ಹೊಸ ಬಿಎಂಡಬ್ಲ್ಯು ಎಕ್ಸ್5 ಸ್ಪೋರ್ಟ್‌ಎಕ್ಸ್ ವೆರಿಯೆಂಟ್ ಬಿಡುಗಡೆ
ಬಿಎಂಡಬ್ಲ್ಯು ಇಂಡಿಯಾ ತನ್ನ ಎಕ್ಸ್5 ಎಸ್‌ಯುವಿಯ ಹೊಸ ಸ್ಪೋರ್ಟ್‌ಎಕ್ಸ್ ವೆರಿಯೆಂಟ್ ಅನ್ನು ಸದ್ದಿಲ್ಲದೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್5 ಸ್ಪೋರ್ಟ್‌ಎಕ್ಸ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.74.90 ಲಕ್ಷಗಳಾಗಿದೆ.

ಹೊಸ ಬಿಎಂಡಬ್ಲ್ಯು ಎಕ್ಸ್5 ಎಕ್ಸ್‌ಡ್ರೈವ್ 30ಡಿ ಸ್ಪೋರ್ಟ್‌ಎಕ್ಸ್ ಬ್ರ್ಯಾಂಡ್‌ನ ಇತ್ತೀಚಿನ ಎಂಟ್ರಿ ಲೆವೆಲ್ ಮಾದರಿಯಾಗಿದೆ. 2020ರ ಬಿಎಂಡಬ್ಲ್ಯು ಎಕ್ಸ್5 ಎಸ್‍ಯುವಿಯು ಎಕ್ಸ್‌ಡ್ರೈವ್ 30ಡಿ ಸ್ಪೋರ್ಟ್‌ಎಕ್ಸ್, ಎಕ್ಸ್‌ಡ್ರೈವ್ 30ಡಿ ಎಕ್ಸ್‌ಲೈನ್ ಮತ್ತು ಎಕ್ಸ್‌ಡ್ರೈವ್ 40ಐ ಎಂ ಸ್ಪೋರ್ಟ್ ಎಂಬ ಮೂರು ರೂಪಾಂತರಗಳಲ್ಲಿ(ವೆರಿಯೆಂಟ್) ಲಭ್ಯವಿದೆ. ಇದರಲ್ಲಿ ಬಿಎಂಡಬ್ಲ್ಯು ಎಕ್ಸ್5 ಸ್ಪೋರ್ಟ್‌ಎಕ್ಸ್ ಮತ್ತು ಎಕ್ಸ್‌ಲೈನ್ ರೂಪಾಂತರಗಳನ್ನು ಒಂದೇ ಡೀಸೆಲ್ ಎಂಜಿನ್ ನಲ್ಲಿ ಬಿಡುಗಡೆಗೊಳಿಸಲಾಗಿದೆ. ಇದು ಒಂದೇ ರೀತಿಯ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಬಿಎಂಡಬ್ಲ್ಯು ಎಕ್ಸ್5 ಸ್ಪೋರ್ಟ್‌ಎಕ್ಸ್ ಎಸ್‍ಯುವಿಯಲ್ಲಿ 3.0-ಲೀಟರ್ ಆರು-ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 4000 ಆರ್‌ಪಿಎಂನಲ್ಲಿ 265 ಬಿಹೆಚ್‌ಪಿ ಪವರ್ ಮತ್ತು 1500 ಆರ್‌ಪಿಎಂನಲ್ಲಿ 620 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಐಷಾರಾಮಿ ಬಿಎಂಡಬ್ಲ್ಯೂ ಎಕ್ಸ್6 ಎಸ್‍ಯುವಿ

ಹೊಸ ಬಿಎಂಡಬ್ಲ್ಯು ಎಕ್ಸ್5 ಪೆಟ್ರೋಲ್ ಎಂಜಿನ್ ನಲ್ಲಿ ಕೂಡ ಲಭ್ಯವಿದೆ. ಇದು ಈ ಎಸ್‍ಯುವಿಯ ಟಾಪ್-ಸ್ಪೆಕ್ ಎಕ್ಸ್‌ಡ್ರೈವ್ 40 ಐ ಎಂ ಸ್ಪೋರ್ಟ್ ಮಾದರಿಗೆ ಮಾತ್ರ ಸೀಮಿತವಾಗಿದೆ. ಇದರಲ್ಲಿ 3.0-ಲೀಟರ್ ಟ್ವಿನ್-ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 5500 ಆರ್‌ಪಿಎಂನಲ್ಲಿ 340 ಬಿಹೆಚ್‌ಪಿ ಪವರ್ ಮತ್ತು 1500 ಆರ್‌ಪಿಎಂನಲ್ಲಿ 450 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಎಲ್ಲಾ ಮೂರು ರೂಪಾಂತರಗಳು ಬಿಎಂಡಬ್ಲ್ಯುನ ಎಕ್ಸ್‌ಡ್ರೈವ್ ತಂತ್ರಜ್ಞಾನವನ್ನು ಹೊಂದಿದೆ. ಇದು ಎಲ್ಲಾ ನಾಲ್ಕು ಟಯರುಗಳಿಗೆ ಪವರ್ ಅನ್ನು ಕಳುಹಿಸುತ್ತದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಎಂಟ್ರಿ ಲೆವೆಲ್ ಎಕ್ಸ್5 ಸ್ಪೋರ್ಟ್‌ಎಕ್ಸ್ ಹಲವಾರು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿದೆ. ಇದರಲ್ಲಿ ಈ ಹೊಸ ಎಸ್‍ಯುವಿಯು ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಆಂಬಿಯೆಂಟ್ ಲೈಟಿಂಗ್, ಸ್ಪೋರ್ಟ್ಸ್ ಸೀಟ್‌ಗಳು ಮತ್ತು ಆಟೋಮ್ಯಾಟಿಕ್ ಟೈಲ್‌ಗೇಟ್ ಅನ್ನು ಹೊಂದಿದೆ.

ಇದರೊಂದಿಗೆ ಈ ಎಸ್‍ಯುವಿಯಲ್ಲಿ ಆಪಲ್ ಕಾರ್‌ಪ್ಲೇಯೊಂದಿಗೆ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಗೆಸ್ಚರ್ ಕಂಟ್ರೋಲ್, 19 ಇಂಚಿನ ಅಲಾಯ್ ವ್ಹೀಲ್ಸ್, ಪಾರ್ಕ್ ಅಸಿಸ್ಟ್ ಮತ್ತು 10-ಸ್ಪೀಕರ್ ಆಡಿಯೊ ಸಿಸ್ಟಂ ಅನ್ನು ಹೊಂದಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಎಂಡಬ್ಲ್ಯು ಎಕ್ಸ್ 5 ಸ್ಪೋರ್ಟ್‌ಎಕ್ಸ್ ಎಸ್‍ಯುವಿಯಲ್ಲಿ ಮಲ್ಟಿ ಏರ್‌ಬ್ಯಾಗ್‌ಗಳು, ಎಬಿಎಸ್, ಕಾರ್ನರಿಂಗ್ ಬ್ರೇಕ್ ಕಂಟ್ರೋಲ್, ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್, ಟ್ರ್ಯಾಕ್ಷನ್, ಆಟೋ-ಹೋಲ್ಡ್ನೊಂದಿಗೆ ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್ ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ ಅನ್ನು ಹೊಂದಿದೆ.

ಬಿಎಂಡಬ್ಲ್ಯೂ ಇಂಡಿಯಾ ಕಂಪನಿಯು ಎಕ್ಸ್6 ಎಸ್‌ಯುವಿಯನ್ನು ಕೂಡ ಬಿಡುಗಡೆಗೊಳಿಸಿದೆ. ಇನ್ನು ಹೊಸ ಬಿಎಂಡಬ್ಲ್ಯು ಎಕ್ಸ್ 5 ಸ್ಪೋರ್ಟ್‌ಎಕ್ಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಜಿಎಲ್ಇ ಮತ್ತು ಆಡಿ ಕ್ಯೂ5 ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications








