಸೀರಿಸ್ ಕಾರು ಫ್ರಂಟ್-ವ್ಹೀಲ್-ಡ್ರೈವ್ ಕಾನ್ಫಿಗರೇಶನ್ ಹೊಂದಿದೆ. ಈ ಹೊಸ ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಯುಕೆಎಲ್ ಪ್ಲಾಟ್ಫಾರ್ಮ್ ಅನ್ನು ಆಧರಿಸಿದೆ. ಇನ್ನು ಎಫ್ಎಆರ್ ಪ್ಲಾಟ್ಫಾರ್ಮ್ ಅನ್ನು ಬಿಎಂಡಬ್ಲ್ಯು ಗ್ರೂಪ್ನ ಭಾಗವಾಗಿರುವ ಮಿನಿ ಬ್ರಾಂಡ್ನಿಂದ ಪಡೆಯಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಈ ಪ್ಲಾಟ್ಫಾರ್ಮ್ ವಿಶಾಲವಾದ ಕ್ಯಾಬಿನ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ ಮತ್ತು ಇದು ಉತ್ಪಾದನಾ ವೆಚ್ಚವನ್ನೂ ಕಡಿಮೆ ಮಾಡುತ್ತದೆ. ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು 4,526 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,420 ಎಂಎಂ ಎತ್ತರವನ್ನು ಹೊಂದಿದೆ.
ಇನ್ನು ಈ ಐಷಾರಾಮಿ ಕೂಪೆ 2,670 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ತನ್ನ ಪ್ರತಿಸ್ಪರ್ಧಿ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರಿಗಿಂತ 59 ಎಂಎಂ ಉದ್ದದ ವ್ಹೀಲ್ ಬೇಸ್ ಹೆಚ್ಚಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು 8-ಸೀರಿಸ್ ಗ್ರ್ಯಾನ್ ಕೂಪೆ ಮಾದರಿಯ ವಿನ್ಯಾಸದಿಂದ ಪ್ರೇರಣೆ ಪಡೆದುಕೊಂಡಿದೆ. ಈ ಸೆಡಾನ್ ಕಾರಿನ ಮುಂಭಾಗದಲ್ಲಿ ಐ-ಆಕರಾದ ಹೆಡ್ಲ್ಯಾಂಪ್ಗಳು ಹಾಗೂ ಡಿಆರ್ಎಲ್ ಸಿಸ್ಟಂ ಹೊಂದಿರುವ ದೊಡ್ಡ ಗ್ರಿಲ್ ನೀಡಲಾಗಿದೆ.
ಇವುಗಳ ಜೊತೆಗೆ ದೊಡ್ಡ ಗಾತ್ರದ ವ್ಹೀಲ್ ಗಳು, ಲಾಂಗ್ಬೋರ್ಡ್ ಹಾಗೂ ಸ್ಲೊಪ್ ರೂಫ್ಲೈನ್ ಗಳಿದ್ದು, ಹೊಸ ಬಿಎಂಡಬ್ಲ್ಯು ಕಾರನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತವೆ. ಹಿಂಭಾಗದಲ್ಲಿ ಹಾರಿಜಾಂಟಲ್ ಆಗಿರುವ ಟೇಲ್ ಲ್ಯಾಂಪ್ಗಳಿವೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರಿನ ಇಂಟಿರಿಯರ್ ನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಇನ್ಫೋಟೇನೆಮೆಂಟ್ ಸಿಸ್ಟಂಗಾಗಿ ಎರಡು ದೊಡ್ಡ ಡಿಸ್ ಪ್ಲೇಯನ್ನು ಅಳವಡಿಸಿದ್ದಾರೆ. ಈ ಕಾರಿನಲ್ಲಿ ಇತ್ತೀಚಿನ ಐಡ್ರೈವ್ ಸಿಸ್ಟಂ ಅನ್ನು ಸಹ ಹೊಂದಿರುತ್ತದೆ.
ಇದರೊಂದಿಗೆ ಏರ್-ಕಾನ್ ವೆಂಟ್ಸ್, ವೈರ್ಲೆಸ್ ಸ್ಮಾರ್ಟ್ಫೋನ್ ಚಾರ್ಜಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ. ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್
ಇದರಲ್ಲಿ 220 ಐ 2.0-ಲೀಟರ್ ಪೆಟ್ರೋಲ್ ಎಂಜಿನ್, 192 ಬಿಹೆಚ್ಪಿ ಪವರ್ ಉತ್ಪಾದಿಸಿದರೆ, ‘220 ಡಿ' 2.0-ಲೀಟರ್ ಡೀಸೆಲ್ ಎಂಜಿನ್ 190 ಬಿಹೆಚ್ಪಿ ಪವರ್ ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಜೋಡಿಸಲಾಗಿದೆ.
ಹೊಸ ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಕಾರಿಗೆ ಪೈಪೋಟಿಯನ್ನು ನೀಡುತ್ತದೆ. ಬಿಎಂಡಬ್ಲ್ಯು ಕಂಪನಿಯು ಈ ಐಷಾರಾಮಿ ಸೆಡಾನ್ ಅನ್ನು ಹೊಸ ಫೀಚರ್ ಗಳೊಂದಿಗೆ ಇದೇ ತಿಂಗಳು ಬಿಡುಗಡೆಗೊಳಿಸಲಿದೆ.