ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಸಾರ ಬಹುತೇಕ ಕಾರು ಆವೃತ್ತಿಗಳ ಪೆಟ್ರೋಲ್ ಮಾದರಿಗಳನ್ನು ಉನ್ನತೀಕರಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಇದೀಗ ಸೆಲೆರಿಯೊ ಆವೃತ್ತಿಯನ್ನು ಸಹ ಹೊಸ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಹೊಸ ಎಮಿಷನ್ ಜಾರಿಗೂ ಮುನ್ನವೇ ದೇಶಿಯ ಮಾರುಕಟ್ಟೆಯಲ್ಲಿ ಬರೋಬ್ಬರಿ ಮೂರು ಲಕ್ಷ ಬಿಎಸ್-6 ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡಿರುವ ಮಾರುತಿ ಸುಜುಕಿಯು ಬಹುತೇಕ ಕಾರು ಮಾದರಿಯನ್ನು ಹೊಸ ನಿಯಮ ಅನುಸಾರವಾಗಿ ಉನ್ನತೀಕರಿಸಿದ್ದು, ಡೀಸೆಲ್ ಮಾದರಿಗಳನ್ನು ಮಾತ್ರವೇ ಏಪ್ರಿಲ್ ನಂತರ ಹೊಸ ನಿಯಮ ಅನುಸಾರ ಬಿಡುಗಡೆಗೆ ಮಾಡಲಿದೆ. ಇದಕ್ಕಾಗಿ ಭರ್ಜರಿ ಸಿದ್ದತೆ ನಡೆಸಲಾಗಿದ್ದು, ಇದೀಗ ಬಾಕಿ ಉಳಿದಿರುವ ಸೆಲೆರಿಯೊ ಪೆಟ್ರೋಲ್ ಕಾರನ್ನು ಸಹ ಬಿಡುಗಡೆ ಮಾಡಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಬಿಎಸ್-6 ಎಂಜಿನ್ ಪ್ರೇರಿತ ಸೆಲೆರಿಯೊ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಆವೃತ್ತಿಯಾದ ಎಲ್ಎಕ್ಸ್ಐ ಮಾದರಿಗೆ ರೂ.4.41 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯಾದ ಜೆಡ್ಎಕ್ಸ್ಐ ಆಪ್ಷನ್ ಮಾದರಿಗೆ ರೂ.5.67 ಲಕ್ಷ ಬೆಲೆ ಪಡೆದುಕೊಂಡಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಬಿಎಸ್-4 ಸೆಲೆರಿಯೊ ಆವೃತ್ತಿಗಿಂತಲೂ ಬಿಎಸ್-6 ಸೆಲೆರಿಯೊ ಕಾರು ರೂ.15 ಸಾವಿರದಿಂದ ರೂ.24 ಸಾವಿರದಷ್ಟು ಹೆಚ್ಚುವರಿ ಪಡೆದುಕೊಂಡಿದ್ದು, ಹೊಸ ಎಂಜಿನ್‌ನಿಂದಾಗಿ ಮಾಲಿನ್ಯ ಪ್ರಮಾಣ ತಗ್ಗಿರುವುದಲ್ಲದೇ ಶೇ.15ರಷ್ಟ ಮೈಲೇಜ್ ಹೆಚ್ಚಳವಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಎಂಜಿನ್ ಸಾಮರ್ಥ್ಯ

ಸೆಲೆರಿಯೊ ಕಾರು ಬಿಎಸ್-6 ತಂತ್ರಜ್ಞಾನ ಪ್ರೇರಿತ 998 ಸಿಸಿ ತ್ರಿ ಸಿಲಿಂಡರ್‌ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 68-ಬಿಎಚ್‌ಪಿ, 90-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಇನ್ನುಳಿದಂತೆ ಹೊಸ ಕಾರಿನಲ್ಲಿ ಬಹುತೇಕ ತಾಂತ್ರಿಕ ಅಂಶಗಳನ್ನು ಬಿಎಸ್-4 ಮಾದರಿಯಂತೆಯೇ ಮುಂದುವರಿಸಲಾಗಿದ್ದು, ಕೆಲವು ಸುರಕ್ಷಾ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ಅಲರ್ಟ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳನ್ನು ಪ್ರತಿ ಮಾದರಿಯಲ್ಲೂ ನೀಡಲಾಗಿದ್ದು, ಈ ಹಿಂದಿನ ಆವೃತ್ತಿಗಿಂತಲೂ ಹೊಸ ಕಾರು ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಇನ್ನು ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಈ ಬದಲಾವಣೆಗೆ ಪ್ರಮುಖ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಎಂಟ್ರಿ ಲೆವಲ್ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿವೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಎಂಟ್ರಿ ಲೆವಲ್ ಕಾರುಗಳಲ್ಲಿ ಡೀಸೆಲ್ ಎಂಜಿನ್ ಬದಲಿದೆ ಪೆಟ್ರೋಲ್ ಮತ್ತು ಸಿಎನ್‌ಜಿ ಕಾರುಗಳ ಆಯ್ಕೆಯನ್ನು ಹೆಚ್ಚಿಸುತ್ತಿರುವ ಮಾರುತಿ ಸುಜುಕಿಯು ಹೈ ಎಂಡ್ ಕಾರು ಮಾದರಿಗಳಲ್ಲಿ ಮಾತ್ರವೇ ಡೀಸೆಲ್ ಎಂಜಿನ್ ಆಯ್ಕೆ ನೀಡುವ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಒಂದು ವೇಳೆ ಎಂಟ್ರಿ ಲೆವಲ್ ಕಾರುಗಳ ಡೀಸೆಲ್ ಮಾದರಿಗಳನ್ನು ಉನ್ನತೀಕರಿಸಿದರೂ ಸಹ ಕಾರುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದ್ದು, ಈ ಕಾರಣಕ್ಕಾಗಿಯೇ ಮಾರುತಿ ಸುಜುಕಿಯು ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸುತ್ತಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಸೆಲೆರಿಯೊ ಬಿಡುಗಡೆ

ಇದರಿಂದ ಮಾರುತಿ ಸುಜುಕಿ ನಿರ್ಮಾಣದ ಎಂಟ್ರಿ ಲೆವಲ್ ಕಾರುಗಳಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರವೇ ಸಿಗಲಿದ್ದು, ಹೈ ಎಂಡ್ ಮಾದರಿಗಳಲ್ಲಿ ಮಾತ್ರವೇ 1.5-ಲೀಟರ್, 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ನಂತರ ಬೆಲೆ ಹೆಚ್ಚಿದರೂ ಕೂಡಾ ಹೊಸ ಬದಲಾವಣೆಯೊಂದಿಗೆ ಕಾರು ಮಾರಾಟದಲ್ಲಿ ಕುಸಿಯದಂತೆ ಎಂಜಿನ್ ಆಯ್ಕೆಗಳನ್ನು ಸಿದ್ದಪಡಿಸುತ್ತಿದೆ.

Most Read Articles

Kannada
English summary
Maruti Suzuki has launched the BS-VI compliant Celerio. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X