ಪುಣೆ ಮತ್ತು ಇಂಧೋರ್ ಘಟಕಗಳಲ್ಲಿ ಬ್ರಿಡ್ಜ್‌ಸ್ಟೋನ್ ಟೈರ್ ಉತ್ಪಾದನೆ ಪುನಾರಂಭ

ಕರೋನಾ ವೈರಸ್ ಆರ್ಭಟವನ್ನು ತಗ್ಗಿಸಲು ಸದ್ಯಕ್ಕೆ ಲಾಕ್‌ಡೌನ್ ಅನ್ನು ಮುಂದುವರಿಸಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಕೈಗಾರಿಕಾ ವಲಯಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದು, ಬಹುತೇಕ ಆಟೋ ಕಂಪನಿಗಳು ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯನ್ನು ಪುನಾರಂಭಿಸಿವೆ.

ಪುಣೆ ಮತ್ತು ಇಂಧೋರ್ ಘಟಕಗಳಲ್ಲಿ ಬ್ರಿಡ್ಜ್‌ಸ್ಟೋನ್ ಟೈರ್ ಉತ್ಪಾದನೆ ಪುನಾರಂಭ

ಜನಪ್ರಿಯ ಟೈರ್ ಉತ್ಪಾದನಾ ಕಂಪನಿ ಬ್ರಿಡ್ಜ್‌ಸ್ಟೋನ್ ಕೂಡಾ ಪುಣೆ ಮತ್ತು ಇಂಧೋರ್ ನಗರಗಳ ಹೊರವಲಯದಲ್ಲಿರುವ ಉತ್ಪಾದನಾ ಘಟಕಗಳಲ್ಲಿ ಉತ್ಪಾದನಾ ಪ್ರಕ್ರಿಯೆಯ್ನು ಪುನಾರಂಭಿಸಿದ್ದು, ವೈರಸ್ ಭೀತಿ ಹಿನ್ನಲೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರೋನಾ ವೈರಸ್ ಮಟ್ಟಹಾಕಲು ಲಾಕ್‌ಡೌನ್ ಅನ್ನು ಮುಂದುವರಿಸಿಕೊಂಡೆ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿರುವ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ಕಳೆದ ಒಂದೂವರೆ ತಿಂಗಳ ನಂತರ ವಾಹನ ಉತ್ಪಾದನೆಯನ್ನು ಪ್ರಕ್ರಿಯೆಯು ಪುನಾರಂಭಗೊಂಡಿದೆ.

ಪುಣೆ ಮತ್ತು ಇಂಧೋರ್ ಘಟಕಗಳಲ್ಲಿ ಬ್ರಿಡ್ಜ್‌ಸ್ಟೋನ್ ಟೈರ್ ಉತ್ಪಾದನೆ ಪುನಾರಂಭ

ಸದ್ಯ ಉತ್ಪಾದನೆ ಮತ್ತು ಮಾರಾಟ ಮಾಡುತ್ತಿರುವ ಆಟೋ ಕಂಪನಿಗಳು ಉದ್ಯೋಗ ಸ್ಥಳಗಳಲ್ಲಿ ಶೇ.50ಕ್ಕಿಂತಲೂ ಕಡಿಮೆ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದ್ದು, ವೈರಸ್ ತಡೆಗಾಗಿ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಕೈಗೊಂಡು ಗ್ರಾಹಕರ ಮನೆ ಬಾಗಿಲಿಗೆ ವಾಹನ ಉತ್ಪನ್ನಗಳನ್ನು ವಿತರಣೆ ಮಾಡಲಾಗುತ್ತಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಪುಣೆ ಮತ್ತು ಇಂಧೋರ್ ಘಟಕಗಳಲ್ಲಿ ಬ್ರಿಡ್ಜ್‌ಸ್ಟೋನ್ ಟೈರ್ ಉತ್ಪಾದನೆ ಪುನಾರಂಭ

ಇನ್ನು ಮಾಹಾಮಾರಿ ಕರೋನಾ ವೈರಸ್ ಹೊಡೆದೊಡಿಸಲು ಸರ್ಕಾರಕ್ಕೆ ಹಣಕಾಸಿನ ನೆರವು ನೀಡಿರುವ ಬ್ರಿಡ್ಜ್‌ಸ್ಟೋನ್ ಕಂಪನಿಯು ಕರೋನಾ ವಾರಿಯರ್ಸ್‌ಗಳಿಗೆ ಬರೋಬ್ಬರಿ 10 ಸಾವಿರ ಪಿಪಿಇ (ಪರ್ಸನಲ್ ಪ್ರೋಟೆಕ್ಟಿವ್ ಇಕ್ವಿಪ್‌ಮೆಂಟ್) ಹಾಗೂ 1 ಲಕ್ಷಕ್ಕೂ ಅಧಿಕ ಗುಣಮಟ್ಟದ ಮಾಸ್ಕ್‌ಗಳನ್ನು ವಿತರಣೆ ಮಾಡಿದೆ.

ಪುಣೆ ಮತ್ತು ಇಂಧೋರ್ ಘಟಕಗಳಲ್ಲಿ ಬ್ರಿಡ್ಜ್‌ಸ್ಟೋನ್ ಟೈರ್ ಉತ್ಪಾದನೆ ಪುನಾರಂಭ

ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ವಿವಿಧ ರಾಜ್ಯ ಸರ್ಕಾರಗಳಿಗೆ ವಿತರಣೆ ಮಾಡುತ್ತಿವೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಪುಣೆ ಮತ್ತು ಇಂಧೋರ್ ಘಟಕಗಳಲ್ಲಿ ಬ್ರಿಡ್ಜ್‌ಸ್ಟೋನ್ ಟೈರ್ ಉತ್ಪಾದನೆ ಪುನಾರಂಭ

ಮೊದಲ ಮತ್ತು ಎರಡನೇ ಹಂತದ ಲಾಕ್‌ಡೌನ್ ಸಂದರ್ಭದಲ್ಲಿ ಆಟೋ ಉತ್ಪಾದನಾ ಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತು ನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ‍್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೇಟರ್ ಉತ್ಪಾದನೆ ಮಾಡಿ ವೈರಸ್ ವಿರುದ್ಧ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.

ಪುಣೆ ಮತ್ತು ಇಂಧೋರ್ ಘಟಕಗಳಲ್ಲಿ ಬ್ರಿಡ್ಜ್‌ಸ್ಟೋನ್ ಟೈರ್ ಉತ್ಪಾದನೆ ಪುನಾರಂಭ

ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಪುಣೆ ಮತ್ತು ಇಂಧೋರ್ ಘಟಕಗಳಲ್ಲಿ ಬ್ರಿಡ್ಜ್‌ಸ್ಟೋನ್ ಟೈರ್ ಉತ್ಪಾದನೆ ಪುನಾರಂಭ

ಈ ಹಿನ್ನಲೆಯಲ್ಲಿ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನಾ ಘಟಕಗಳನ್ನು ತೆರೆದಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಗರಿಷ್ಠ ಸಹಾಯ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕಾರಣವಾಗಿದೆ.

Most Read Articles

Kannada
English summary
Bridgestone India Announces Resumption Of Operations: Fires Up Pune And Indore Plants.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X