ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ಟಾಟಾ ಮೋಟಾರ್ಸ್ ಕಂಪನಿಯ ಕಾರುಗಳ ಸರಣಿಯಲ್ಲಿ ನೆಕ್ಸಾನ್ ಕೂಡ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಇತ್ತೀಚೆಗೆ ಟಾಟಾ ತನ್ನ ನೆಕ್ಸಾನ್ ಮಾದರಿಯ ಎಕ್ಸ್‌ಎಂ(ಎಸ್) ಎಂಬ ಹೊಸ ವೆರಿಯೆಂಟ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿತ್ತು.

ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ಟಾಟಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ. ಟಾಟಾ ಕಂಪನಿಯು ಭಾರತದಲ್ಲಿ ಮಾರಾಟವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಇದೀಗ ಟಾಟಾ ಕಂಪನಿಯು ಗ್ರಾಹಕರನ್ನು ಆಕರ್ಷಿಸಲು ತನ್ನ ನೆಕ್ಸಾನ್ ಕಾರಿನ ಮೇಲೆ ಇಎಂಐ ಆಫರ್ ಅನ್ನು ಘೋಷಿಸಿದೆ. ನೆಕ್ಸಾನ್ ಕಾರಿನ ಮೇಲೆ ರೂ.5,999 ಗಳವರೆಗಿನ ಇಎಂಐ ಆಫರ್ ಅನ್ನು ಘೋಷಿಸಿದೆ. ರೂ.5,999 ಇಎಂಐ ಆಫರ್ ಆರಂಭಿಕ ಆರು ತಿಂಗಳವರೆಗೆ ಮಾತ್ರ ಅನ್ವಯಿಸುತ್ತದೆ.

ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ನಂತರ ತಿಂಗಳಲ್ಲಿ ಇಎಂಐ ಮೊತ್ತವು ಹೆಚ್ಚಾಗುತ್ತದೆ ಮತ್ತು ಐದು ವರ್ಷಗಳ ಸಾಲದ ಅವಧಿಯುದ್ದಕ್ಕೂ ಕ್ರಮೇಣ ಹೆಚ್ಚಾಗುತ್ತದೆ. ಇದಲ್ಲದೆ, ಟಾಟಾ ನೆಕ್ಸನ್‌ಗಾಗಿ ಇತರ ಆಸಕ್ತಿದಾಯಕ ಫೈನಾನ್ಸ್ ಆಫರ್ ಅನ್ನು ನೀಡುತ್ತಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ಹೊಸ ಟಾಟಾ ನೆಕ್ಸಾನ್ ಎಕ್ಸ್‌ಎಂ(ಎಸ್) ವೆರಿಯೆಂಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಮಾರಾಟ ಮಾಡಲಾಗುತ್ತದೆ. ಇನ್ನು ಹೊಸ ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಪೈಪೋಟಿ ನೀಡಲು ಈ ಆಫರ್ ನೀಡಿರಬಹುದು ಎಂದು ನಿರೀಕ್ಷಿಸುತ್ತೇವೆ.

ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಪೈಪೋಟಿ ನೀಡಲು ಇತ್ತೀಚೆಗೆ ಟಾಟಾ ಕಂಪನಿಯು ನೆಕ್ಸಾನ್ ಮಾದರಿಯ ಎಕ್ಸ್‌ಎಂ(ಎಸ್) ಎಂಬ ಹೊಸ ವೆರಿಯೆಂಟ್ ಬಿಡುಗಡೆಗೊಳಿಸಿತ್ತು. ಹೊಸ ನೆಕ್ಸಾನ್ ಎಕ್ಸ್‌ಎಂ(ಎಸ್) ಆರಂಭಿಕೆ ಬೆಲೆಯು ರೂ.8.36 ಲಕ್ಷಗಳಾಗಿದೆ. ಇನ್ನು ಹೊಸ ವರಿಯೆಂಟ್‌ನ ಡೀಸೆಲ್-ಆಟೋಮ್ಯಾಟಿಕ್ ಆವೃತ್ತಿಗೆ ರೂ.10.30 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರವಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ಟಾಟಾ ನೆಕ್ಸಾನ್ ಕಾರಿನಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ಇನ್ನು 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾಆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ಹೊಸ ಟಾಟಾ ನೆಕ್ಸಾನ್ ಎಕ್ಸ್‌ಎಂ(ಎಸ್) ವೆರಿಯೆಂಟ್ ನೆಕ್ಸಾನ್ ಸರಣಿಯ ‘ಎಕ್ಸ್‌ಇ' ಮತ್ತು ‘ಎಕ್ಸ್‌ಎಂ' ವರಿಯೆಂಟ್‌ಗಳಿಗಿಂತ ಮೇಲಿನ ಸ್ಥಾನದಲ್ಲಿರುತ್ತದೆ. ಹೊಸ ನೆಕ್ಸಾನ್ ಎಕ್ಸ್‌ಎಂ(ಎಸ್) ವೆರಿಯೆಂಟ್ ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ.

ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ಎಲೆಕ್ಟ್ರಿಕ್ ಸನ್‌ರೂಫ್ ಸೇರ್ಪಡೆಯ ಹೊರತಾಗಿ, ಹೊಸ ನೆಕ್ಸನ್ ಎಕ್ಸ್‌ಎಂ(ಎಸ್) ವರಿಯೆಂಟ್‌ನಲ್ಲಿ ಹಲವು ಪ್ರೀಮಿಯಂ ಫೀಚರ್ ಗಳನ್ನು ಹೊಂದಿದೆ. ಈ ಎಕ್ಸ್‌ಎಂ(ಎಸ್) ವೆರಿಯೆಂಟ್‌ನಲ್ಲಿ ಹೆಡ್‌ಲ್ಯಾಂಪ್, ರೈನ್-ಸೆನ್ಸಿಂಗ್ ವೈಪರ್‌ಗಳು ಮತ್ತು ಸ್ಟೀಯರಿಂಗ್-ಮೌಂಟಡ್ ಕಂಟ್ರೋಲ್ ಗಳನ್ನು ಒಳಗೊಂಡಿದೆ.

ಜನಪ್ರಿಯ ಟಾಟಾ ನೆಕ್ಸಾನ್ ಕಾರಿನ ಮೇಲೆ ಭರ್ಜರಿ ಆಫರ್

ಹೊಸ ಟಾಟಾ ನೆಕ್ಸಾನ್ ಎಕ್ಸ್‌ಎಂ(ಎಸ್) ವರಿಯೆಂಟ್‌ನಲ್ಲಿ ‘ಎಕ್ಸ್‌ಎಂ' ಮಾದರಿಯಲ್ಲಿರುವಂತಹ ಎಲ್‌ಇಡಿ ಡಿಆರ್‌ಎಲ್‌ಗಳು, ಕನೆಕ್ಟ್ ನೆಕ್ಸ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಹಿಲ್-ಹೋಲ್ಡ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಮತ್ತು ಇತರ ಫೀಚರ್ ಗಳನ್ನು ಹೊಂದಿವೆ.

Most Read Articles

Kannada
English summary
Tata Nexon Gets A New EMI Scheme, Starting At Just Rs. 5,999 Per Month. Read In Kannada.
Story first published: Monday, September 28, 2020, 9:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X