ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಮ್ಯಾಗ್ನೈಟ್ ಕಾರು ಮಾದರಿಯನ್ನು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಳಿಸುವ ಮೂಲಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಮಾದರಿಗಾಗಿ ಜನಪ್ರಿಯ ಟೈರ್ ಉತ್ಪಾದನಾ ಕಂಪನಿಯಾದ ಸಿಯೆಟ್ ವಿಶೇಷ ಟೈರ್ ಉತ್ಪನ್ನಗಳನ್ನು ಒದಗಿಸಲಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್

ಮ್ಯಾಗ್ನೈಟ್ ಕಾರು ಮಾದರಿಗಾಗಿ ಟೈರ್ ಉತ್ಪನ್ನವನ್ನು ಒದಗಿಸುವ ಕುರಿತು ನಿಸ್ಸಾನ್ ಜೊತೆಗಿನ ಪಾಲುದಾರಿಕೆಯನ್ನು ಪ್ರಕಟಿಸಿರುವ ಸಿಯೆಟ್ ಕಂಪನಿಯು ಹೊಸ ಕಾರು ಮಾದರಿಗಾಗಿ 16 ಇಂಚಿನ ವಿಶೇಷ ಟೈರ್ ಮಾದರಿಗಳನ್ನು ಒದಗಿಸಲಿದ್ದು, ಹೊಸ ಕಾರು ಮಾದರಿಯು ಬಜೆಟ್ ಬೆಲೆಯೊಂದಿಗೆ ಬಿಡುಗಡೆಯಾಗಿರುವುದು ಕಾರು ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿವೆ.

ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್

ಆದರೆ ನಿಸ್ಸಾನ್ ಮ್ಯಾಗ್ನೈಟ್ ಕಾರು ಅಚ್ಚರಿ ಎಂಬಂತೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಪಡೆದುಕೊಂಡಿದ್ದು, ಆರಂಭಿಕ ಆವೃತ್ತಿಯಲ್ಲಿ ಮ್ಯಾಗ್ನೈಟ್ ಕಾರಿಗೂ ಮತ್ತು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೂ ರೂ. 1.70 ಲಕ್ಷದಷ್ಟು ಬೆಲೆ ಅಂತರವಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್

ಬಜೆಟ್ ಬೆಲೆ ನಡುವೆಯೂ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್ ಹೊಂದಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಕಾರು ಖರೀದಿದಾರರನ್ನು ಸೆಳೆಯಲಿದ್ದು, ಹೊಸ ಕಾರು ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ. ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ಸೌಲಭ್ಯವಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಗಾಗಿ ವಿಶೇಷ ಟೈರ್ ಒದಗಿಸಲಿದೆ ಸಿಯೆಟ್

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಶೀಘ್ರದಲ್ಲೇ ಹೊಸ ಕಾರಿನ ವಿತರಣೆಯು ಆರಂಭವಾಗಲಿದೆ.

Article Published On: Thursday, December 3, 2020, 10:51 [IST]
English summary
CEAT Announces Association With Nissan India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+