ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಕೇಂದ್ರದ ಭಾರೀ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ಯಮಗಳ ಇಲಾಖೆಯು ದೇಶದಲ್ಲಿ ಫೇಮ್ -2 ಯೋಜನೆಯ ಅವಧಿಯನ್ನು ಈ ವರ್ಷದ ಡಿಸೆಂಬರ್ 31ರವರೆಗೆ ವಿಸ್ತರಿಸಿದೆ. ಜುಲೈನಲ್ಲಿ ಈ ಯೋಜನೆಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿತ್ತು.

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಈಗ ಈ ಯೋಜನೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಇಲಾಖೆಯ ಈ ನಿರ್ಧಾರದಿಂದ ಫೇಮ್ -2 ಯೋಜನೆಯಡಿ ನೋಂದಾಯಿತಗೊಂಡ ಎಲ್ಲಾ ಎಲೆಕ್ಟ್ರಿಕ್ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರ ವಾಹನ ವಾಹನ ತಯಾರಕ ಕಂಪನಿಗಳಿಗೆ ಅನುಕೂಲವಾಗಲಿದೆ.

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಆದರೆ ಈ ವಿಸ್ತರಣಾ ಅವಧಿಯು ಭಾರೀ ಗಾತ್ರದ ಎಲೆಕ್ಟ್ರಿಕ್ ವಾಹನಗಳಾದ ಟ್ರಕ್‌ಗಳಿಗೆ ಹಾಗೂ ಬಸ್‌ಗಳಿಗೆ ಅನ್ವಯವಾಗಲಿದೆಯೇ ಎಂಬುದರ ಬಗ್ಗೆ ಇಲಾಖೆಯು ಸ್ಪಷ್ಟನೆಯನ್ನು ನೀಡಿಲ್ಲ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸಲು ಹಾಗೂ ಅಭಿವೃದ್ಧಿಪಡಿಸಲು ಭಾರೀ ಕೈಗಾರಿಕೆಗಳ ಇಲಾಖೆಯು 2015ರ ಏಪ್ರಿಲ್‌ನಲ್ಲಿ ಫೇಮ್ ಯೋಜನೆಯನ್ನು ಆರಂಭಿಸಿತು. ಈ ಮೂಲಕ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿಗೆ ನೀತಿ ಚೌಕಟ್ಟನ್ನು ರೂಪಿಸಲಾಯಿತು.

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯನ್ನು ಹೆಚ್ಚಿಸುವುದು, ಚಾರ್ಜಿಂಗ್ ಮೂಲಸೌಕರ್ಯಗಳನ್ನು ಸೃಷ್ಟಿಸುವುದು ಹಾಗೂ ತಂತ್ರಜ್ಞಾನದ ಸಹಾಯದಿಂದ ಎಲೆಕ್ಟ್ರಿಕ್ ವಾಹನಗಳನ್ನು ಸುಧಾರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಫೇಮ್ ಯೋಜನೆಯ ಮೊದಲ ಹಂತವನ್ನು 2015ರ ಏಪ್ರಿಲ್ ತಿಂಗಳಿನಲ್ಲಿ ಎರಡು ವರ್ಷಗಳ ಅವಧಿಗೆ ಜಾರಿಗೆ ತರಲಾಯಿತು. ಅದಾದ ನಂತರ ಯೋಜನಾ ಅವಧಿಯನ್ನು ಹಲವಾರು ಬಾರಿ ವಿಸ್ತರಿಸಲಾಗಿದೆ.

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಫೇಮ್ -2 ಯೋಜನೆಯ ಮುಖ್ಯ ಗುರಿ ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಉತ್ತೇಜಿಸುವುದು, ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಾದ ಚಾರ್ಜಿಂಗ್ ಮೂಲಸೌಕರ್ಯಗಳನ್ನು ಸ್ಥಾಪಿಸುವುದಾಗಿದೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಇತ್ತೀಚೆಗೆ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ವಾಹನಗಳ ಮೇಲಿನ ತೆರಿಗೆಯನ್ನು ಕಡಿಮೆಗೊಳಿಸುವುದಾಗಿ ತಿಳಿಸಿದೆ. ಸದ್ಯಕ್ಕೆ ಎಲೆಕ್ಟ್ರಿಕ್ ವಾಹನಗಳಿಗೆ 5%ನಷ್ಟು ಜಿಎಸ್ ಟಿ ವಿಧಿಸಲಾಗುತ್ತಿದೆ.

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಇತರ ವಾಹನಗಳಿಗೆ 28%ನಷ್ಟು ಜಿಎಸ್ ಟಿ ವಿಧಿಸಲಾಗುತ್ತಿದೆ. ಫೇಮ್ -2 ಯೋಜನೆಯಡಿಯಲ್ಲಿ ಮುಖ್ಯವಾಗಿ ಕಮರ್ಷಿಯಲ್ ಎಲೆಕ್ಟ್ರಿಕ್ ತ್ರಿಚಕ್ರ, ನಾಲ್ಕು ಚಕ್ರ ಹಾಗೂ ಖಾಸಗಿ ದ್ವಿಚಕ್ರ ವಾಹನಗಳ ಖರೀದಿಗೆ ರಿಯಾಯಿತಿ ನೀಡಲಾಗುತ್ತದೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಈ ಯೋಜನೆಯ ಮೂಲಕ 10 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನ, 5 ಲಕ್ಷ ಎಲೆಕ್ಟ್ರಿಕ್ ತ್ರಿಚಕ್ರ ವಾಹನ, 55,000 ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ ಹಾಗೂ 7,000 ಎಲೆಕ್ಟ್ರಿಕ್ ಬಸ್ಸುಗಳ ಖರೀದಿಗೆ ನೆರವು ನೀಡಲು ಸರ್ಕಾರವು ಉದ್ದೇಶಿಸಿದೆ.

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು 2030ರ ವೇಳೆಗೆ 100%ನಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ. ಲಿಥಿಯಂ ಐಯಾನ್ ಬ್ಯಾಟರಿಗಳಿಂದ ಚಲಿಸುವ ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತದೆ.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಫೇಮ್ 2 ಯೋಜನೆಯನ್ನು ಮತ್ತೊಮ್ಮೆ ವಿಸ್ತರಿಸಿದ ಕೇಂದ್ರ ಸರ್ಕಾರ

ಹ್ಯುಂಡೈ ಇಂಡಿಯಾ, ಎಂಜಿ ಮೋಟಾರ್ ಇಂಡಿಯಾ ಮುಂತಾದ ಕಂಪನಿಗಳು ಈಗಾಗಲೇ ಭಾರತದಲ್ಲಿ ತಮ್ಮ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಿವೆ. ಮರ್ಸಿಡಿಸ್ ಬೆಂಝ್ ತನ್ನ ಇಕ್ಯೂಸಿ ಎಲೆಕ್ಟ್ರಿಕ್ ಕಾರ್ ಬಿಡುಗಡೆಯ ಮೂಲಕ ಭಾರತದಲ್ಲಿ ಎಲೆಕ್ಟ್ರಿಕ್ ಕಾರ್ ಬಿಡುಗಡೆಗೊಳಿಸಿದ ಮೊದಲ ಐಷಾರಾಮಿ ಕಾರು ತಯಾರಕ ಕಂಪನಿಯಾಗಲಿದೆ.

Most Read Articles

Kannada
English summary
Central Government extends Fame 2 scheme till 31st December. Read in Kannada.
Story first published: Friday, September 25, 2020, 18:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X