Just In
Don't Miss!
- Movies
KSRTC ಬಸ್ಸಿನಲ್ಲಿ ನಿರ್ಮಾಣವಾದ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲಿಸಿದ ನಟಿ ಶ್ರುತಿ
- News
ಕಬ್ಬನ್ ಉದ್ಯಾನ ವ್ಯಾಪ್ತಿಯಲ್ಲಿ ನಿಯಮಬಾಹಿರ ಕಟ್ಟಡ ನಿರ್ಮಾಣ: ನೋಟಿಸ್
- Lifestyle
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
- Sports
ಹೊಸ ಪರೀಕ್ಷೆಗೆ ಒಳಗಾಗಬೇಕು ಕ್ರಿಕೆಟ್ ತಾರೆಯರು: 8.30 ನಿಮಿಷದಲ್ಲಿ 2 ಕಿ.ಮೀ ಗುರಿ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪೆಟ್ರೋಲ್ ಮಾದರಿಗಿಂತಲೂ ಹೆಚ್ಚಿನ ಬೇಡಿಕೆ ಪಡೆದ ಹ್ಯುಂಡೈ ಕ್ರೆಟಾ ಡೀಸೆಲ್ ಮಾದರಿ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಬಿಎಸ್-6 ಕ್ರೆಟಾ ಎಸ್‍ಯುವಿಯನ್ನು ಈ ವರ್ಷದ ಮಾರ್ಚ್ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಹ್ಯುಂಡೈ ಇಂಡಿಯಾ ಕಂಪನಿಯು ಬಿಎಸ್-6 ಕ್ರೆಟಾ ಎಸ್‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿತ್ತು.

ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದಾಗಿನಿಂದ ಇದುವರೆಗೂ 2020ರ ಹ್ಯುಂಡೈ ಕ್ರೆಟಾ ಎಸ್‌ಯುವಿಗಾಗಿ 45,000ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆಯಲಾಗಿದೆ. ಕರೋನಾ ವೈರಸ್ ಸಂಕಷ್ಟದ ಸಮಯದಲ್ಲೂ ಹ್ಯುಂಡೈ ಕ್ರೆಟಾದ 45,000ಕ್ಕೂ ಹೆಚ್ಚು ಯುನಿಟ್‌ಗಳನ್ನು ಬುಕ್ಕಿಂಗ್ ಮಾಡಲಾಗಿದೆ. ಕ್ರೆಟಾ ಎಸ್‌ಯುವಿಯು ದೇಶಾದ್ಯಂತ 4.85 ಲಕ್ಷ ಗ್ರಾಹಕರನ್ನು ಹೊಂದಿದೆ ಎಂದು ಹ್ಯುಂಡೈ ಹೇಳಿದೆ. ಈ ಮಿಡ್ ಎಸ್‍ಯುವಿಯು ಬಿಡುಗಡೆಯಾದ ಕೆಲವೇ ತಿಂಗಳಲ್ಲಿ ಹೊಸ ಮೈಲಿಗಲ್ಲು ಸಾಧಿಸುವಲ್ಲಿ ಯಶ್ವಸಿಯಾಗಿದೆ.

ಹ್ಯುಂಡೈ ಕಂಪನಿಯು ಕ್ರೆಟಾ ಎಸ್‌ಯುವಿಯನ್ನು ಆಟೋಮ್ಯಾಟಿಕ್, ಬ್ಲೂಲಿಂಕ್, ಏರ್ ಪ್ಯೂರಿಫೈಯರ್ ಹಾಗೂ ಸನ್ ರೂಫ್ ಮಾದರಿಗಳಲ್ಲಿ ಮಾರಾಟ ಮಾಡುತ್ತದೆ. ಹೆಚ್ಚಿನ ಸಂಖ್ಯೆಯ ಜನರು ಕ್ರೆಟಾದ ಡೀಸೆಲ್ ಮಾದರಿಯನ್ನು ಇಷ್ಟಪಡುತ್ತಾರೆ ಎಂದು ಕಂಪನಿ ತಿಳಿಸಿದೆ.
MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಇದುವರೆಗೂ ಒಟ್ಟಾರೆಯಾಗಿ ಮಾರಾಟವಾದ ಕ್ರೆಟಾ ಎಸ್‌ಯುವಿಯಲ್ಲಿ 56%ನಷ್ಟು ಕಾರುಗಳು ಡೀಸೆಲ್ ಮಾದರಿಯಾಗಿವೆ. ಲಾಕ್‌ಡೌನ್ ಸಡಿಲಿಕೆಯ ನಂತರ ಪ್ರತಿ 3 ನಿಮಿಷಗಳಿಗೊಂದರಂತೆ ಹ್ಯುಂಡೈ ಕ್ರೆಟಾವನ್ನು ಬುಕ್ಕಿಂಗ್ ಮಾಡಲಾಗುತ್ತಿದೆ ಎಂದು ಕಂಪನಿ ಹೇಳಿದೆ.

ಹೊಸ ಹ್ಯುಂಡೈ ಕ್ರೆಟಾ ಎಸ್‌ಯುವಿಯನ್ನು 1.5 ಲೀಟರಿನ ಪೆಟ್ರೋಲ್, 1.4 ಲೀಟರಿನ ಟರ್ಬೊ ಪೆಟ್ರೋಲ್ ಹಾಗೂ 1.5 ಲೀಟರಿನ ಡೀಸೆಲ್ ಎಂಜಿನ್ ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಹ್ಯುಂಡೈ ಕಂಪನಿಯು ಈ ಎಸ್‌ಯುವಿಯನ್ನು 5 ಟ್ರಿಮ್ ಹಾಗೂ 14 ಮಾದರಿಗಳಲ್ಲಿ ಮಾರಾಟ ಮಾಡುತ್ತದೆ.
MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿ

ಈ ಬಿಎಸ್-6 ಹ್ಯುಂಡೈ ಕ್ರೆಟಾ ಎಸ್‌ಯುವಿಯ ಬೆಲೆ ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.9.99 ಲಕ್ಷಗಳಾಗಿದೆ. ಎಲ್ಲಾ ಎಂಜಿನ್ ಗಳಲ್ಲಿಯೂ 6 ಸ್ಪೀಡಿನ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಸ್ಟಾಂಡರ್ಡ್ ಆಗಿ ನೀಡಲಾಗುತ್ತದೆ.

ಇದರ ಜೊತೆಗೆ 6 ಸ್ಪೀಡಿನ ಆಟೋಮ್ಯಾಟಿಕ್ ಹಾಗೂ 7 ಸ್ಪೀಡಿನ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಗಳನ್ನು ಸಹ ನೀಡಲಾಗುತ್ತದೆ. ಹೊಸ ಹ್ಯುಂಡೈ ಕ್ರೆಟಾ ಎಸ್‌ಯುವಿಯ ಇಂಟಿರಿಯರ್ ನಲ್ಲಿ ಮಲ್ಟಿಫಂಕ್ಷನ್ ಸ್ಟೀಯರಿಂಗ್ ವ್ಹೀಲ್ ಹಾಗೂ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂಗಳನ್ನು ನೀಡಲಾಗಿದೆ.
MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಇವುಗಳ ಜೊತೆಗೆ ಪನೊರಾಮಿಕ್ ಸನ್‌ರೂಫ್ ಹಾಗೂ ಹ್ಯುಂಡೈ ಕಂಪನಿಯ ಕನೆಕ್ಟೆಡ್ ಟೆಕ್ನಾಲಜಿಯ ಬ್ಲೂ ಲಿಂಕ್ ಸಹ ನೀಡಲಾಗಿದೆ. ಹೊಸ ಹ್ಯುಂಡೈ ಕ್ರೆಟಾ ಜೂನ್ ತಿಂಗಳಿನಲ್ಲಿ ದೇಶದಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ.

ಈ ಜನಪ್ರಿಯಯ ಬಿಎಸ್-6 ಹ್ಯುಂಡೈ ಕ್ರೆಟಾ ದೇಶಿಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ರೆನಾಲ್ಟ್ ಡಸ್ಟರ್, ಎಂಜಿ ಹೆಕ್ಟರ್ ಹಾಗೂ ಟಾಟಾ ಹ್ಯಾರಿಯರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.