ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ತನ್ನ ಹೊಸ ತಲೆಮಾರಿನ ಸ್ಕಾರ್ಪಿಯೊ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಸ್ಕಾರ್ಪಿಯೊ ಎಸ್‍‍ಯುವಿಯನ್ನು ಭಾರತದ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಕಾರು ಉತ್ಪಾದನಾ ಕಂಪನಿಯು ಸದ್ಯ ಎಸ್‌ಯುವಿ ಸೆಗ್‍‍ಮೆಂಟಿನ ಮಾರಾಟದಲ್ಲಿ ಅಧಿಪತ್ಯ ಸಾಧಿಸುತ್ತಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಕಾರುಗಳ ಮೂಲಕ ಭಾರೀ ಜನಪ್ರಿಯತೆ ಗಳಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ತನ್ನ ಜನಪ್ರಿಯ ಎಸ್‍‍ಯುವಿಗಳಾದ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳನ್ನು ಮಹೀಂದ್ರಾ ಕಂಪನಿಯು ಮುಂಬರುವ ದಿನಗಳಲ್ಲಿ ಅಪ್‍‍ಗ್ರೇಡ್ ಮಾಡಿ ಬಿಡುಗಡೆಗೊಳಿಸಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಸ್ಕಾರ್ಪಿಯೋ

ಮಹೀಂದ್ರಾ ಸರಣಿಯ ಮಾದರಿಗಳ ಮಾರಾಟದಲ್ಲಿ ಸ್ಕಾರ್ಪಿಯೋ ಎಸ್‍‍ಯುವಿಯ ಕೊಡುಗೆಯು ದೊಡ್ಡದು. 2002ರಲ್ಲಿ ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಸ್ಕಾರ್ಪಿಯೋ ಬಿಡುಗಡೆಗೊಳಿಸಿದ ನಂತರ ಎರಡು ಬಾರಿ ನವೀಕರಣಗೊಳಿಸಿದೆ. ಕಂಪನಿಯು ಸ್ಕಾರ್ಪಿಯೋ ಎಸ್‍‍ಯುವಿಯನ್ನು 2006ರಲ್ಲಿ ಮತ್ತು 2014ರಲ್ಲಿ ನವೀಕರಣಗೊಳಿಸಿತ್ತು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಸ್ಕಾರ್ಪಿಯೋ

ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಕಾರ್ಪಿಯೋವಿನ ಸ್ಪೈ ಚಿತ್ರವನ್ನು ರಶ್‍‍ಲೇನ್ ಬಹಿರಂಗಪಡಿಸಿದೆ. ಸ್ಪೈ ಚಿತ್ರದಿಂದ ಹೊಸ ಸ್ಕಾರ್ಪಿಯೋ ಎಸ್‍‍ಯುವಿಯ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋ 2.0 ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಹೊಸ ಸ್ಕಾರ್ಪಿಯೋದಲ್ಲಿ ಬಿಎಸ್-6 ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್‍‍ನೊಂದಿಗೆ ಆಟೋಮ್ಯಾಟಿಕ್ ಅಥವಾ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಬಹುದು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೊ ಇಂಟಿರಿಯರ್‍‍ನಲ್ಲಿ ಸೆಂಟರ್ ಕನ್ಸೋಲ್ ಮತ್ತು ಕಂಟ್ರೋಲ್ ಡಯಲ್ ಸದ್ಯ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲಿದೆ. ಮೌಂಟಡ್ ಕಂಟ್ರೋಲ್‍‍ನೊಂದಿಗೆ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಸ್ಕಾರ್ಪಿಯೋ

ಇದರೊಂದಿಗೆ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರೇರ್ ಎಸಿ ವೆಂಟ್ಸ್ ಗಳನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋ ಇಂಟಿರಿಯರ್‍‍ನಲ್ಲಿ ಹೆಚ್ಚು ಪ್ರೀಮಿಯಂ ಲುಕ್ ಅನ್ನು ಹೊಂದಿದೆ. ಇಂಟಿರಿಯರ್‍ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ. ಹೈ ಎಂಡ್ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ದೊಡ್ದ ಟಚ್‍‍ಸ್ಕ್ರೀನ್ ಇನ್ಪೋಟೈನ್‍‍ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಹೀಂದ್ರಾ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋದ ಇಂಟಿರಿಯರ್‍‍ನಲ್ಲಿ ಹೆಚ್ಚಿನ ಸ್ಪೇಸ್ ಅನ್ನು ನೀಡಲಾಗಿದೆ. ದೂರ ಪ್ರಯಾಣ ಮಾಡುವಾಗ ಪ್ರಯಾಣಿಕರಿಗೆ ಆರಾಮದಾಯಕವಾಗಿ ಪ್ರಯಾಣಿಸಬಹುದು. ಈ ಹೊಸ ಮಹೀಂದ್ರಾ ಸ್ಕಾರ್ಪಿಯೋವನ್ನು ಮುಂದಿನ ವರ್ಷದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

Most Read Articles

Kannada
English summary
New Gen Mahindra Scorpio Spied. Read in Kannada.
Story first published: Tuesday, March 3, 2020, 12:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X