Just In
Don't Miss!
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜುಲೈ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು
ಲಾಕ್‌ಡೌನ್ ಕಾರಣದಿಂದಾಗಿ ಹಲವಾರು ಕಂಪನಿಗಳು ಕಾರು ಬಿಡುಗಡೆಯನ್ನು ಮುಂದೂಡಿದ್ದವು. ಈಗ ಲಾಕ್‌ಡೌನ್ ಮುಗಿದಿರುವ ಹಿನ್ನೆಲೆಯಲ್ಲಿ ಕಾರು ತಯಾರಕ ಕಂಪನಿಗಳು ತಮ್ಮ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾಗಿವೆ. 2020ರ ಜುಲೈ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

1. ಹೊಸ ಹೋಂಡಾ ಸಿಟಿ
ಹೋಂಡಾ ಸಿಟಿ ಕಾರಿನ ಅಭಿಮಾನಿಗಳು ಹೋಂಡಾ ಸಿಟಿ ಕಾರಿನ ಹೊಸ ಮಾದರಿಯನ್ನು ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದರು. ಈಗ ಕಂಪನಿಯು ಹೊಸ ಹೋಂಡಾ ಸಿಟಿ ಕಾರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಹೋಂಡಾ ಸಿಟಿ ಕಾರ್ ಅನ್ನು ನೋಯ್ಡಾದಲ್ಲಿರುವ ಕಂಪನಿಯ ಉತ್ಪಾದನಾ ಘಟಕದಲ್ಲಿ ಉತ್ಪಾದಿಸಲಾಗುತ್ತದೆ. ಕಂಪನಿಯು ಈ ಕಾರಿನ ಪ್ರೀ-ಬುಕ್ಕಿಂಗ್‌ಗಳನ್ನು ಆರಂಭಿಸಿದೆ. 2020ರ ಹೋಂಡಾ ಸಿಟಿ ಕಾರಿನ ವಿನ್ಯಾಸ ಹಾಗೂ ಫೀಚರ್‌ಗಳನ್ನು ಹಲವು ರೀತಿಯಲ್ಲಿ ಅಪ್‌ಡೇಟ್ ಮಾಡಲಾಗಿದೆ.

ಹೊಸ ಹೋಂಡಾ ಸಿಟಿ ಕಾರ್ ಅನ್ನು 1.5 ಲೀಟರಿನ ಐ-ವಿಟೆಕ್ ಪೆಟ್ರೋಲ್ ಎಂಜಿನ್ ಹಾಗೂ 1.5 ಲೀಟರಿನ ಐ-ಡಿಟಿಇಸಿ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಲಾಗುವುದು. ಪೆಟ್ರೋಲ್ ಎಂಜಿನ್ 145 ಎನ್‌ಎಂ ಟಾರ್ಕ್ ಉತ್ಪಾದಿಸಿದರೆ, ಡೀಸೆಲ್ ಎಂಜಿನ್ 200 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

2. ಎಂಜಿ ಹೆಕ್ಟರ್ ಪ್ಲಸ್
ದೆಹಲಿಯಲ್ಲಿ ನಡೆದಿದ್ದ 2020ರ ಆಟೋ ಎಕ್ಸ್‌ಪೋದಲ್ಲಿ ಎಂಜಿ ಹೆಕ್ಟರ್ ಪ್ಲಸ್ ಕಾರ್ ಅನ್ನು ಅನಾವರಣಗೊಳಿಸಲಾಗಿತ್ತು. ಈ ಕಾರ್ ಅನ್ನು ಶೀಘ್ರದಲ್ಲೇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಲಾಕ್‌ಡೌನ್ ಕಾರಣದಿಂದಾಗಿ ಈ ಕಾರಿನ ಬಿಡುಗಡೆಯನ್ನು ಮುಂದೂಡಲಾಗಿತ್ತು.

ಎಂಜಿ ಮೋಟಾರ್ ಕಂಪನಿಯು ಜುಲೈ ತಿಂಗಳಿನಲ್ಲಿ ಹೆಕ್ಟರ್ ಪ್ಲಸ್ ಕಾರ್ ಅನ್ನು ಬಿಡುಗಡೆಗೊಳಿಸಲಿದೆ. ಎಂಜಿ ಹೆಕ್ಟರ್ ಪ್ಲಸ್ ಕಾರ್ ಅನ್ನು 6 ಹಾಗೂ 7 ಸೀಟಿನ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುವುದು. ಗುಜರಾತ್‌ನಲ್ಲಿರುವ ಹಲೋಲ್ ಉತ್ಪಾದನಾ ಘಟಕದಲ್ಲಿ ಎಂಜಿ ಹೆಕ್ಟರ್ ಪ್ಲಸ್ ಅನ್ನು ಉತ್ಪಾದಿಸಲಾಗುತ್ತಿದೆ.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಎಂಜಿ ಹೆಕ್ಟರ್ ಪ್ಲಸ್ ಕಾರಿನಲ್ಲಿ ಹಲವಾರು ಅಪ್‌ಡೇಟ್‌ಗಳನ್ನು ಮಾಡಲಾಗಿದೆ. ಈ ಕಾರಿನಲ್ಲಿ ಫಿಯೆಟ್‌ನ 2.0-ಲೀಟರಿನ ಡೀಸೆಲ್ ಎಂಜಿನ್ ಹಾಗೂ 1.5-ಲೀಟರಿನ ಹೈಬ್ರಿಡ್ ಎಂಜಿನ್ ಅಳವಡಿಸಲಾಗಿದೆ. ಈ ಕಾರ್ ಅನ್ನು 6 ಸ್ಪೀಡಿನ ಆಟೋಮ್ಯಾಟಿಕ್ ಹಾಗೂ ಮ್ಯಾನುಯಲ್ ಗೇರ್ ಬಾಕ್ಸ್‌ಗಳಲ್ಲಿಯೂ ಮಾರಾಟ ಮಾಡಲಾಗುವುದು.

3. ಮರ್ಸಿಡಿಸ್ ಬೆಂಝ್ ಇಕ್ಯೂಸಿ
2020ರ ಆಟೋ ಎಕ್ಸ್‌ಪೋದಲ್ಲಿ ಮರ್ಸಿಡಿಸ್ ಬೆಂಝ್ ಇಕ್ಯೂಸಿಯನ್ನು ಪರಿಚಯಿಸಲಾಗಿತ್ತು. ಈ ಕಾರನ್ನು ಮಾಡಿಫೈಗೊಳಿಸಲಾದ ಜಿಎಲ್‌ಸಿ ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗಿದ್ದು, 5 ಸೀಟುಗಳ ಮಾದರಿಯಲ್ಲಿ ಬಿಡುಗಡೆಗೊಳಿಸಲಾಗುವುದು. ಮರ್ಸಿಡಿಸ್ ಬೆಂಝ್ ಕಂಪನಿಯು ಈ ಕಾರನ್ನು ಹಲವಾರು ಫೀಚರ್‌ಗಳೊಂದಿಗೆ ಬಿಡುಗಡೆಗೊಳಿಸಲಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಈ ಕಾರಿನಲ್ಲಿ ಎರಡು ಎಲೆಕ್ಟ್ರಿಕ್ ಮೋಟರ್‌ಗಳನ್ನು ಅಳವಡಿಸಲಾಗಿದೆ. ಈ ಎರಡು ಎಲೆಕ್ಟ್ರಿಕ್ ಮೋಟರ್‌ಗಳು ಒಟ್ಟಾಗಿ 402 ಬಿಹೆಚ್‌ಪಿ ಪವರ್ ಹಾಗೂ 765 ಎನ್‌ಎಂ ಟಾರ್ಕ್ ಉತ್ಪಾದಿಸುತ್ತವೆ. ಈ ಕಾರಿನಲ್ಲಿರುವ 80 ಕಿ.ವ್ಯಾ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದ ನಂತರ ಈ ಕಾರು 400-450 ಕಿ.ಮೀಗಳವರೆಗೆ ಚಲಿಸುತ್ತದೆ.

4. ಆಡಿ ಆರ್‌ಎಸ್ 7 ಸ್ಪೋರ್ಟ್‌ಬ್ಯಾಕ್
ಆಡಿ ಕಂಪನಿಯು ತನ್ನ ಸ್ಪೋರ್ಟ್ಸ್ ಕಾರುಗಳ ಸರಣಿಯ ಆಡಿ ಆರ್‌ಎಸ್ 7 ಸ್ಪೋರ್ಟ್‌ಬ್ಯಾಕ್ ಕಾರ್ ಅನ್ನು ಜುಲೈ ತಿಂಗಳಿನಲ್ಲಿ ಬಿಡುಗಡೆಗೊಳಿಸಲಿದೆ. ಆಡಿ ಆರ್‌ಎಸ್ 7 ಸ್ಪೋರ್ಟ್‌ಬ್ಯಾಕ್ ಪರ್ಫಾಮೆನ್ಸ್ ಕಾರ್ ಆಗಿದ್ದು, ಕೇವಲ 3.6 ಸೆಕೆಂಡುಗಳಲ್ಲಿ 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಈ ಕಾರು ಆಡಿ ಆರ್‌ಎಸ್ 7 ಸರಣಿಯ ಎರಡನೇ ತಲೆಮಾರಿನ ಕಾರ್ ಆಗಿದೆ. ಈ ಕಾರಿನಲ್ಲಿ 4.0-ಲೀಟರಿನ ಟ್ವಿನ್ ಟರ್ಬೊ ವಿ 8 ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 560 ಬಿಹೆಚ್‌ಪಿ ಪವರ್ ಹಾಗೂ 700 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.