ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್ ಕಾರು

ಜಪಾನ್ ಮೂಲದ ಹೋಂಡಾ ಕಂಪನಿಯು ತನ್ನ ಬಹುನಿರೀಕ್ಷಿತ ಬಿಎಸ್-6 ಜಾಝ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಹೋಂಡಾ ಜಾಝ್ ಕಾರನ್ನು ಇದೇ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ಹೋಂಡಾ ಕಂಪನಿಯು ಸ್ಪಷ್ಟಪಡಿಸಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್ ಕಾರು

ಹೊಸ ಹೋಂಡಾ ಜಾಝ್ ಕಾರಿನ ಕೆಲವು ಬದಲಾವಣೆಗಳೊಂದಿಗೆ ಹೊಸ ಫೀಚರ್ಸ್‍ಗಳನ್ನು ಅಳವಡಿಸಲಾಗುತ್ತದೆ. ಈ ಕಾರಿನ ಇಂಟಿರಿಯರ್ ನಲ್ಲಿ ಕೆಲವು ಬದಲಾವಣೆಗಳನ್ನು ನಡೆಸಬಹುದು ಎಂದು ನಿರೀಕ್ಷಿಸುತ್ತೇವೆ. ಹಿಂದಿನ ಮಾದರಿಗಳಲ್ಲಿ ಕಂಡುಬರುವ ಟಚ್‍ಪ್ಯಾಡ್ ಏರ್-ಕಾನ್ ಯುನಿಟ್ ಅನ್ನು ಹೊಸ ಮಾದರಿಯಲ್ಲಿ ಬದಲಾವಣೆಯನ್ನು ಮಾಡುವ ಸಾಧ್ಯತೆಗಳಿದೆ. ಇದೇ ರೀತಿ ಹಲವು ನವೀಕರಣಗಳೊಂದಿಗೆ ಹೊಸ ಜಾಝ್ ಕಾರು ಬಿಡುಗಡೆಯಾಗಲಿದೆ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್ ಕಾರು

ಬಿಎಸ್-6 ಜಾಝ್ ಕಾರು ಹೊಸ ವಿನ್ಯಾಸವನ್ನು ಹೊಂದಿದೆ. ಹೊಸ ಚಿತ್ರದಲ್ಲಿ ಬಿಎಸ್-6 ಜಾಝ್ ಕಾರಿನ ಮುಂಭಾಗ ಎಲ್ಇಡಿ ಡಿಆರ್‍‍ಎಲ್ ಜೊತೆಗೆ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ದೊಡ್ಡ ಗ್ರಿಲ್ ಅನ್ನು ಹೊಂದಿದೆ.

MOST READ: ಡೀಲರ್ ಬಳಿ ತಲುಪಿದ 2020ರ ಹೋಂಡಾ ಸಿಟಿ ಕಾರು

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್ ಕಾರು

ಈ ಹೊಸ ಕಾರಿನ ಡ್ಯಾಶ್‌ಬೋರ್ಡ್ ನಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ನಿರೀಕ್ಷಿಸುತ್ತೇವೆ. ಈ ಹೊಸ ಹೋಂಡಾ ಜಾಝ್ ಕಾರಿನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‍‍ಪ್ಲೇಯನ್ನು ಕನೆಕ್ಟ್ ಆಗಿರುವ ಏಳು ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್ ಕಾರು

ಇದರೊಂದಿಗೆ ಬ್ಲೂಟೂತ್ ಕನೆಕ್ಟಿವಿಟಿ, ಕ್ರೂಸ್ ಕಂಟ್ರೋಲ್, ಸೆಮಿ ಡಿಜೆಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಕ್ಲೈಮೆಂಟ್ ಕಂಟ್ರೋಲ್ ಮತ್ತು ಪುಶ್ ಬಟನ್ ಅನ್ನು ಹೊಂದಿರಲಿದೆ. ಹೊಸ ಹೋಂಡಾ ಜಾಝ್ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್ ಕಾರು

ಈ ಕಾರಿನಲ್ಲಿ ಸುರಕ್ಷತೆಗಾಗಿ ಡ್ಯುಯಲ್-ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಪಾರ್ಕಿಂಗ್ ಸೆನ್ಸರ್‌ಗಳೊಂದಿಗೆ ರೇರ್ ಕ್ಯಾಮೆರಾ, ಐಎಸ್‌ಒಫಿಕ್ಸ್ ಮೌಂಟ್ಸ್ ಅನ್ನು ಹೊಂದಿರುತ್ತದೆ. ಈ ಕಾರಿನಲ್ಲಿ ಒಟ್ಟು ಆರು ಏರ್‌ಬ್ಯಾಗ್‌‍ಗಳನ್ನು ಅಳವಡಿಸಲಾಗುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್ ಕಾರು

ಹೊಸ ಹೋಂಡಾ ಜಾಝ್ ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ. ಈ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಭಿವೃದ್ದಿಪಡಿಸಲಾಗುತ್ತದೆ. ಈ ಕಾರಿನಲ್ಲಿ 1.2-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್ ಕಾರು

ಹೋಂಡಾ ಜಾಝ್ ಕಾರಿನ ಒಳ ಭಾಗದಲ್ಲಿ ಉತ್ತಮ ಸ್ಪೇಸ್ ಅನ್ನು ಹೊಂದಿರುವುದರಿಂದ ಆರಾಮದಾಯಕವಾಗಿ ಕುಳಿತು ಪ್ರಯಾಣಿಸಬಹುದಾಗಿದೆ. ಹೊಸ ಹೋಂಡಾ ಜಾಝ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೋಂಡಾ ಜಾಝ್ ಕಾರು

ಬಿಎಸ್-6 ಹೋಂಡಾ ಜಾಝ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಐ20, ಫೋಕ್ಸ್‍ವ್ಯಾಗನ್ ಪೊಲೊ, ಮಾರುತಿ ಬಲೆನೊ, ಟೊಯೊಟಾ ಗ್ಲಾಂಝಾ ಮತ್ತು ಟಾಟಾ ಆಲ್ಟ್ರೋಜ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Wednesday, July 1, 2020, 18:52 [IST]
English summary
Honda Jazz BS6 Model To Launch Soon In India. Read In Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+