ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರುತ್ತಿರುವ ಬಿಎಸ್-6 ನಿಯಮ ಅನುಸಾರವಾಗಿ ಹೊಸ ವಾಹನಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ತನ್ನ ಪ್ರಮುಖ ಕಾರು ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.

ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಎಕ್ಸ್‌ಯುವಿ300 ಬಿಎಸ್-6 ಪೆಟ್ರೋಲ್ ಆವೃತ್ತಿಯನ್ನು ಈಗಾಗಲೇ ಬಿಡುಗಡೆಗೊಳಿಸುವ ಮೂಲಕ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳನ್ನು ಹೊಸ ಎಂಜಿನ್‌ನೊಂದಿಗೆ ಉನ್ನತೀಕರಿಸುತ್ತಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ಎಕ್ಸ್‌ಯುವಿ500 ಸೇರಿದಂತೆ ವಿವಿಧ ಎಸ್‌ಯುವಿ ಕಾರು ಮಾದರಿಗಳನ್ನು ಹೊಸ ನಿಯಮ ಅನುಸಾರವಾಗಿ ಬಿಡುಗಡೆ ಮಾಡುತ್ತಿದೆ. ಇದಕ್ಕಾಗಿ ಅಂತಿಮ ಹಂತದ ಸಿದ್ದತೆ ನಡೆಸಲಾಗುತ್ತಿದ್ದು, ಹೊಸ ಕಾರುಗಳ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಮಹೀಂದ್ರಾ ಸಂಸ್ಥೆಯು ಸದ್ಯ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಉನ್ನತಿಕರಿಸುತ್ತಿದ್ದು, ಬಿಎಸ್-6 ಎಂಜಿನ್ ಹೊಂದಿರುವ ಎಕ್ಸ್‌ಯುವಿ300 ಪೆಟ್ರೋಲ್ ಆವೃತ್ತಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ಕಾರುಗಳನ್ನು ಸಹ ಹೊಸ ನಿಯಮದಂತೆ ಬಿಡುಗಡೆ ಮಾಡುತ್ತಿದ್ದು, ನ್ಯೂ ಜನರೇಷನ್ ಆವೃತ್ತಿಗಳಲ್ಲಿ ಸಾಕಷ್ಟು ಸುಧಾರಿತ ಗುಣಮಟ್ಟದ ಬಿಡಿಭಾಗಗಳು, ಎಂಜಿನ್ ಸೌಲಭ್ಯ ಮತ್ತು ಅತ್ಯುತ್ತಮ ಪರ್ಫಾಮೆನ್ಸ್‌ ಮೂಲಕ ಗ್ರಾಹಕರ ಆಕರ್ಷಣೆ ಕಾರಣವಾಗಲಿವೆ.

ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಮಾಹಿತಿಗಳ ಪ್ರಕಾರ, ಮಹೀಂದ್ರಾ ಸಂಸ್ಥೆಯು ಎಕ್ಸ್‌ಯುವಿ500 ಮಾದರಿಯಲ್ಲಿ ಈ ಹಿಂದಿನ 2.2-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನೇ ಹೊಸ ತಂತ್ರಜ್ಞಾನದೊಂದಿಗೆ ಮರು ಅಭಿವೃದ್ದಿಗೊಳಿಸಿದ್ದು, 2.2-ಲೀಟರ್ ಪೆಟ್ರೋಲ್ ಎಂಜಿನ್‌ನಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ತೆಗೆದುಹಾಕಲಿದೆಯೆಂತೆ. ಜೊತೆಗೆ ಹೊಸ ನಿಯಮ ಅನುಸಾರವಾಗಿ ಬಿಎಸ್-6 ಆವೃತ್ತಿಗಳಲ್ಲಿ ಹಲವು ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಲಾಗಿದೆ.

ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ಕಾರುಗಳಲ್ಲಿ ಇನ್ಮುಂದೆ ಎಲ್ಲಾ ಮಾದರಿಗಳಲ್ಲೂ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್, ಲೆದರ್ ಸೀಟ್‌ಗಳ ಸೌಲಭ್ಯಗಳಿರಲಿವೆ.

ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಹಾಗೆಯೇ 6 ಏರ್‌ಬ್ಯಾಗ್‌, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

ಬಿಎಸ್-6 ಜಾರಿಗೆ ದಿನಗಣನೆ- ಹೊಸ ಎಕ್ಸ್‌ಯುವಿ500 ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು

ಬೆಲೆ ಹೆಚ್ಚಳ ಬಿಸಿ

ಹೌದು, ಬಿಎಸ್-6 ಎಂಜಿನ್‌ನಿಂದಾಗಿ ಹೊಸ ಕಾರುಗಳ ಬೆಲೆಯಲ್ಲಿ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಪೆಟ್ರೋಲ್ ಕಾರುಗಳು ರೂ.15 ಸಾವಿರದಿಂದ ರೂ.50 ಸಾವಿರ ಮತ್ತು ಡೀಸೆಲ್ ಕಾರುಗಳು ರೂ.50 ಸಾವಿರದಿಂದ ರೂ.1 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

Article Published On: Wednesday, March 18, 2020, 8:45 [IST]
English summary
BS6 Mahindra XUV500 Bookings Open. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+