ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಜಾಝ್ ಕಾರು
ಹೋಂಡಾ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಬಿಎಸ್-6 ಜಾಝ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಬಿಎಸ್-6 ಹೋಂಡಾ ಜಾಝ್ ಕಾರು ಹೊಸ ಫೀಚರ್‍ಗಳೊಂದಿಗೆ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಹೊಸ ಹೋಂಡಾ ಜಾಝ್ ಕಾರಿನ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಹೊಸ ಹೋಂಡಾ ಜಾಝ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಹೋಂಡಾ ಕಂಪನಿಯ ಅಧಿಕೃತ ಡೀಲರ್ ಬಳಿ ತೆರಳಿ ಟೋಕನ್ ಮೊತ್ತ ರೂ.21,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಹೊಸ ಜಾಝ್ ಕಾರಿಗಾಗಿ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರು ಟೋಕನ್ ಮೊತ್ತ ರೂ.5,000 ಪಾವತಿಸಿ ಕಾಯ್ದಿರಿಸಬಹುದಾಗಿದೆ. ಈ ಹೊಸ ಜಾಝ್ ಈ ಹೊಸ ಜಾಝ್ ಕಾರು ಇದೇ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಈಗಗಾಲೇ ಈ ಹೊಸ ಜಾಝ್ ಕಾರು ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ. ಈ ಬಿಎಸ್-6 ಜಾಝ್ ಕಾರು ಡೀಲರ್ ಬಳಿ ತಲುಪಿರುವ ಚಿತ್ರಗಳು ಆನ್‍ಲೈನ್‍ನಲ್ಲಿ ಬಹಿರಂಗವಾಗಿದೆ.ಹೊಸ ಹೋಂಡಾ ಜಾಝ್ ಕಾರಿನ ಕೆಲವು ಬದಲಾವಣೆಗಳೊಂದಿಗೆ ಹೊಸ ಫೀಚರ್ಸ್‍ಗಳನ್ನು ಅಳವಡಿಸಲಾಗುತ್ತದೆ. ಈ ಕಾರಿನ ಇಂಟಿರಿಯರ್ ನಲ್ಲಿ ಕೆಲವು ಬದಲಾವಣೆಗಳನ್ನು ನಡೆಸಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಈ ಹೊಸ ಹೋಂಡಾ ಜಾಝ್ ಕಾರು ಸ್ಟೈಲಿಶ್ ಮತ್ತು ಸ್ಪೋರ್ಟಿ ಆಗಿರುತ್ತದೆ ಎಂದು ಹೇಳಬಹುದು. ಬಿಎಸ್-6 ಜಾಝ್ ಕಾರು ಹೊಸ ವಿನ್ಯಾಸವನ್ನು ಹೊಂದಿದೆ. ಹೊಸ ಚಿತ್ರದಲ್ಲಿ ಬಿಎಸ್-6 ಜಾಝ್ ಕಾರಿನ ಮುಂಭಾಗ ಎಲ್ಇಡಿ ಡಿಆರ್‍ಎಲ್ ಜೊತೆಗೆ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ದೊಡ್ಡ ಗ್ರಿಲ್ ಅನ್ನು ಹೊಂದಿದೆ.

ಈ ಹೊಸ ಕಾರಿನ ಡ್ಯಾಶ್‌ಬೋರ್ಡ್ ನಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ನಿರೀಕ್ಷಿಸುತ್ತೇವೆ. ಈ ಹೊಸ ಹೋಂಡಾ ಜಾಝ್ ಕಾರಿನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‍ಪ್ಲೇಯನ್ನು ಕನೆಕ್ಟ್ ಆಗಿರುವ ಏಳು ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇದರೊಂದಿಗೆ ಬ್ಲೂಟೂತ್ ಕನೆಕ್ಟಿವಿಟಿ, ಕ್ರೂಸ್ ಕಂಟ್ರೋಲ್, ಸೆಮಿ ಡಿಜೆಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಕ್ಲೈಮೆಂಟ್ ಕಂಟ್ರೋಲ್ ಮತ್ತು ಪುಶ್ ಬಟನ್ ಅನ್ನು ಹೊಂದಿರಲಿದೆ. ಹೊಸ ಹೋಂಡಾ ಜಾಝ್ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ.

ಈ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಡ್ಯುಯಲ್-ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಪಾರ್ಕಿಂಗ್ ಸೆನ್ಸರ್‌ಗಳೊಂದಿಗೆ ರೇರ್ ಕ್ಯಾಮೆರಾ, ಐಎಸ್‌ಒಫಿಕ್ಸ್ ಮೌಂಟ್ಸ್ ಅನ್ನು ಹೊಂದಿರುತ್ತದೆ. ಈ ಕಾರಿನಲ್ಲಿ ಒಟ್ಟು ಆರು ಏರ್‌ಬ್ಯಾಗ್‌ಗಳನ್ನು ಅಳವಡಿಸಲಾಗುತ್ತದೆ.
MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಹೊಸ ಹೋಂಡಾ ಜಾಝ್ ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ. ಈ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಭಿವೃದ್ದಿಪಡಿಸಲಾಗುತ್ತದೆ. ಈ ಹೊಸ ಕಾರಿನಲ್ಲಿ 1.2-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.

ಈ ಹೊಸ ಹೋಂಡಾ ಜಾಝ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಐ20, ಫೋಕ್ಸ್‍ವ್ಯಾಗನ್ ಪೊಲೊ, ಮಾರುತಿ ಬಲೆನೊ, ಟೊಯೊಟಾ ಗ್ಲಾಂಝಾ ಮತ್ತು ಟಾಟಾ ಆಲ್ಟ್ರೋಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications