ಟಾಟಾ ಆಲ್‌ಟ್ರೊಜ್ ಬಿಎಸ್-6 ಆವೃತ್ತಿಯ ಹೊಸ ದರ ಪಟ್ಟಿ ಬಹಿರಂಗ
ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಮಾದರಿಯನ್ನು ಬಿಎಸ್-6 ಎಂಜಿನ್‌ನೊಂದಿಗೆ ಮಾರಾಟ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಯ ನಂತರ ಇದೇ ಮೊದಲ ಬಾರಿಗೆ ಕಾರಿನ ಬೆಲೆ ಪಟ್ಟಿಯನ್ನು ಪರಿಷ್ಕರಣೆ ಮಾಡಿದೆ.

ಹೊಸ ದರ ಪಟ್ಟಿಯಲ್ಲಿ ಕಾರಿನ ಬೆಲೆ ಯಾವುದೇ ಬದಲಾವಣೆ ಇಲ್ಲವಾದರೂ ಗ್ರಾಹಕರ ಬೇಡಿಕೆಯೆಂತೆ ಹೈ ಎಂಡ್ ವೆರಿಯೆಂಟ್ ಒಂದನ್ನು ಸೇರಿಸಲಾಗಿದ್ದು, ಹೊಸ ವೆರಿಯೆಂಟ್ ಸೇರ್ಪಡೆ ನಂತರ ಕಾರಿನ ಬೆಲೆಯು ಆರಂಭಿಕವಾಗಿ ರೂ.5.29 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.34 ಲಕ್ಷ ಬೆಲೆ ಹೊಂದಿರುತ್ತದೆ. ಹೊಸ ವೆರಿಯೆಂಟ್ ಹೊರತುಪಡಿಸಿ ಕಾರಿನ ತಾಂತ್ರಿಕ ಅಂಶಗಳು ಈ ಹಿಂದಿನ ಮಾದರಿಯೆಂತೆ ಮುಂದುವರಿದ್ದು, ಹೈ ಎಂಡ್ ಮಾದರಿಯಲ್ಲಿ ಕೆಲವು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ಟಾಟಾ ಆಲ್‌ಟ್ರೊಜ್ ಕಾರು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಗಳನ್ನು ಪಡೆದುಕೊಂಡಿರುವುದು ಗ್ರಾಹಕರ ಆಕರ್ಷಣೆಗೆ ಪ್ರಮುಖ ಕಾರಣವಾಗಿದೆ.

ಹೊಸ ದರ ಪಟ್ಟಿಯಲ್ಲಿ ಪೆಟ್ರೋಲ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.29 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 7.74 ಲಕ್ಷ ಬೆಲೆ ಹೊಂದಿದ್ದರೆ ಡೀಸೆಲ್ ಮಾದರಿಯು ಆರಂಭಿಕವಾಗಿ ರೂ. 6. 99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 9.34 ಲಕ್ಷಕ್ಕೆ ಖರೀದಿಗೆ ಲಭ್ಯವಾಗಿದೆ.

ಹೊಸ ದರಕ್ಕೂ ಮತ್ತು ಹಳೆಯ ದರಕ್ಕೂ ರೂ.5 ಸಾವಿರದಷ್ಟು ಹೆಚ್ಚಳವಾಗಿದ್ದು, ಟಾಪ್ ಎಂಡ್ ಆವೃತ್ತಿಯನ್ನು ಹೊರತುಪಡಿಸಿ ಆರಂಭಿಕ ಕಾರು ಆವೃತ್ತಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಹೊಸ ಕಾರು ಎಕ್ಸ್‌ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಆಪ್ಷನ್ ಜೊತೆ ಹೊಸದಾಗಿ ಎಕ್ಸ್‌ಜೆಡ್ ಅರ್ಬನ್ ವೆರಿಯೆಂಟ್ ಅನ್ನು ಹೊಸದಾಗಿ ಪಡೆದುಕೊಂಡಿದ್ದು, ಎಲ್ಲಾ ವೆರಿಯೆಂಟ್‌ಗಳಲ್ಲೂ ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳ ಆಯ್ಕೆಯನ್ನು ಹೊಂದಿದೆ.

ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸದ್ಯಕ್ಕೆ ಹೊಸ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಇನ್ನು ಶಾರ್ಕ್ ನೊಸ್ ಡಿಸೈನ್ ಹೊಂದಿರುವ ಆಲ್‌ಟ್ರೊಜ್ ಕಾರು ಸ್ವೆಪ್ಟ್ ಬ್ಯಾಕ್ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಸ್ಟ್ರೀಪ್ ಕ್ರೋಮ್, ಸ್ಪೋರ್ಟಿ ಲುಕ್ ನೀಡುವುದಕ್ಕಾಗಿ ಹೈ ಮೌಂಟೆಡ್ ಫಾಗ್ ಲ್ಯಾಂಪ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್‌ಎಲ್ಎಸ್ ಜೋಡಿಸಲಾಗಿದ್ದು, 16-ಇಂಚಿನ ಸ್ಟ್ಯಾಂಡರ್ಡ್ ಡ್ಯುಯಲ್ ಟೋನ್ ಲೇಸರ್ ಕಟ್ ಅಲಾಯ್ ವೀಲ್ಹ್, ಸಿ ಪಿಲ್ಲರ್ ಹೊಂದಿಕೊಂಡಿರುವ ಹಿಂಭಾಗದ ಡೋರ್ ಲಾಕ್, ಸ್ಮೊಕ್ಡ್ ಟೈಲ್‌ಲೈಟ್ಸ್, ಬೂಟ್ ಲೀಡ್ ಸೌಲಭ್ಯವು ಕಾರಿನ ಅಂದವನ್ನು ಹೆಚ್ಚಿಸಿವೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಸೌಲಭ್ಯಗಳನ್ನು ಹೊತ್ತುಬಂದಿರುವ ಆಲ್‌ಟ್ರೊಜ್ ಕಾರಿನಲ್ಲಿ 90 ಡಿಗ್ರಿ ಆ್ಯಂಗಲ್‌ನಲ್ಲಿ ತೆರೆಯಬಹುದಾದ ಬಾಗಿಲುಗಳು ಪ್ರಮುಖ ಆಕರ್ಷಣೆಯಾಗಿದ್ದು, ಸಾಫ್ಟ್-ಟಚ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೋಲ್, 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿದೆ.


Click it and Unblock the Notifications