ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಮಹೀಂದ್ರಾ ಬೊಲೆರೊ
ಮಹೀಂದ್ರಾ ಕಂಪನಿಯ ಎಸ್‍ಯುವಿಗಳ ಸರಣಿಯಲ್ಲಿ ಬೊಲೆರೊ ಇತರ ಮಾದರಿಗಳಿಗಿಂತ ಉತ್ತಮವಾಗಿ ಮಾರಾಟವಾಗುತ್ತಿದೆ. ಕಳೆದ ಜೂನ್ ತಿಂಗಳಲ್ಲಿ ಮಹಿಂದ್ರಾ ಬೊಲೆರೊ ಎಸ್‍ಯುವಿಯ 3,292 ಯುನಿಟ್‍ಗಳು ಮಾರಾಟವಾಗಿವೆ.

ಇನ್ನು ಮಹಿಂದ್ರಾ ಕಂಪನಿಯ ಸ್ಕಾರ್ಪಿಯೋ ಒಟ್ಟು 2,574 ಯುನಿಟ್ ಮಾರಾಟದೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡರೆ, ಎಕ್ಸ್‌ಯುವಿ 300 ಸಬ್ ಕಾಂಪ್ಯಾಕ್ಟ್ ಎಸ್‌ಯುವಿ 1,812 ಯುನಿಟ್‌ಗಳ ಮಾರಾಟದೊಂದಿಗೆ ಮೂರನೇಯ ಸ್ಥಾನವನ್ನು ಪಡೆದುಕೊಂಡಿದೆ. ಮಹೀಂದ್ರಾ ಎಸ್‍ಯುವಿಗಳ ಮಾರಾಟದಲ್ಲಿ ಬೊಲೆರೊ ಉತ್ತಮ ಕೊಡುಗೆಯನ್ನು ನೀಡುತ್ತಿದೆ.ಕೊರೊನಾ ಭೀತಿಯ ನಡುವೆ ಬೊಲೆರೊ ಎಸ್‍ಯುವಿಯು ಭರ್ಜರಿಯಾಗಿ ಮಾರಾಟವಾಗಿದೆ.

ಮಹೀಂದ್ರಾ ಕಂಪನಿಯು ಜನಪ್ರಿಯ ಬೊಲೆರೊ ಎಸ್‍ಯುವಿಯನ್ನು ಮೊದಲ ಬಾರಿಗೆ 2000ದಲ್ಲಿ ಬಿಡುಗಡೆಗೊಳಿಸಿದ್ದರು. ಇಂದಿಗೂ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್ಯುವಿ

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಬಿಎಸ್-6 ಬೊಲೆರೊ ಎಸ್‍ಯುವಿಯನ್ನು ಈ ವರ್ಷದ ಮಾರ್ಚ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಹೊಸ ಬೊಲೆರೊ ಎಸ್‍ಯುವಿಯ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7.98 ಲಕ್ಷಗಳಾಗಿದೆ.

ಬಿಎಸ್-6 ಬೊಲೆರೊ ಬಿ4, ಬಿ6 ಮತ್ತು ಬಿ6(ಒ) ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಹೊಸ ಬೊಲೆರೊ ಬಿ6(ಒ) ಟಾಪ್ ಎಂಡ್ ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.8.99 ಲಕ್ಷಗಳಾಗಿದೆ. ಮಹೀಂದ್ರಾ ಕಂಪನಿಯು ಈ ಬೊಲೆರೊವನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಬೊಲೆರೊ ಮುಂಭಾಗದಲ್ಲಿ ಹೊಸ ಬಂಪರ್, ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಹೆಡ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಹೊಸ ಬೊಲೆರೊ ಆಕರ್ಷಕ ಲುಕ್ ಅನ್ನು ಹೊಂದಿದೆ.

ಬಿಎಸ್-6 ಬೊಲೆರೊ ಎಸ್‍ಯುವಿನಲ್ಲಿ ಹೊಸ ಕ್ರ್ಯಾಶ್ ಟೆಸ್ಟ್ ಸುರಕ್ಷತಾ ನಿಯಮಕ್ಕೆ ಅನುಗುಣವಾಗಿ ಅದರ ಮಂಭಾಗವನ್ನು ನವೀಕರಿಸಲಾಗಿದೆ. ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ.
MOST READ: ಬಿಡುಗಡೆಗೆ ಸಜ್ಜಾದ ಹೊಸ ಹ್ಯುಂಡೈ ಟಕ್ಸನ್ ಫೇಸ್‍ಲಿಫ್ಟ್ ಎಸ್ಯುವಿ

ಬಿಎಸ್-6 ಬೊಲೆರೊದಲ್ಲಿ 1.5 ಎಲ್ 3-ಸಿಲಿಂಡರ್ ಎಮ್ಹಾಕ್ 75 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ 1.5 ಲೀಟರ್ ಎಂಜಿನ್ 75 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ ಈ ಎಂಜಿನ್ 195 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮಾನ್ಯುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಿಎಸ್-6 ಮಹೀಂದ್ರಾ ಬೊಲೆರೊ ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍ಯುವಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿದೆ. ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಎಸ್‍ಯುವಿ ವಿಭಾಗದಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ


Click it and Unblock the Notifications








