ಟಾಟಾ ಹೊಸ ನೆಕ್ಸಾನ್ ಇವಿ ಖರೀದಿ ಮಾಡಿದ ಬಾಲಿವುಡ್ ಅಭಿನೇತ್ರಿ ಮಂದಿರ ಬೇಡಿ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ದಿನದಿಂದ ದಿನಕ್ಕೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಅತ್ಯುತ್ತಮ ಬೆಲೆ, ಹೆಚ್ಚು ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಮತ್ತು ಆಕರ್ಷಕ ವಿನ್ಯಾಸದಿಂದೊಂದಿಗೆ ಬಾಲಿವುಡ್ ನಟರನ್ನು ಸೆಳೆಯುತ್ತಿದೆ.

ನೆಕ್ಸಾನ್ ಇವಿ ಕಾರು ಸದ್ಯ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ಪಡೆದುಕೊಳ್ಳುತ್ತಿದ್ದು, ಇತ್ತೀಚೆಗೆ ಬಾಲಿವುಡ್ ಅಭಿನೇತ್ರಿ, ನಿರೂಪಕಿ ಮಂದಿರ ಬೇಡಿ ಕೂಡಾ ಹೊಸ ನೆಕ್ಸಾನ್ ಇವಿ ಮಾಲೀಕರಾಗಿದ್ದಾರೆ. ಹೊಸ ಕಾರು ಸದ್ಯ ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ನೊಂದಿಗೆ ಕೈಗೆಟುವ ಬೆಲೆಯೊಂದಿಗೆ ಖರೀದಿಗೆ ಲಭ್ಯವಿದ್ದು, ಮುಂಬರುವ ದಿನಗಳಲ್ಲಿ ಹೊಸ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸದ್ಯ ಹೊಸ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ಮೂರು ವೆರಿಯೆಂಟ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.15.99 ಲಕ್ಷ ಬೆಲೆ ಪಡೆದುಕೊಂಡಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ದರಕ್ಕೆ ಅನುಗುಣವಾಗಿ ಹಲವಾರು ಹೊಸ ಫೀಚರ್ಸ್‌ಗಳಿವೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250 ಕಿ.ಮೀನಿಂದ- 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್ ಟೆಸ್ಟಿಂಗ್‌ನಲ್ಲಿ ಸಾಬೀತಾಗಿದೆ.

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.


Click it and Unblock the Notifications