ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎರ್ಟಿಗಾ ಡೀಸೆಲ್ ಆವೃತ್ತಿ
ದೇಶದ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಎರ್ಟಿಗಾ ಎಂಪಿವಿಯನ್ನು ಡೀಸೆಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಎರ್ಟಿಗಾ ಎಂಪಿಯನ್ನು ಈ ವರ್ಷದ ಕೊನೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಮಾರುತಿ ಸುಜುಕಿ ಕಂಪನಿಯು ತನ್ನ ಸರಣಿಯಲ್ಲಿನ 1.3 ಲೀಟರ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ಅಧಿಕೃತವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಮಾರುತಿ ಸುಜುಕಿ ಸಂಸ್ಥೆಯು ತನ್ನ ನಿರ್ಧಾರವನ್ನು ಬದಲಾಯಿಸಲಾಗಿದೆ ಎಂದು ನಿರೀಕ್ಷಿಸುತ್ತೇವೆ. ಮಾರುತಿ ಸುಜುಕಿ ಸಂಸ್ಥೆಯು ಮತ್ತೆ ಈ ವರ್ಷದ ಕೊನೆಯಲ್ಲಿ ಡೀಸೆಲ್ ಆವೃತ್ತಿಗಳನ್ನು ಪರಿಚಯಿಸಲಿದೆ. ಮಾರುತಿ ಸುಜುಕಿ ಇಂಡಿಯಾ ತನ್ನ ಎರ್ಟಿಗಾ ಟೂರ್ ಎಂ ಎಂಪಿವಿಯನ್ನು ಭಾರತದಲ್ಲಿ ಕೆಲವು ತಿಂಗಳ ಹಿಂದೆ ಸ್ಪಾಟ್ ಟೆಸ್ಟ್ ಕೂಡ ಮಾಡಲಾಗಿದೆ.

ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಎರ್ಟಿಗಾ ಟೂರ್ ಎಂ, ಎಂಪಿವಿಯಲ್ಲಿ ಬಿಎಸ್-6 ಪ್ರೇರಿತ 1.5 ಲೀಟರಿನ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 94 ಬಿಹೆಚ್‍ಪಿ ಪವರ್ ಮತ್ತು 225 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಬಹಿರಂಗವಾಯ್ತು ದಟ್ಸನ್ ರೆಡಿ ಗೋ ಫೇಸ್‍ಲಿಫ್ಟ್ ಕಾರಿನ ಮಾಹಿತಿ

ಮಾರುತಿ ಸುಜುಕಿ ಕಂಪನಿಯು ತನ್ನ ಸ್ವಿಫ್ಟ್, ಬಾಲೆನೊ ಮತ್ತು ಡಿಜೈರ್ ನಂತಹ ಸಣ್ಣ ಕಾರುಗಳಲ್ಲಿ ಡೀಸೆಲ್ ಎಂಜಿನ್ ಅನ್ನು ಪರಿಚಯಿಸುವ ಸಾಧ್ಯತೆಗಳಿಲ್ಲ. ಆದರೆ 1.5 ಡೀಸೆಲ್ ಎಂಜಿನ್ ಅನ್ನು ವಿಟಾರ ಬ್ರೆಝಾ, ಎರ್ಟಿಗಾ, ಎಸ್-ಕ್ರಾಸ್ ಮತ್ತು ಸಿಯಾಜ್‍ನಂತಹ ಕಾರುಗಳಲ್ಲಿ ಡೀಸೆಲ್ ಎಂಜಿನ್ ಅನ್ನು ಪರಿಚಯಿಸಬಹುದು.

ಮಾರುತಿ ಸುಜುಕಿ ಇಂಡಿಯಾ ಕಳೆದ ನಾಲ್ಕು ವರ್ಷಗಳ ಹಿಂದೆ ಎರ್ಟಿಗಾ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಎರ್ಟಿಗಾ ಎಂಪಿವಿಯು ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶ್ವಸಿಯಾಗಿದೆ. ಮಾರುತಿ ಸುಜುಕಿ ಎರ್ಟಿಗಾ ಮಾದರಿಯು ಹರ್ಟೆಕ್ಟ್ ಪ್ಲಾಟ್‌ಫಾರ್ಮ್ ವಿನ್ಯಾಸವನ್ನು ಆಧರಿಸಿದೆ.
MOST READ: ಮಾರಾಟದಲ್ಲಿ ಶೂನ್ಯ ಸಾಧನೆ ಮಾಡಿದ ಎಂಜಿ ಮೋಟಾರ್

ಮಾರುಕಟ್ಟೆಯಲ್ಲಿರುವ ಎರ್ಟಿಗಾ ಎಂಪಿವಿ ಕಾರು, ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ ಅನ್ನು ಹೊಂದಿದೆ. ಹಾಗೆಯೇ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ವ್ಹೀಲ್‍ಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೇಲ್ ಲೈಟ್ ಅನ್ನು ಹೊಂದಿದೆ.

ಮಾರುಕಟ್ಟೆಯಲ್ಲಿರುವ ಎರ್ಟಿಗಾದಲ್ಲಿ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ನೀಡಲಾಗಿದೆ.
MOST READ: ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಎರ್ಟಿಗಾ ಎಂಪಿವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ನೀಡಲಾಗಿದೆ.

ಪ್ರಸ್ತುತ ಎರ್ಟಿಗಾ ಎಂಪಿವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7.55 ಲಕ್ಷದಿಂದ ರೂ.11.21 ಲಕ್ಷಗಳಾಗಿದೆ. ಹೊಸ ಬಿಎಸ್-6 ಎರ್ಟಿಗಾ ಎಂಪಿವಿಯನ್ನು ಡೀಸೆಲ್ ಆವೃತ್ತಿಯಲ್ಲಿ ಈ ವರ್ಷದ ಕೊನೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.


Click it and Unblock the Notifications