ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಕರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಹಲವಾರು ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರವು ವಾಣಿಜ್ಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದು, ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲೂ ದೇಶದ ಜನತೆಗೆ ಹಲವಾರು ವಿನಾಯ್ತಿಗಳನ್ನು ನೀಡಿದೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಬ್ಯಾಂಕ್‌ಗಳ ಸಾಲ ಮರುಪಾವತಿಯಿಂದ ಹಿಡಿದು ಹಲವಾರು ವಿನಾಯ್ತಿ ಘೋಷಣೆ ಮಾಡಿರುವ ಕೇಂದ್ರ ಸರ್ಕಾರವು ಭಾರೀ ನಷ್ಟ ಅನುಭವಿಸುತ್ತಿರುವ ಆಟೋ ಉದ್ಯಮದ ಸುಧಾರಣೆಗೂ ಕೆಲವು ಮಹತ್ವದ ಕ್ರಮಗಳನ್ನು ಜಾರಿಗೆ ತಂದಿದೆ. ವಾಹನಗಳ ಸಾಲದ ಇಎಂಐ ಮರುಪಾವತಿ, ಬಿಎಸ್-4 ವಾಹನ ಮಾರಾಟ ಅವಧಿ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ಕ್ರಮಗಳನ್ನು ಪ್ರಕಟಿಸಿದ್ದು, ಇದೀಗ ವಾಹನ ವಿಮೆ ಅವಧಿಯನ್ನು ಸಹ ವಿಸ್ತರಿಸಿದೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಹೌದು, ಬಹುತೇಕ ವಾಹನ ಮಾಲೀಕರು ಮಾರ್ಚ್ ಅಂತ್ಯಕ್ಕೆ ಕೊನೆಗೂಳ್ಳುವಂತೆ ವಿಮೆ ಖರೀದಿ ಮಾಡಿರುತ್ತಾರೆ. ಆದ್ರೆ ತುರ್ತು ಪರಿಸ್ಥಿತಿಯ ನಡುವೆ ವಿಮೆ ಖರೀದಿ ಪ್ರಕ್ರಿಯೆಯು ಕುಂಠಿತವಾಗಿದ್ದು, ಕೇಂದ್ರ ಸರ್ಕಾರವು ಈ ಹಿನ್ನಲೆಯಲ್ಲಿ ಕೆಲವು ವಿನಾಯ್ತಿಗಳನ್ನು ನೀಡಿದೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಮಾರ್ಚ್ ಅಂತ್ಯಕ್ಕೆ ಅಥವಾ ಎಪ್ರಿಲ್ ಅವಧಿಯಲ್ಲಿ ಮುಕ್ತಾಯುಗೊಳ್ಳುವ ವಿಮಾ ಪಾಲಿಸಿಯ ಅವಧಿಯನ್ನು ಇದೇ ತಿಂಗಳ 21ರ ತನಕ ವಿಸ್ತರಣೆ ಮಾಡಲಾಗಿದ್ದು, ಈ ಅವಧಿಯಲ್ಲಿ ವಿಮೆ ಇಲ್ಲದೇ ವಾಹನಗಳನ್ನು ಹೊರತೆಗೆದರೂ ಯಾವುದೇ ಭಯಪಡಬೇಕಿಲ್ಲ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಆದರೆ ವಾಹನ ವಿಮೆ ಖರೀದಿಗಾಗಿ ಲಾಕ್ ಡೌನ್ ಉಲ್ಲಂಘನೆ ಮಾಡದಿರುವಂತೆ ಎಚ್ಚರಿಸಿರುವ ಕೇಂದ್ರ ಸರ್ಕಾರವು ಅನಾವಶ್ಯಕವಾಗಿ ಮನೆಹೊರಹೊಗದಂತೆ ಮನವಿ ಮಾಡಿದ್ದು, ಅವಧಿ ಮುಗಿದರೂ ವಾಹನ ವಿಮೆಯನ್ನು ತಡವಾಗಿ ಪಡೆದುಕೊಳ್ಳಲು ಈ ಸಹಕಾರಿಯಾಗಿದೆ. ಇದಲ್ಲದೇ ಫೆಬ್ರವರಿ 1ಕ್ಕೆ ರಿಜಿಸ್ಟ್ರೇಶನ್ ಹಾಗೂ ಲೈಸೆನ್ಸ್ ಅವಧಿ ಮುಗಿದಿರುವ ಎಲ್ಲಾ ವಾಹನಗಳಿಗೂ ಜೂನ್ 30ರವರೆಗೆ ವ್ಯಾಲಿಡಿಟಿ ವಿಸ್ತರಿಸಲಾಗಿದ್ದು, ತುರ್ತು ಸೇವೆಯ ವಾಹನಗಳು, ಟ್ರಕ್‌ಗಳು ಹಾಗೂ ಸರಕುಗಳನ್ನು ಸಾಗಿಸುವ ವಾಹನಗಳಿಗೆ ಯಾವುದೇ ತೊಂದರೆ ಎದುರಿಸದೆ ಸಂಚರಿಸುವಂತಾಗಲಿ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು ಈ ಕ್ರಮ ಕೈಗೊಂಡಿದೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಬರುವ ಫಿಟ್‌ನೆಸ್ ಸರ್ಟಿಫಿಕೇಟ್, ಪರ್ಮಿಟ್, ಡ್ರೈವಿಂಗ್ ಲೈಸೆನ್ಸ್, ರಿಜಿಸ್ಟ್ರೇಶನ್ ಹಾಗೂ ಇತರ ದಾಖಲೆಗಳು ಇವುಗಳಲ್ಲಿ ಸೇರಿವೆ. ಈ ಹೊಸ ನಿಯಮವನ್ನು ತಕ್ಷಣದಿಂದ ಜಾರಿಗೊಳಿಸಬೇಕೆಂದು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಇದರೊಂದಿಗೆ ಭಾರತದಲ್ಲಿ ಜಾರಿಗೆ ತರಲಾಗಿರುವ ಬಿಎಸ್-6 ವಾಹನಗಳ ಮಾರಾಟ ಕಡ್ಡಾಯದಿಂದ ಬಿಎಸ್-4 ವಾಹನಗಳು ಬ್ಯಾನ್ ಆಗಿದ್ದರೂ ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ಇನ್ನು ಕೂಡಾ ಬಿಎಸ್-4 ವಾಹನಗಳ ಮಾರಾಟವನ್ನು ಮುಂದಿನ ಕೆಲ ದಿನಗಳ ಕಾಲ ಮುಂದುವರಿಸಲಾಗಿದೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

2020ರ ಏಪ್ರಿಲ್ 1ರಿಂದಲೇ ಬಿಎಸ್-4 ವಾಹನಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಯನ್ನು ಬ್ಯಾನ್ ಮಾಡಿದ್ದ ಸುಪ್ರೀಂಕೋರ್ಟ್ ಕೊನೆಯ ಕ್ಷಣದಲ್ಲಿ ಬ್ಯಾನ್ ಅಸ್ತ್ರವನ್ನು ಸಡಿಲಿಸಿದ್ದು, ಕರೋನಾ ವೈರಸ್ ತಡೆ ಉದ್ದೇಶದಿಂದ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್ ಹಿನ್ನಲೆಯಲ್ಲಿ ಆಟೋ ಕಂಪನಿಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಬಿಎಸ್-6 ಜಾರಿಗೆ ಮುನ್ನ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಹೇರಲಾಗಿತ್ತು. ಕೊನೆಯ ಗಳಿಗೆಯಲ್ಲಿ ಮಾರಾಟವಾಗಬೇಕಿದ್ದ ಲಕ್ಷಾಂತರ ಬಿಎಸ್-4 ವಾಹನಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಇದರಿಂದ ಆಟೋ ಕಂಪನಿಗಳಿಗೆ ವಿನಾಯ್ತಿಯೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಮಾರಾಟಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ಬ್ಯಾನ್ ನಷ್ಟ ತಡೆಗೆ ಸಹಕರಿಸಿದೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿನಾಯ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇಂಡಿಯನ್ ಆಟೋ ಡೀಲರ್ಸ್ ಅಸೋಶಿಯೇಷನ್ ಸಂಸ್ಥೆಗೆ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಮಾರಾಟ ಅವಧಿಯನ್ನು ವಿಸ್ತರಣೆ ಮಾಡಿದೆ.

ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ

ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ.

Article Published On: Friday, April 3, 2020, 12:53 [IST]
English summary
Central government grants relaxation for vehicle insurance renewal. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+