ಬಿಎಸ್-6 ರೆನಾಲ್ಟ್ ಟ್ರೈಬರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫ್ರೆಂಚ್ ಆಟೋ ಉತ್ಪಾದನಾ ಕಂಪನಿಯಾದ ರೆನಾಲ್ಟ್ ತನ್ನ ಜನಪ್ರಿಯ ಟ್ರೈಬರ್ ಮಿನಿ ಎಂಪಿವಿ ಕಾರು ಮಾದರಿಯನ್ನು ಈಗಾಗಲೇ ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನ ಅಧಿಕೃತ ಮೈಲೇಜ್ ಮಾಹಿತಿ ಬಹಿರಂಗವಾಗಿದೆ.

ಬಿಎಸ್-6 ರೆನಾಲ್ಟ್ ಟ್ರೈಬರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಮಿನಿ ಎಂಪಿವಿ ಆವೃತ್ತಿಯಾಗಿರುವ ರೆನಾಲ್ಟ್ ಟ್ರೈಬರ್ ಕಾರು ಮಾದರಿಯು ಸದ್ಯ ಬಹುಬೇಡಿಕೆಯ ಕಾರು ಮಾದರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಇತ್ತೀಚೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಿರುವುದು ಮತ್ತಷ್ಟು ಬೇಡಿಕೆ ಹೆಚ್ಚಳವಾಗಿದೆ. ಟ್ರೈಬರ್ ಕಾರು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಂಡ ನಂತರ ಬೆಲೆಯಲ್ಲಿ ತುಸು ದುಬಾರಿಯಾಗಿದ್ದರೂ ಮೈಲೇಜ್ ವಿಚಾರದಲ್ಲಿ ಆಟೋಮ್ಯಾಟಿಕ್ ಆವೃತ್ತಿಯು ಕಾರು ಖರೀದಿದಾರರ ಆಯ್ಕೆಯಲ್ಲಿ ಮುಂಚೂಣಿಯಲ್ಲಿದೆ.

ಬಿಎಸ್-6 ರೆನಾಲ್ಟ್ ಟ್ರೈಬರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಟ್ರೈಬರ್ ಕಾರು ಸದ್ಯ 1.0-ಲೀಟರ್ ಮೂರು ಸಿಲಿಂಡರ್‍‌ನ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, 72-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಬಿಎಸ್-6 ರೆನಾಲ್ಟ್ ಟ್ರೈಬರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಿದ ನಂತರ ಮೈಲೇಜ್ ಪ್ರಮಾಣದಲ್ಲಿ ತುಸು ಇಳಿಕೆಯಾಗಿದ್ದು, ಮ್ಯಾನುವಲ್ ಆವೃತ್ತಿಯು ಬಿಎಸ್-4 ಆವೃತ್ತಿಗಿಂತ ಪ್ರತಿ ಲೀಟರ್ 1 ಕಿ.ಮೀ ಮೈಲೇಜ್ ಕಡಿತಗೊಂಡಿದೆ. ಆದರೆ ಆಟೋಮ್ಯಾಟಿಕ್ ಆವೃತ್ತಿಯು ವ್ಯಯಕ್ತಿಕ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದೆ.

ಬಿಎಸ್-6 ರೆನಾಲ್ಟ್ ಟ್ರೈಬರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಎಂಜಿನ್ ಜೋಡಣೆ ನಂತರ ಪೆಟ್ರೋಲ್ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19ಕಿ.ಮೀ ಮತ್ತು ಪೆಟ್ರೋಲ್ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 18.29 ಕಿ.ಮೀ ಮೈಲೇಜ್ ನೀಡುವುದಾಗಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ(ARAI) ಸಂಸ್ಥೆಯು ಪ್ರಮಾಣಿಕರಿಸಿದೆ.

ಬಿಎಸ್-6 ರೆನಾಲ್ಟ್ ಟ್ರೈಬರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಟ್ರೈಬರ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಎಸ್ ಮತ್ತು ಎರ್‌ಎಕ್ಸ್‌ಜೆಡ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದೆ.

MOST READ: ಜುಲೈ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಬಿಎಸ್-6 ರೆನಾಲ್ಟ್ ಟ್ರೈಬರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಟ್ರೈಬರ್ ಕಾರು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಂಡ ನಂತರ ಬೆಲೆಯಲ್ಲಿ ತುಸು ದುಬಾರಿಯಾಗಿದ್ದು, ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 4.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು 7.22 ಲಕ್ಷ ಬೆಲೆ ಪಡೆದುಕೊಂಡಿರುತ್ತದೆ. ಇದರಲ್ಲಿ ಎಎಂಟಿ ಮಾದರಿಯು ಆರಂಭಿಕವಾಗಿ ರೂ.6.18 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ.7.22 ಲಕ್ಷ ಬೆಲೆ ಹೊಂದಿದೆ.

ಬಿಎಸ್-6 ರೆನಾಲ್ಟ್ ಟ್ರೈಬರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಸಾಮಾನ್ಯ ಮ್ಯಾನುವಲ್ ಆವೃತ್ತಿಗಿಂತಲೂ ಆರಂಭಿಕವಾಗಿ ರೂ.4 ಸಾವಿರ ಮತ್ತು ಟಾಪ್ ಮಾದರಿಯಲ್ಲಿ ರೂ.40 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿರುವ ಆಟೋಮ್ಯಾಟಿಕ್ ಆವೃತ್ತಿಯು ತಾಂತ್ರಿಕವಾಗಿ ಯಾವುದೇ ಹೆಚ್ಚುವರಿ ಬದಲಾವಣೆ ಹೊಂದಿಲ್ಲವಾದರೂ ನಗರಪ್ರದೇಶಗಳಲ್ಲಿನ ಕಾರು ಚಾಲನೆ ಗ್ರಾಹಕರು ಹೆಚ್ಚಿನ ಮಟ್ಟದಲ್ಲಿ ಆಟೋಮ್ಯಾಟಿಕ್ ಆವೃತ್ತಿಗಳ ಖರೀದಿಗೆ ಬಯಸುತ್ತಾರೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಬಿಎಸ್-6 ರೆನಾಲ್ಟ್ ಟ್ರೈಬರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಮುಂಬರುವ ದಿನಗಳಲ್ಲಿ ಟ್ರೈಬರ್ ಆವೃತ್ತಿಯು ಅಧಿಕ ಬಿಎಚ್‌ಪಿ ಪ್ರೇರಣೆಯ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯನ್ನು ಸಹ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಬಜೆಟ್ ಬೆಲೆಯಲ್ಲಿ ಅಚ್ಚುಕಟ್ಟಾಗಿ 7 ಸೀಟರ್ ಸೌಲಭ್ಯವನ್ನು ಪಡೆದುಕೊಂಡಿರುವುದು ಬೇಡಿಕೆ ಹೆಚ್ಚಳಕ್ಕೆ ಪ್ರಮಖ ಕಾರಣವಾಗಿದೆ.

Most Read Articles

Kannada
English summary
BS6 Renault Triber Fuel Economy Revealed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X