Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2023ರ ವೇಳೆಗೆ ಪ್ರಮುಖ ಕಾರುಗಳಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು
ಬಿಎಂಡಬ್ಲ್ಯ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಜಾಗತಿಕ ಮಾರುಕಟ್ಟೆಗಾಗಿ ಶೀಘ್ರದಲ್ಲೇ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ವಾಹನಗಳ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಬಿಎಂಡಬ್ಲ್ಯು ಕೂಡಾ ಈಗಾಗಲೇ ವಿವಿಧ ಮಾದರಿಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಜ್ಜುಗೊಂಡಿದ್ದು, 2023ರ ವೇಳೆಗೆ ಶೇ.20 ರಷ್ಟು ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳ ಮಾರಾಟವನ್ನು ಹೊಂದಿರುವುದಾಗಿ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತಂತೆ ಸ್ಪಷ್ಟನೆ ನೀಡಿರುವ ಬಿಎಂಡಬ್ಲ್ಯು ಕಂಪನಿಯು ಚಾರ್ಜಿಂಗ್ ಸೌಲಭ್ಯಗಳ ಆಧಾರದ ಮೇಲೆ ಇವಿ ಕಾರುಗಳ ಪರಿಚಯಿಸುವುದಾಗಿ ಹೇಳಿಕೊಂಡಿದ್ದು, ಭಾರತದಲ್ಲಿ ಸದ್ಯ ಕೆಲವೇ ಕೆಲವು ನಗರಗಳಲ್ಲಿ ಸಾರ್ವಜನಿಕ ಬಳಕೆಯ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ಸೌಲಭ್ಯಗಳಿರುವುದು ಎಲೆಕ್ಟ್ರಿಕ್ ವಾಹನಗಳ ಬಿಡುಗಡೆ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ.

ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯಗಳಿಲ್ಲದೆ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ನಷ್ಟ ಉಂಟು ಮಾಡಬಹುದು ಎನ್ನುವ ಲೆಕ್ಕಾಚಾರದಲ್ಲಿರುವ ಆಟೋ ಕಂಪನಿಗಳು ಹೆಚ್ಚಿನ ಮಟ್ಟದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಕಾಯುತ್ತಿವೆ.

ಲಾಸ್ಟ್ ಮೈಲ್ ಕನೆಕ್ವಿಟಿವಾಗಿ ಚಾರ್ಜಿಂಗ್ ಸೌಲಭ್ಯಗಳಿಲ್ಲದಿರುವುದರಿಂದ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಗ್ರಾಹಕರು ಹಿಂದೇಟು ಹಾಕುತ್ತಿರುವ ಬಗ್ಗೆ ಹಲವಾರು ಅಧ್ಯಯನ ವರದಿ ಬಹಿರಂಗಗೊಳಿಸಿದ್ದು, ಎಲೆಕ್ಟ್ರಿಕ್ ವಾಹನಗಳ ಭವಿಷ್ಯವು ಚಾರ್ಜಿಂಗ್ ಸೌಲಭ್ಯಗಳ ಮೇಲೆ ನಿಂತಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಅದರಲ್ಲೂ ಎಲೆಕ್ಟ್ರಿಕ್ ಮೊಲಿಬಿಟಿಯಲ್ಲಿ ಪ್ರಾಥಮಿಕ ಹಂತದಲ್ಲಿರುವ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ಆರ್ಥಿಕವಾಗಿ ಭಾರೀ ನಷ್ಟ ಎಂದೇ ಭಾವಿಸಿರುವ ಆಟೋ ಕಂಪನಿಗಳು ಇನ್ನು ಕೆಲವು ವರ್ಷ ಕಾಯ್ದು ನಂತರ ತಮ್ಮ ಭವಿಷ್ಯದ ವಾಹನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿವೆ.

ಜರ್ಮನ್ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾದ ಬಿಎಂಡಬ್ಲ್ಯು ಕೂಡಾ ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆ ಯಾವಾಗ? ಎನ್ನುವ ಪ್ರಶ್ನೆಗೆ ಚಾರ್ಜಿಂಗ್ ಸೌಲಭ್ಯಗಳ ಮೇಲೆ ಭವಿಷ್ಯ ವಾಹನಗಳು ಬಿಡುಗಡೆಯಾಗಲಿವೆ ಎನ್ನುವ ಸುಳಿವು ನೀಡಿದ್ದಾರೆ. ಬಿಎಂಡಬ್ಲ್ಯು ಕಂಪನಿಯು ಯುರೋಪ್‌ನಲ್ಲಿ ಈಗಾಗಲೇ ಪ್ರಮುಖ ಮೂರು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಭಾರತದಲ್ಲಿ 2021ಕ್ಕೆ ಹೊಸ ಇವಿ ಮಾದರಿಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮಾಧ್ಯಮ ಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಬಿಎಂಡಬ್ಲ್ಯು ಇಂಡಿಯಾ ಸಿಇಒ ವಿಕ್ರಮ್ ಪಾವಾ ಅವರು ಇವಿ ವಾಹನಗಳ ಬಿಡುಗಡೆಗೆ ಕಂಪನಿಯು ಉತ್ಸುಕವಾಗಿದ್ದು, ಚಾರ್ಜಿಂಗ್ ಸೌಲಭ್ಯಗಳು ಗರಿಷ್ಠ ಪ್ರಮಾಣದಲ್ಲಿ ಲಭ್ಯವಿದ್ದಲ್ಲಿ ಹೊಸ ಇವಿ ವಾಹನಗಳ ಬಿಡುಗಡೆಗೆ ಪೂರಕವಾದ ಅಂಶವಾಗಿರಲಿದೆ ಎಂದಿದ್ದಾರೆ.