ಆಲ್‌ಟ್ರೊಜ್ ಡೀಸೆಲ್ ಆವೃತ್ತಿಯ ಬೆಲೆ ಇಳಿಕೆ ಮಾಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಬೆಲೆಯನ್ನು ಸದ್ದಿಲ್ಲದೆ ಇಳಿಕೆ ಮಾಡಲಾಗಿದೆ. ಆಲ್‌ಟ್ರೊಜ್ ಮಾದರಿಯ ಡೀಸೆಲ್ ಆವೃತ್ತಿಯ ಬೆಲೆಯನ್ನು ರೂ.40,000 ಗಳವರೆಗೆ ಇಳಿಕೆ ಮಾಡಿದೆ.

ಟಾಟಾ ಆಲ್‌ಟ್ರೊಜ್ ಡೀಸೆಲ್ ಆವೃತ್ತಿಯು ಎಕ್ಸ್‌ಇ, ಎಕ್ಸ್‌ಎಂ, ಎಕ್ಸ್‌ಟಿ, ಎಕ್ಸ್‌ಝಡ್, ಮತ್ತು ಎಕ್ಸ್‌ಝಡ್ (ಒ) ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿದೆ. ಟಾಟಾ ಆಲ್‌ಟ್ರೊಜ್ ಡೀಸೆಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.6.99 ಲಕ್ಷದಿಂದ ರೂ.9.09 ಲಕ್ಷಗಳಾಗಿದೆ, ಟಾಟಾ ಕಂಪನಿಯು ತನ್ನ ಜನಪ್ರಿಯ ಆಲ್‌ಟ್ರೊಜ್ ಡೀಸೆಲ್ ಆವೃತ್ತಿಯ ಬೆಲೆ ಕಡಿತಗೊಳಿಸಿರುವ ಹಿಂದಿನ ಕಾರಣ ತಿಳಿದು ಬಂದಿಲ್ಲ.

ಡೀಸೆಲ್ ಆವೃತ್ತಿಗಳಿಗಿಂತ ಹ್ಯಾಚ್‌ಬ್ಯಾಕ್‌ನ ಪೆಟ್ರೋಲ್ ಮಾದರಿಗೆ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಕಡಿತಗೊಳಿಸಿರಬಹುದು ಎಂದು ನಿರೀಕ್ಷಿಸುತ್ತೇವೆ. ಆಲ್‌ಟ್ರೊಜ್ ಡೀಸೆಲ್ ಆವೃತ್ತಿಯ ಮಾರಾಟವನ್ನು ಹೆಚ್ಚಿಸುವುದಕ್ಕೆ ಬೆಲೆಯನ್ನು ಇಳಿಸಿರಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಟಾಟಾ ಆಲ್‌ಟ್ರೊಜ್ ಎರಡು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ

ಇನ್ನು 1.5-ಲೀಟರ್, ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 89 ಬಿಹೆಚ್ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿಲ್ಲ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಟಾಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಆಲ್‌ಟ್ರೊಜ್ ಕಾರನ್ನು ಬಿಡುಗಡೆಗೊಳಿಸಿತು. ಟಾಟಾ ಆಲ್‌ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

ಟಾಟಾ ಆಲ್‌ಟ್ರೊಜ್ ಕಾರಿನ ಮತ್ತೊಂದು ವಿಶೇಷವೆಂದರೆ ಅದರ ಡೋರುಗಳು 90 ಡಿಗ್ರಿಗಳಷ್ಟು ತೆರೆದುಕೊಳ್ಳುತ್ತವೆ. ಇದರಿಂದಾಗಿ ಈ ಕಾರಿನ ಒಳಗೆ ಸುಲಭವಾಗಿ ಪ್ರವೇಶಿಸಬಹುದಾಗಿದೆ. ಆಲ್‌ಟ್ರೊಜ್ ಮಾದರಿಯ ಕ್ಯಾಬಿನ್ ಆಕರ್ಷಕವಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಟಾಟಾ ಆಲ್‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೈಲ್‌ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್‌ಗಳನ್ನು ಹೊಂದಿದೆ.

ಈ ಕಾರಿನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಟಾಟಾ ಆಲ್‌ಟ್ರೊಜ್ ದೇಶಿಯ ಮಾರುಕಟ್ಟೆಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಟಾಟಾ ಕಂಪನಿಯು ಆಲ್‌ಟ್ರೊಜ್ ಕಾರನ್ನು ಶೀಘ್ರದಲ್ಲೇ ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಲಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಆಲ್‌ಟ್ರೊಜ್ ಮಾದರಿಯ ಡೀಸೆಲ್ ಆವೃತ್ತಿಯ ಮಾರಾಟವನ್ನು ಹೆಚ್ಚಿಸಲು ಟಾಟಾ ಸಂಸ್ಥೆಯ ಬೆಲೆಯನ್ನು ಇಳಿಕೆ ಮಾಡಿರಬಹುದು ಎಂದು ನಿರೀಕ್ಷಿಸುತ್ತೇವೆ. ಬೆಲೆ ಇಳಿಕೆ ಬಳಿಕ ಟಾಟಾ ಆಲ್‌ಟ್ರೊಜ್ ಡೀಸೆಲ್ ಆವೃತ್ತಿಗಳ ಬೆಲೆಯಲ್ಲಿ ಇಳಿಕೆ ಕಂಡ ಬಳಿಕ ಮಾರಾಟ ಸಂಖ್ಯೆಯು ಹೆಚ್ಚಾಗಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications