ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆ ಉದ್ದೇಶದಿಂದ ಆಟೋ ಉದ್ಯಮದಲ್ಲಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಸದ್ಯದಲ್ಲೇ 15 ವರ್ಷ ಮೇಲ್ಪಟ್ಟ ಹಳೆಯ ವಾಹನಗಳಿಗೆ ಸ್ಕ್ರ್ಯಾಪಿಂಗ್ ನೀತಿಯನ್ನು ಕಡ್ಡಾಯವಾಗಿ ಜಾರಿಗೆ ತರುವ ಸುಳಿವು ನೀಡಿದೆ.

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ದೇಶಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯಿಂದಾಗಿ ಮಾಲಿನ್ಯ ಪ್ರಮಾಣವು ಹೊಸ ಹೊಸ ಸಮಸ್ಯೆಗಳನ್ನು ಹುಟ್ಟುಹಾಕುತ್ತಿದ್ದು, ಇದಕ್ಕೆ ಪರಿಣಾಮಕಾರಿಯಾಗಿ ತಡೆ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರವು ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ಸದ್ಯದಲ್ಲೇ ಸ್ವಯಂಚಾಲಿತ ಸ್ಕ್ರ್ಯಾರ್ಪಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದ್ದು, ಹೊಸ ನಿಯಮ ಜಾರಿಗೆ ಬಂದಲ್ಲಿ 15 ಮೇಲ್ಪಟ್ಟ ವಾಹನಗಳು ಗಣನೀಯ ತಗ್ಗುವುದರಲ್ಲಿ ಯಾವುದೇ ಅನುಮಾನವೇ ಇಲ್ಲ.

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೆ ತರಲು ಕಳೆದ ವರ್ಷವೇ ಹೊಸ ವಿಧೇಯಕ ಒಂದನ್ನು ಮಂಡಿಸಿದ್ದ ಕೇಂದ್ರ ಸರ್ಕಾರವು ಇದೀಗ ಕಾಯ್ದೆಯನ್ನು ಜಾರಿಗೆ ತರಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾಯ್ದೆಯಲ್ಲಿದ್ದ ಕೆಲವು ಗೊಂದಲಗಳನ್ನು ನಿವಾರಣೆ ಮಾಡಲಾಗಿದೆ.

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

2020ರ ಆಟೋ ಸಮಿಟ್ ಸಮ್ಮೇಳನದಲ್ಲಿ ಮಾತನಾಡಿದ್ದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನೀತಿನ್ ಗಡ್ಕರಿಯರು ದೇಶದಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆಗೆ ಪರಿಣಾಮಕಾರಿ ನೀತಿಗಳು ಅಗತ್ಯವಿದ್ದು, ಮುಂದಿನ ಕೆಲವೇ ತಿಂಗಳೊಳಗಾಗಿ ಸ್ಕ್ರ್ಯಾಪಿಂಗ್ ಕಾಯ್ದೆಯನ್ನು ಅನುಷ್ಠಾನಕ್ಕೆ ತರುತ್ತಿರುವುದಾಗಿ ಹೇಳಿದ್ದರು.

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಈ ಕುರಿತಂತೆ ಇದೀಗ ಮತ್ತೊಮ್ಮೆ ಪ್ರಕ್ರಿಯೆ ನೀಡಿರುವ ನೀತಿನ್ ಗಡ್ಕರಿಯವರು ಕರೋನಾ ವೈರಸ್ ತಗ್ಗಿದ ನಂತರವಷ್ಟೇ ಸ್ಕ್ರ್ಯಾಪಿಂಗ್ ನೀತಿಯು ಜಾರಿಯಾಗುವ ಖಚಿತ ಎನ್ನುವ ಬಗ್ಗೆ ಮಾಹಿತಿ ನೀಡಿದ್ದು, ಮಾಲಿನ್ಯ ತಗ್ಗಿಸುವುದರ ಜೊತೆಗೆ ನಷ್ಟದಲ್ಲಿರುವ ಆಟೋ ಉದ್ಯಮಕ್ಕೆ ಇದು ಪೂರಕವಾಗಲಿದೆ ಎನ್ನುವ ಸುಳಿವು ನೀಡಿದ್ದಾರೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಜೊತೆಗೆ ಹೊಸ ಯೋಜನೆಯಿಂದ ಮಾಲಿನ್ಯವನ್ನು ಮಾತ್ರ ತಗ್ಗಿಸುವುದಲ್ಲದೇ ಹಳೆಯ ವಾಹನಗಳನ್ನು ಸ್ಕ್ರ್ಯಾಪ್‌ನಿಂದ ಆಟೋಮೊಬೈಲ್ ಉತ್ಪಾದನಾ ವೆಚ್ಚ ಕೂಡಾ ತಗ್ಗಲಿದೆ ಎನ್ನಲಾಗಿದ್ದು, ಸ್ಕ್ರ್ಯಾಪ್ ಪ್ರಕ್ರಿಯೆಯಿಂದ ಬರುವ ಬಿಡಿಭಾಗಗಳನ್ನು ಮರುಬಳಕೆ ಮಾಡಿಕೊಳ್ಳಬಹುದಾಗಿದೆ.

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಈ ಮೂಲಕ ಹೊಸ ವಾಹನಗಳ ಬೆಲೆಗಳನ್ನು ಕೂಡಾ ತಗ್ಗಿಸಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಲಾಗಿದ್ದು, ಇದಕ್ಕಾಗಿ ಜಿಎಸ್‌ಟಿ ನೀತಿಯಲ್ಲೂ ಕೆಲವು ಬದಲಾವಣೆಗಳನ್ನು ತರಲಾಗಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಒಂದು ವೇಳೆ ಹೊಸ ಯೋಜನೆಯು ಯಶಸ್ವಿಯಾಗಿ ಜಾರಿಗೊಂಡಲ್ಲಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಸುಮಾರು ರೂ.15 ಸಾವಿರ ಕೋಟಿಯಿಂದ 20 ಸಾವಿರ ಕೋಟಿಯಷ್ಟು ಆದಾಯ ಹರಿದುಬರಲಿದ್ದು, ಉತ್ಪಾದನಾ ವೆಚ್ಚ ತಗ್ಗುವುದಲ್ಲದೇ ಹೊಸ ವಾಹನಗಳ ಬೆಲೆಗಳು ಕೂಡಾ ಕಡಿತವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇದಲ್ಲದೇ ಹೊಸ ನೀತಿಯಿಂದ ಶೇ. 65ರಷ್ಟು ಮಾಲಿನ್ಯ ಪ್ರಮಾಣವು ತಗ್ಗಿಸಬಹುದು ಎನ್ನಲಾಗಿದ್ದು, ಇದಕ್ಕಾಗಿ ಬೇಕಾಗಿರುವ ಅಗತ್ಯ ನಿಯಮಗಳನ್ನು ಸಿದ್ದಪಡಿಸಿರುವ ಕೇಂದ್ರ ಸರ್ಕಾರವು ಸಿಎಂವಿಆರ್(ಸೆಂಟ್ರಲ್ ಮೋಟಾರ್ ವೆಹಿಕಲ್ ರೂಲ್ಸ್)ಗೆ ತಿದ್ದುಪಡಿ ತರಲಾಗಿದೆ.

MOST READ: ಕರೋನಾ ವೈರಸ್: ಹೊಸ ವಿಧಾನದ ಮೂಲಕ ಜನರ ಬಳಿ ಬರಲಿರುವ ಪೊಲೀಸರು..

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಹೀಗಾಗಿ ಹೊಸ ಸ್ಕ್ರ್ಯಾರ್ಪಿಂಗ್ ನೀತಿಯು ಶೀಘ್ರದಲ್ಲೇ ಅನುಷ್ಠಾನಕ್ಕೆ ಬರುವುದು ಬಹುತೇಕ ಖಚಿತ ಎನ್ನಲಾಗಿದ್ದು, ಹಳೆಯ ವಾಹನಗಳನ್ನು ಸ್ಕ್ರ್ಯಾರ್ಪಿಂಗ್ ಮಾಡುವ ವಾಹನ ಮಾಲೀಕರಿಗೆ ಹೊಸ ವಾಹನ ಖರೀದಿಗೆ ಜಿಎಸ್‌ಟಿ ವಿನಾಯ್ತಿ ಸೇರಿದಂತೆ ಹಲವಾರು ಆಫರ್‌ಗಳನ್ನು ನೀಡಲು ಉದ್ದೇಶಿಸಲಾಗಿದೆ.

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಒಂದು ವೇಳೆ ಸ್ಕ್ರ್ಯಾರ್ಪಿಂಗ್ ನೀತಿ ಅಡಿ ಗುಜರಿಗೆ ಹಾಕಲು ಒಪ್ಪದಿರುವ ವಾಹನ ಮಾಲೀಕರು ಅನಧಿಕೃತವಾಗಿ ಬಳಕೆ ಮಾಡಿದ್ದಲ್ಲಿ ಸೀಜ್ ಮಾಡಲಿದ್ದು, ಸೀಜ್ ಮಾಡಿದ ನಂತರ ಹೊಸ ವಾಹನ ಖರೀದಿಗೆ ನೀಡಲಾಗುವ ಜಿಎಸ್‌ಟಿ ವಿನಾಯ್ತಿಗಳನ್ನು ಕಡಿತಗೊಳಿಸಲಾಗುತ್ತದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇದರಿಂದ ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳನ್ನು ಸ್ವಇಚ್ಛೆಯಿಂದ ಗುಜರಿಗೆ ಹಾಕಬೇಕು ಇಲ್ಲವೇ ಬಳಕೆ ಮಾಡದೇ ಮನೆಯಲ್ಲೇ ಇಟ್ಟುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ.

Most Read Articles

Kannada
English summary
Central Goverment is working on to finalise the vehicle scrappage policy and it will be finalised soon. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X