ಬಿಎಸ್-6 ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿಯ ಖರೀದಿಗೆ ಬುಕ್ಕಿಂಗ್ ಆರಂಭ
ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ತನ್ನ ಹೊಸ ತಲೆಮಾರಿನ ಸ್ಕಾರ್ಪಿಯೋ ಎಸ್‍ಯುವಿಯನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸದೆ. ಈ ಬಿಎಸ್-6 ಸ್ಕಾರ್ಪಿಯೋ ಎಸ್‍ಯುವಿಗಾಗಿ ಮಹೀಂದ್ರಾ ಕಂಪನಿಯು ಬುಕ್ಕಿಂಗ್ ಅನ್ನು ಆರಂಭಿಸಿದೆ.

ಬಿಎಸ್-6 ಸ್ಕಾರ್ಪಿಯೋ ಎಸ್‍ಯುವಿಗಾಗಿ ಆನ್‌ಲೈನ್ ನಲ್ಲಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದೆ. ಬಿಎಸ್-6 ಸ್ಕಾರ್ಪಿಯೋ ಎಸ್‍ಯುವಿಗಾಗಿ ಟೋಕನ್ ಮೊತ್ತ ಮೊತ್ತ ರೂ.5 ಸಾವಿರ ಪಾವತಿಸಿ ಬುಕ್ಕಿಂಗ್ ಮಾಡಬಹುದಾಗಿದೆ. ಗ್ರಾಹಕರು ಈ ಎಸ್‍ಯುವಿಯ ಬಾಡಿ ಹಗ್ಗಿಂಗ್ ಬಂಪರ್, ಫಾಗ್ ಲ್ಯಾಂಪ್ ಅಲಂಕರಿಸುವ ಸೆಟ್, ಡೆಕಲ್ಸ್, ಪಾರ್ಕಿಂಗ್ ಕವರ್, ಅಲಾಯ್ ವೀಲ್, ಹೆಡ್‌ರೆಸ್ಟ್ ಮೌಂಟೆಡ್ ಡಿವಿಡಿ ಟಚ್‌ಸ್ಕ್ರೀನ್, ಸ್ಕಫ್ ಪ್ಲೇಟ್‌ಗಳು, ಕಾರ್ಪೆಟ್ ಮ್ಯಾಟ್ ಸೆಟ್ ಮತ್ತು ಇತರ ಉಪಕರಣಗಳನ್ನು ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಮಹೀಂದ್ರಾ ಕಾರು ಉತ್ಪಾದನಾ ಕಂಪನಿಯು ಸದ್ಯ ಎಸ್‌ಯುವಿ ಸೆಗ್‍ಮೆಂಟಿನ ಮಾರಾಟದಲ್ಲಿ ಅಧಿಪತ್ಯ ಸಾಧಿಸುತ್ತಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಕಾರುಗಳ ಮೂಲಕ ಭಾರೀ ಜನಪ್ರಿಯತೆ ಗಳಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ತನ್ನ ಜನಪ್ರಿಯ ಎಸ್‍ಯುವಿಗಳಾದ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳನ್ನು ಮಹೀಂದ್ರಾ ಕಂಪನಿಯು ಮುಂಬರುವ ದಿನಗಳಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಪ್‍ಗ್ರೇಡ್ ಮಾಡಿ ಬಿಡುಗಡೆಗೊಳಿಸಲಿದೆ.
MOST READ: ಆಕರ್ಷಕ ವಿನ್ಯಾಸದಲ್ಲಿ ಅನಾವರಣವಾಯ್ತು ಟೊಯೊಟಾ ಯಾರೀಸ್ ಕ್ರಾಸ್

ಮಹೀಂದ್ರಾ ಕಂಪನಿಯ ಸರಣಿಯ ಕಾರು ಮಾರಾಟದಲ್ಲಿ ಸ್ಕಾರ್ಪಿಯೋ ಎಸ್‍ಯುವಿಯ ಕೊಡುಗೆಯು ದೊಡ್ಡದು. 2002ರಲ್ಲಿ ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಸ್ಕಾರ್ಪಿಯೋ ಬಿಡುಗಡೆಗೊಳಿಸಿದ ನಂತರ ಎರಡು ಬಾರಿ ನವೀಕರಣಗೊಳಿಸಿದೆ. ಕಂಪನಿಯು ಸ್ಕಾರ್ಪಿಯೋ ಎಸ್‍ಯುವಿಯನ್ನು 2006ರಲ್ಲಿ ಮತ್ತು 2014ರಲ್ಲಿ ನವೀಕರಣಗೊಳಿಸಿತ್ತು.

ಇತ್ತೀಚೆಗೆ ಬಹಿರಂಗವಾಗಿರುವ ಮಾಹಿತಿ ಪ್ರಕಾರಬಿಎಸ್-6 ಸ್ಕಾರ್ಪಿಯೋ ಎಸ್‍ಯುವಿಯು ಎಸ್5, ಎಸ್7, ಎಸ್9 ಮತ್ತು ಎಸ್11 ಎಂಬ ನಾಲ್ಕು ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ.ಇದರಲ್ಲಿ ಎಸ್3 ರೂಪಾಂತರವು ಎಂಟ್ರಿ-ಲೆವೆಲ್ ಆದರೆ ಎಸ್11 ಟಾಪ್-ಎಂಡ್ ಎಡಬ್ಲ್ಯೂಡಿ ರೂಪಾಂತರವಾಗಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹೊಸ ಸ್ಕಾರ್ಪಿಯೋ 2.2 ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಹೊಸ ಸ್ಕಾರ್ಪಿಯೋದಲ್ಲಿ ಬಿಎಸ್-6 ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್‍ನೊಂದಿಗೆ ಆಟೋಮ್ಯಾಟಿಕ್ ಅಥವಾ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಅಳವಡಿಸಬಹುದು.

ಹೊಸ ಸ್ಕಾರ್ಪಿಯೊ ಇಂಟಿರಿಯರ್‍ನಲ್ಲಿ ಸೆಂಟರ್ ಕನ್ಸೋಲ್ ಮತ್ತು ಕಂಟ್ರೋಲ್ ಡಯಲ್ ಸದ್ಯ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲಿದೆ. ಮೌಂಟಡ್ ಕಂಟ್ರೋಲ್‍ನೊಂದಿಗೆ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.
MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಇದರೊಂದಿಗೆ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರೇರ್ ಎಸಿ ವೆಂಟ್ಸ್ ಗಳನ್ನು ಹೊಂದಿದೆ.

ಹೊಸ ಸ್ಕಾರ್ಪಿಯೋದ ಇಂಟಿರಿಯರ್‍ನಲ್ಲಿ ಹೆಚ್ಚಿನ ಸ್ಪೇಸ್ ಅನ್ನು ನೀಡಲಾಗಿದೆ. ಇದರಿಂದಾಗಿ ಪ್ರಯಾಣಿಕರಿಕೆ ಆರಾಮದಾಯಕವಾಗಿ ಪ್ರಯಾಣಿಸಬಹುದು. ಬಿಎಸ್-6 ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿಯು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ.


Click it and Unblock the Notifications








