ಹೂಸ ಫೀಚರ್‍‍ಗಳೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಜಾಝ್ ಕಾರು

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಬಿಎಸ್-6 ಜಾಝ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಬಿಎಸ್-6 ಹೋಂಡಾ ಜಾಝ್ ಕಾರು ಹೊಸ ಫೀಚರ್‍‍ಗಳೊಂದಿಗೆ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಹೂಸ ಫೀಚರ್‍‍ಗಳೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಜಾಝ್ ಕಾರು

ಹೋಂಡಾ ಕಂಪನಿಯು ಈ ಹೊಸ ಜಾಝ್ ಕಾರಿನ ಪ್ರಿ ಬುಕ್ಕಿಂಗ್ ಅನ್ನು ಇತ್ತೀಚೆಗೆ ಪ್ರಾರಂಭಿಸಿದೆ. ಹೊಸ ಹೋಂಡಾ ಜಾಝ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಹೋಂಡಾ ಕಂಪನಿಯ ಅಧಿಕೃತ ಡೀಲರ್ ಬಳಿ ತೆರಳಿ ಟೋಕನ್ ಮೊತ್ತ ರೂ.21,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಹೊಸ ಜಾಝ್ ಕಾರಿಗಾಗಿ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರು ಟೋಕನ್ ಮೊತ್ತ ರೂ.5,000 ಪಾವತಿಸಿ ಕಾಯ್ದಿರಿಸಬಹುದಾಗಿದೆ. ಈ ಹೊಸ ಜಾಝ್ ಕಾರು ಇದೇ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಹೂಸ ಫೀಚರ್‍‍ಗಳೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಜಾಝ್ ಕಾರು

ಹೊಸ ಹೋಂಡಾ ಜಾಝ್ ಕಾರಿನ ಕೆಲವು ಬದಲಾವಣೆಗಳೊಂದಿಗೆ ಹೊಸ ಫೀಚರ್ಸ್‍ಗಳನ್ನು ಅಳವಡಿಸಲಾಗುತ್ತದೆ. ಈ ಕಾರಿನ ಇಂಟಿರಿಯರ್ ನಲ್ಲಿ ಕೆಲವು ಬದಲಾವಣೆಗಳನ್ನು ನಡೆಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಹೂಸ ಫೀಚರ್‍‍ಗಳೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಜಾಝ್ ಕಾರು

ಸನ್‌ರೂಫ್

ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಸನ್‌ರೂಫ್ ಅನ್ನು ಪರಿಚಯಿಸಿದೆ. ಈ ಹೊಸ ಹೋಂಡಾ ಜಾಝ್ ಕಾರಿನಲ್ಲಿ ಸುಲಭವಾದ ಒನ್-ಟಚ್ ಎಲೆಕ್ಟ್ರಿಕ್ ಮ್ಯಾಕಾನಿಸಂ ಮೂಲಕ ಸನ್‌ರೂಫ್ ಅನ್ನು ನಿಯಂತ್ರಸಬಹುದಾಗಿದೆ.

ಹೂಸ ಫೀಚರ್‍‍ಗಳೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಜಾಝ್ ಕಾರು

ಆಕರ್ಷಕ ಸೀಟುಗಳು

ಬಿಎಸ್-6 ಜಾಝ್ ಕಾರಿನಲ್ಲಿ ಆಕರ್ಷಕ ಮತ್ತು ಹೆಚ್ಚು ಕಂಫರ್ಟ್ ಅನುಭವ ನೀಡುವ ಸೀಟುಗಳನ್ನು ಅಳವಡಿಸಲಾಗಿದೆ. ಈ ಸೀಟುಗಳು ಹೊಸ ಜಾಝ್ ಕಾರಿನ ಒಳಭಾಗದಲ್ಲಿ ಹೆಚ್ಚು ಪ್ರೀಮಿಯಂ ಲುಕ್ ಅನ್ನು ನೀಡುತ್ತದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಹೂಸ ಫೀಚರ್‍‍ಗಳೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಜಾಝ್ ಕಾರು

ಹೆಚ್ಚಿನ ಸ್ಪೇಸ್

ಈ ಹೊಸ ಹೋಂಡಾ ಜಾಝ್ ಕಾರಿನ ಒಳಭಾಗದಲ್ಲಿ ಹೆಚ್ಚಿನ ಸ್ಪೇಸ್ ಅನ್ನು ಹೊಂದಿದೆ. ಹೆಚ್ಚಿನ ಸ್ಪೇಸ್ ಹೊಂದಿರುವುದರಿಂದ ಎರಡನೇ ಸಾಲಿನ ಸೀಟುಗಳಲ್ಲಿ ಕುಳಿತು ಪ್ರಯಾಣಿಕರು ಆರಾಮದಾಯಕವಾಗಿ ಪ್ರಯಾಣಿಸಬಹುದಾಗಿದೆ. ಇದು ಹೆಚ್ಚಾಗಿ ಲಾಗ್ ರೈಡ್ ತೆರಳುವಾಗ ಹೆಚ್ಚು ಸಹಕಾರಿಯಾಗಿರುತ್ತದೆ.

ಹೂಸ ಫೀಚರ್‍‍ಗಳೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಜಾಝ್ ಕಾರು

ಈ ಹೊಸ ಕಾರಿನ ಡ್ಯಾಶ್‌ಬೋರ್ಡ್ ನಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ನಿರೀಕ್ಷಿಸುತ್ತೇವೆ. ಈ ಹೊಸ ಹೋಂಡಾ ಜಾಝ್ ಕಾರಿನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‍‍ಪ್ಲೇಯನ್ನು ಕನೆಕ್ಟ್ ಆಗಿರುವ ಏಳು ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರೊಂದಿಗೆ ಬ್ಲೂಟೂತ್ ಕನೆಕ್ಟಿವಿಟಿ, ಕ್ರೂಸ್ ಕಂಟ್ರೋಲ್, ಸೆಮಿ ಡಿಜೆಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಕ್ಲೈಮೆಂಟ್ ಕಂಟ್ರೋಲ್ ಮತ್ತು ಪುಶ್ ಬಟನ್ ಅನ್ನು ಹೊಂದಿರಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೂಸ ಫೀಚರ್‍‍ಗಳೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಜಾಝ್ ಕಾರು

ಹೊಸ ಹೋಂಡಾ ಜಾಝ್ ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ. ಈ ಕಾರಿನಲ್ಲಿ 1.2-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.

ಹೂಸ ಫೀಚರ್‍‍ಗಳೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಜಾಝ್ ಕಾರು

ಹೊಸ ಹೋಂಡಾ ಜಾಝ್ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಐ20, ಫೋಕ್ಸ್‍ವ್ಯಾಗನ್ ಪೊಲೊ, ಮಾರುತಿ ಬಲೆನೊ, ಟೊಯೊಟಾ ಗ್ಲಾಂಝಾ ಮತ್ತು ಟಾಟಾ ಆಲ್ಟ್ರೋಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಹೋಂಡಾ honda
English summary
2020 Honda Jazz - Top 3 Interior Highlights. Read In Kannada.
Story first published: Wednesday, August 12, 2020, 20:07 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X