ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿ

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಬಿಎಸ್-6 ಬೊಲೆರೊ ಎಸ್‍ಯುವಿಯನ್ನು ಈ ವರ್ಷದ ಮಾರ್ಚ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಇದೀಗ ಈ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿಯು ತುಸು ದುಬಾರಿಯಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿ

ಮಹೀಂದ್ರಾ ಕಂಪನಿಯು ಜನಪ್ರಿಯ ಬೊಲೆರೊ ಎಸ್‍ಯುವಿಯ ಬೆಲೆಯನ್ನು ಹೆಚ್ಚಿಸಿದೆ. ಬಿಎಸ್-6 ಬೊಲೆರೊ ಬಿ4, ಬಿ6 ಮತ್ತು ಬಿ6(ಒ) ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಮಹೀಂದ್ರಾ ಎಸ್‍ಯುವಿಯನ್ನು ಎಕ್ಸ್ ಶೋರೂಂ ಪ್ರಕಾರ ರೂ.7.98 ಲಕ್ಷ ಆರಂಭಿಕ ಬೆಲೆಯಲ್ಲಿ ಬಿಡುಗಡೆಗೊಳಿಸಿದ್ದರು. ಆದರೆ ಇದೀಗ ಬಿಎಸ್-6 ಬೊಲೆರೊ ಎಸ್‍ಯುವಿಯ ಬೆಲೆಯನ್ನು ರೂ.35,000 ಗಳವರೆಗೆ ಹೆಚ್ಚಿಸಿದೆ ಎಂದು ವರದಿಯಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿ

ಇದೀಗ ಮಹೀಂದ್ರಾ ಎಂಟ್ರಿ ಲೆವೆಲ್ ಬಿ4 ರೂಪಾಂತರದ ಬೆಲೆಯು ರೂ.8.00 ಲಕ್ಷ, ಇನ್ನು ಮಿಡ್ ಸ್ಪೇಕ್ ರೂಪಾಂತರದ ಬಿ6 ಬೆಲೆಯು ರೂ.8.66 ಲಕ್ಷಗಳಾದರೆ, ಟಾಪ್ ಎಂಡ್ ಬಿ6(ಒ) ರೂಪಾಂತರದ ಬೆಲೆಯು ರೂ.9.01 ಲಕ್ಷ ಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿ

ಮಹೀಂದ್ರಾ ಕಂಪನಿಯು ಜನಪ್ರಿಯ ಬೊಲೆರೊ ಎಸ್‍ಯುವಿಯನ್ನು ಮೊದಲ ಬಾರಿಗೆ 2000ದಲ್ಲಿ ಬಿಡುಗಡೆಗೊಳಿಸಿದ್ದರು. ಇಂದಿಗೂ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿ

ಹೊಸ ಬೊಲೆರೊ ಮುಂಭಾಗದಲ್ಲಿ ಹೊಸ ಬಂಪರ್, ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಹೆಡ್ ಲ್ಯಾಂಪ್ ಗಳನ್ನು ಅಳವಡಿಸಲಾಗಿದೆ. ಈ ಹೊಸ ಬೊಲೆರೊ ಆಕರ್ಷಕ ಲುಕ್ ಅನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿ

ಬಿಎಸ್-6 ಬೊಲೆರೊ ಎಸ್‍‍ಯುವಿನಲ್ಲಿ ಹೊಸ ಕ್ರ್ಯಾಶ್ ಟೆಸ್ಟ್ ಸುರಕ್ಷತಾ ನಿಯಮಕ್ಕೆ ಅನುಗುಣವಾಗಿ ಅದರ ಮಂಭಾಗವನ್ನು ನವೀಕರಿಸಲಾಗಿದೆ. ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿ

ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಫಾಗ್ ಲ್ಯಾಂಪ್, ಮತ್ತು ಪ್ರಯಾಣಿಕರ ಬದಿಯ ಏರ್‌ಬ್ಯಾಗ್ ಅನ್ನು ಈ ಬಿಎಸ್-6 ಬೊಲೆರೊ ಎಸ್‍‍ಯುವಿಯ ಟಾಪ್-ಎಂಡ್ ಮಾದರಿಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತದೆ. ಇದರಲ್ಲಿ ಎಸಿ ವೆಂಟ್ಸ್ ಗಳನ್ನು ನೀಡಲಾಗಿಲ್ಲ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿ

ಬಿಎಸ್-6 ಬೊಲೆರೊದಲ್ಲಿ 1.5 ಎಲ್ 3-ಸಿಲಿಂಡರ್ ಎಮ್ಹಾಕ್ 75 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ 1.5 ಲೀಟರ್‍ ಎಂಜಿನ್ 75 ಬಿ‍‍ಹೆಚ್‍‍ಪಿ ಪವರ್ ಮತ್ತು 195 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮಾನ್ಯುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಮಹೀಂದ್ರಾ ಬೊಲೆರೊ ಎಸ್‍ಯುವಿ

ಬಿಎಸ್-6 ಮಹೀಂದ್ರಾ ಬೊಲೆರೊ ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍‍ಯುವಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಿದೆ. ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಎಸ್‍‍ಯು‍ವಿ ವಿಭಾಗದಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ.

Most Read Articles

Kannada
English summary
2020 Mahindra Bolero Prices Increased. Read In Kannada.
Story first published: Saturday, August 29, 2020, 15:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X