ಬಿಎಸ್-6 ಹೋಂಡಾ ಸಿವಿಕ್ ಡೀಸೆಲ್ ಆವೃತ್ತಿಯ ಖರೀದಿಗೆ ಬುಕ್ಕಿಂಗ್ ಆರಂಭ
ಹೋಂಡಾ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಸಿವಿಕ್ ಡೀಸೆಲ್ ರೂಪಾಂತರವನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಹೋಂಡಾ ಸಿವಿಕ್ ಡೀಸೆಲ್ ರೂಪಾಂತರವನ್ನು ಮುಂದಿನ ಜುಲೈ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಇದೀಗ ಹೋಂಡಾ ಕಂಪನಿಯು ಈ ಬಿಎಸ್-6 ಸಿವಿಕ್ ಡೀಸೆಲ್ ರೂಪಾಂತರದ ಬಿಡುಗಡೆ ಫೂರ್ವ ಬುಕ್ಕಿಂಗ್ ಅನ್ನು ಆರಂಭಿಸಲಾಗಿದೆ. ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಹೋಂಡಾ ಸಿವಿಕ್ ಪೆಟ್ರೋಲ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದರು. ಹೋಂಡಾ ಸಿವಿಕ್ ಡೀಸೆಲ್ ಆವೃತ್ತಿಯಲ್ಲಿ 1.6- ಲೀಟರ್ ಐ-ಡಿಟಿಇಸಿ ಟರ್ಬೊ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಹಿಂದಿನ ಬಿಎಸ್-4 ಡೀಸೆಲ್ ಎಂಜಿನ್ ಮಾದರಿಯಲ್ಲಿ 4,000 ಆರ್‌ಪಿಎಂನಲ್ಲಿ 120 ಬಿಹೆಚ್‍ಪಿ ಪವರ್ ಮತ್ತು 2,000 ಆರ್‌ಪಿಎಂನಲ್ಲಿ 300 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಆದರೆ ಬಿಎಸ್-6 ಮಾದರಿಯ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಬಹಿರಂಗವಾಗಿಲ್ಲ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಹಿಂದಿನ ಬಿಎಸ್-4 ಸಿವಿಕ್ ಡೀಸೆಲ್ ಆವೃತ್ತಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.20.5 ಲಕ್ಷಗಳಾಗಿತ್ತು. ಇನ್ನು ಬಿಎಸ್-6 ಹೋಂಡಾ ಸಿವಿಕ್ ಪೆಟ್ರೋಲ್ ಆವೃತ್ತಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.17.93 ಲಕ್ಷಗಳಾಗಿದೆ.

ಹೊಸ ಹೋಂಡಾ ಸಿವಿಕ್ ಕಾರಿನಲ್ಲಿ ಆಕರ್ಷಕ ಇಂಟಿರಿಯರ್ ಅನ್ನು ಹೊಂದಿದೆ. ಈ ಇಂಟಿರಿಯರ್ ನಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗೆ ಹೊಂದಿಕೆಯಾಗುವ 17.7 ಇಂಚಿನ ಟಚ್ ಸ್ಕ್ರೀನ್ ಸಿಸ್ಟಂ ಅನ್ನು ಹೊಂದಿದೆ.
MOST READ: ದೋಷ ಪೂರಿತ ಕಾರುಗಳನ್ನು ರಿಕಾಲ್ ಮಾಡಲು ಮುಂದಾದ ಹೋಂಡಾ

ಈ ಹೊಸ ಹೋಂಡಾ ಸಿವಿಕ್ ಕಾರಿನಲ್ಲಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರಿಮೋಟ್ ಎಂಜಿನ್ ಸ್ಟಾರ್ಟರ್, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್ ಮತ್ತು ಲೇನ್ ವಾಚ್ ಅತ್ಯಾಧುನಿಕ ಫೀಚರ್ ಗಳನ್ನು ಅಳವಡಿಸಲಾಗಿದೆ.ಹೊಸ ಸಿವಿಕ್ ಕಾರಿನ ಹೊರಭಾಗದಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಸಿ-ಆಕಾರದ ಎಲ್‌ಇಡಿ ಟೈಲ್ ಲ್ಯಾಂಪ್ ಅನ್ನು ಹೊಂದಿದೆ.

ಇದರೊಂದಿಗೆ ಹೋಂಡಾ ಕಂಪನಿಯು ತನ್ನ ಬಹುನಿರೀಕ್ಷಿತ 2020ರ ಸಿಟಿ ಕಾರನ್ನು ಕೂಡ ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಿಂದಾಗಿ ಬಹುನಿರೀಕ್ಷಿತ ಹೊಸ ಹೋಂಡಾ ಸಿಟಿ ಕಾರಿನ ಬಿಡುಗಡೆಯು ವಿಳಂಭವಾಗಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಭಾರತದಲ್ಲಿ ಕರೋನಾ ಭೀತಿಯಿಂದ ದೇಶಾದ್ಯಂತ ಲಾಕ್‍ಡೌನ್ ಮುಂದುವರಿಸಿರುವುದರಿಂದ ಹೊಸ ಹೋಂಡಾ ಸಿಟಿ ಕಾರಿನ ಬಿಡುಗಡೆಯು ಮತ್ತಷ್ಟು ತಡವಾಗಿದೆ. ಆದರೆ ಈ ಹೊಸ ಕಾರನ್ನು ಭಾರತೀಯ ಮಾರುಕಟ್ಟೆಯಲಿ ಈ ತಿಂಗಳು ಬಿಡುಗಡೆಗೊಳಿಸುವ ಸಾದ್ಯತೆಗಳಿದೆ.

ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಹೋಂಡಾ ಸಿವಿಕ್ ಪೆಟ್ರೋಲ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದರು. ಪೆಟ್ರೋಲ್ ಆವೃತ್ತಿಯು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಯಶಸ್ವಿಯಾಗಿರುವುದರಿಂದ ಡೀಸೆಲ್ ಆವೃತ್ತಿಯಲ್ಲಿಯು ಹೋಂಡಾ ಸಿವಿಕ್ ಕಾರನ್ನು ಬಿಡುಗಡೆಗೊಳಿಸಲು ಮುಂದಾಗಿದೆ.


Click it and Unblock the Notifications