Just In
- 53 min ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 2 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 2 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 4 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- News ಬೆಂಗಳೂರಿನ 21 ಐಟಿ ಪಾರ್ಕ್ಗಳಿಗೆ ಕಾವೇರಿ ನೀರು: BWSSB
- Movies ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
- Sports GT vs DC: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ
- Lifestyle ಸರ್ಕಸ್ನಿಂದ ತಪ್ಪಿಸಿಕೊಂಡು ಓಡಿದ ಆನೆ..! ಆಮೇಲೆ ಆಗಿದ್ದೇನು..?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ತಲೆಎತ್ತಿದ ಬಿಎಂಡಬ್ಲ್ಯು ಐಷಾರಾಮಿ ಸೆಕೆಂಡ್ ಹ್ಯಾಂಡ್ ಶೋರೂಂ
ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಅತಿ ದೊಡ್ಡ ಯೂಸ್ಡ್ ಕಾರ್ ಶೋರೂಂಗೆ ಚಾಲನೆ ನೀಡಿದ್ದು, ಹೊಸ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಯು ನಮ್ಮ ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ತಲೆ ಎತ್ತಿದೆ.
ಬಿಎಂಡಬ್ಲ್ಯು ಕಂಪನಿಯ ಹೊಸ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಯನ್ನು ನವನೀತ್ ಮೋಟಾರ್ಸ್ನೊಂದಿಗೆ ಚಾಲನೆ ನೀಡಿದ್ದು, ಹೊಸ ಶೋರೂಂನಲ್ಲಿ ಬಿಎಂಡಬ್ಲ್ಯು ನಿರ್ಮಾಣದ ಸೆಕೆಂಡ್ ಹ್ಯಾಂಡ್ ಕಾರುಗಳು ಆಕರ್ಷಕ ಬೆಲೆಯೊಂದಿಗೆ ಖರೀದಿಗೆ ಲಭ್ಯವಿರಲಿವೆ. ಬಿಎಂಡಬ್ಲ್ಯು ಸೆಕೆಂಡ್ ಹ್ಯಾಂಡ್ ಕಾರುಗಳು ಹೊಸ ಕಾರುಗಳ ಮಾದರಿಯಲ್ಲೇ ಗರಿಷ್ಠ ಮಟ್ಟದ ವಾರಂಟಿ, ಆಕರ್ಷಕ ಸಾಲಸೌಲಭ್ಯಗಳನ್ನು ಪಡೆದುಕೊಂಡಿವೆ.
ಅಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿರುವ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮವನ್ನು ವ್ಯವಸ್ಥಿತವಾಗಿ ಮಾರಾಟ ಮಾಡುವ ಗುರಿ ಯೋಜನೆ ಹೊಂದಿರುವ ಬಿಎಂಡಬ್ಲ್ಯು ಕಂಪನಿಯು ಸೆಕೆಂಡ್ ಹ್ಯಾಂಡ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ ಭದ್ರತೆ ಒದಗಿಸುತ್ತಿದೆ.
ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳು ಗ್ರಾಹಕರ ಆಯ್ಕೆಗೆ ಉತ್ತಮ ಎನ್ನಬಹುದು.
ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಇಲ್ಲಿ ಮೋಸ ವ್ಯವಹಾರಗಳಿಗೆ ಯಾವುದೇ ಅವಕಾಶವಿರುವುದಿಲ್ಲ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!
ಒಂದು ವೇಳೆ ಮೋಸವೆಂದು ಕಂಡುಬಂದಲ್ಲಿ ಕಾನೂನು ಹೋರಾಟಕ್ಕೆ ಎಲ್ಲಾ ಅವಕಾಶಗಳಿದ್ದು, ಮೋಸ ವ್ಯವಹಾರ ಸಾಬೀತಾದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ಅವಕಾಶವಿದೆ. ಇದಕ್ಕಾಗಿ ಬಹುತೇಕ ಕಾರು ಕಂಪನಿಗಳು ತಮ್ಮದೆ ನಿರ್ಮಾಣದ ಸೆಕೆಂಡ್ ಹ್ಯಾಂಡ್ ಕಾರುಗಳು ಮಾರಾಟವನ್ನು ಅಧಿಕೃತವಾಗಿ ಚಾಲನೆ ನೀಡುತ್ತಿವೆ.
ಇದಲ್ಲದೆ ಸದ್ಯ ಪರಿಸ್ಥಿತಿಯಲ್ಲಿ ಕರೋನಾ ವೈರಸ್ ಪರಿಣಾಮ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಈ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಬಹುತೇಕ ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಭಾರೀ ಹೂಡಿಕೆ ಮಾಡುತ್ತಿವೆ.