ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಫ್ರೆಂಚ್ ವಾಹನ ತಯಾರಕ ಕಂಪನಿಯಾದ ರೆನಾಲ್ಟ್ ತನ್ನ ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಿದ್ದರು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಕೆಲವು ವರದಿಗಳ ಪ್ರಕಾರ ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಭಾರತದಲ್ಲಿ ಮುಂದಿನ ಆಗಸ್ಟ್ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಬಹುದು. ಆದರೆ ರೆನಾಲ್ಟ್ ಕಂಪನಿಯು ಈ ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಬಿಡುಗಡೆಯ ದಿನಾಂಕವನ್ನು ಇನ್ನು ಬಹಿರಂಗಪಡಿಸಿಲ್ಲ. ಈ ಹೊಸ ರೆನಾಲ್ಟ್ ಡಸ್ಟರ್ ಆವೃತ್ತಿಯಲ್ಲಿ 1.3-ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಈ ಎಂಜಿನ್ 153 ಬಿಹೆಚ್‌ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಫೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರೊಂದಿಗೆ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ.

MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ರೆನಾಲ್ಟ್ ಡಸ್ಟರ್ ಆವೃತ್ತಿಯಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 104 ಬಿಹೆಚ್‌ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಡಸ್ಟರ್ 1.3 ಟರ್ಬೊ-ಪೆಟ್ರೋಲ್ ಆವೃತ್ತಿಯ ವಿನ್ಯಾಸದಲ್ಲಿ ಯಾವುದೇ ಹೆಚ್ಚಿನ ಬದಲಾವಣೆಗಳಿರುವುದಿಲ್ಲ. ಹೆಚ್ಚು ಕಡಿಮೆ ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಡಸ್ಟರ್ ಮಾದರಿಯ ವಿನ್ಯಾಸವನ್ನು ಹೊಂದಿರುತ್ತದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಆದರೆ ಮುಂಭಾಗದ ಗ್ರಿಲ್ ಮತ್ತು ಫಾಗ್ ಲ್ಯಾಂಪ್ ಗಳಲ್ಲಿ ಎಂಟ್ರಿ ಲೆವೆಲ್ ಗಿಂತ ಕೆಲವು ಸಣ್ಣ ಬದಲಾವಣೆಗಳನ್ನು ಹೊಂದಿರುತ್ತದೆ .ಹೊಸ ರೂಪಾಂತರದ ಹಿಂಭಾಗದಲ್ಲಿ ಕಡಿಮೆ ಕ್ಲಾಡಿಂಗ್, ಮರುವಿನ್ಯಾಸಗೊಳಿಸಲಾದ ಮತ್ತು ರೂಫ್ ರೈಲ್ ಮತ್ತು ಡಸ್ತರ್ ಲೋಗೋವಿನ ಅಕ್ಷರಗಳನ್ನು ಕೆಂಪು ಬಣ್ಣಗಳಿಂದ ಕೂಡಿದೆ. ಇನ್ನು ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಇನ್ನು ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು ಮಾರುಕಟ್ಟೆಯಲಿರುವ ಮಾದರಿಯಂತೆ ಪ್ರೊಜೆಕ್ಟರ್ ಹೆಡ್‌ಲೈಟ್, ಎಲ್‌ಇಡಿ ಡಿಆರ್‌ಎಲ್ ಮತ್ತು ಟೈಲ್ ಲೈಟ್‌ಗಳನ್ನು ಮತ್ತು ಅದರ ಹೆಚ್ಚು ಅಗ್ರೇಸಿವ್ ಆಗಿ ಕಾಣುವ ಬಂಪರ್‌ಗಳನ್ನು ಒಳಗೊಂಡಿರುತ್ತದೆ.

MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಇನ್ನು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋವನ್ನು ಒಳಗೊಂಡಿರುವ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ. ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಆವೃತ್ತಿಯಲ್ಲಿರುವ ಫೀಚರುಗಳನ್ನು ಒಳಗೊಂಡಿರುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿ

ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, ಡ್ರೈವರ್ ಮತ್ತು ಪ್ಯಾಸೆಂಜರ್ ಏರ್‌ಬ್ಯಾಗ್, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ಸೀಟ್ ಬೆಲ್ಟ್ ರಿಮೈಂಡರ್ ಅಲಾರ್ಮ್ ಮತ್ತು ಹೈಸ್ಪೀಡ್ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರುತ್ತದೆ. ಇದರೊಂದಿಗೆ ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಮತ್ತು ಹಿಲ್-ಸ್ಟಾರ್ಟ್ ಅಸಿಸ್ಟ್ ನಂತಹ ಫೀಚರುಗಳಿವೆ.

Most Read Articles

Kannada
English summary
Renault Duster 1.3-Litre Turbo Petrol Variant Expected To Be Launched During August This Year. Read In Kannada.
Story first published: Monday, July 20, 2020, 20:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X