Just In
- 17 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 1 hr ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 2 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- News
ಕಳಪೆ ಮಟ್ಟದಲ್ಲಿ ಲಸಿಕೆ ಅಭಿಯಾನ; ಎರಡು ರಾಜ್ಯಗಳಿಗೆ ಕೇಂದ್ರದ ತರಾಟೆ
- Finance
ಕಾರು ಖರೀದಿಗೆ ಅತ್ಯಂತ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವ ಬ್ಯಾಂಕ್ ಗಳಿವು
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಳಕ್ಕಾಗಿ ಮಹತ್ವದ ಯೋಜನೆ ಪ್ರಕಟಿಸಿದ ಕೇಂದ್ರ ಸರ್ಕಾರ
ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ತಗ್ಗಿಸಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡಿದೆ.

ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಪಡಿಸುವ ಆಟೋ ಕಂಪನಿಗಳ ಜೊತೆಗೆ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೂ ಕೂಡಾ ಆಕರ್ಷಕ ಆಫರ್‌ಗಳನ್ನು ನೀಡಲಾಗುತ್ತಿದ್ದು, ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಆದರೂ ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಹೆಚ್ಚಿನ ಮಟ್ಟದ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಕೊರತೆ ಎದುರಾಗಿದ್ದು, ಕೇಂದ್ರ ಸರ್ಕಾರವು ಈ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ಕಾರು ಮತ್ತು ದ್ವಿಚಕ್ರ ವಾಹನ ಮಾದರಿಗಳು ಮಾರಾಟವಾಗುತ್ತಿದ್ದು, ಬೆಲೆಗಳಿಗೆ ಅನುಗುಣವಾಗಿ ಮೈಲೇಜ್ ಪಡೆದುಕೊಂಡಿವೆ. ದುಬಾರಿ ಬೆಲೆಯ ಇವಿ ವಾಹನಗಳು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿದ್ದರೆ ಬಜೆಟ್ ಬೆಲೆಯ ಇವಿ ವಾಹನಗಳು ಕಡಿಮೆ ಮೈಲೇಜ್‌ನೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಮಾತ್ರವೇ ಸೀಮಿತವಾಗಿವೆ.

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಸ್ವಂತ ಬಳಕೆಗೆ ಮಾತ್ರ ಮಾರಾಟವಾಗುತ್ತಿದ್ದು, ವಾಣಿಜ್ಯ ಬಳಕೆಗೂ ಇವಿ ವಾಹನಗಳು ಮಾರಾಟ ಹೆಚ್ಚಳವಾಗಬೇಕೆಂಬ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಯಾವುದೇ ಪ್ರದೇಶಗಳಿಗೂ ಹೋದರೂ ಚಾರ್ಜಿಂಗ್ ಸೌಲಭ್ಯ ಲಭ್ಯವಾಗುವಂತೆ ಯೋಜನೆ ಸಿದ್ದಪಡಿಸಲಾಗಿದೆ.

ಇದಕ್ಕಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಬಂಕ್ ಮತ್ತು ಖಾಸಗಿ ಕಂಪನಿಗಳ ಪೆಟ್ರೋಲ್ ಬಂಕ್‌ಗಳಲ್ಲಿ ಸ್ಥಳಾವಕಾಶಕ್ಕೆ ಅನುಗುಣವಾಗಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಮುಂದಿನ ಎರಡು ವರ್ಷಗಳಲ್ಲಿ ದೇಶದ್ಯಾಂತ 69 ಸಾವಿರ ಪೆಟ್ರೋಲ್ ಬಂಕ್‌ಗಳಲ್ಲಿ ಕನಿಷ್ಠ ಒಂದು ಚಾರ್ಜಿಂಗ್ ಪಾಯಿಂಟ್ ಹೊಂದಿರಲಿವೆ ಎಂದಿದ್ದಾರೆ.

ಐದು ವರ್ಷಗಳಲ್ಲಿ ಭಾರತವು ಜಾಗತಿಕವಾಗಿ ಪ್ರಮುಖ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕೇಂದ್ರವಾಗಲಿದ್ದು, ಭವಿಷ್ಯ ಯೋಜನಗಳಿಗೆ ಪೂರಕವಾಗಿ ಪೆಟ್ರೋಲ್ ಬಂಕ್‌ಗಳಲ್ಲಿ ಕಡ್ಡಾಯವಾಗಿ ಚಾರ್ಜಿಂಗ್ ಸೌಲಭ್ಯವನ್ನು ಅಳವಡಿಸಿಕೊಳ್ಳುವ ಅವಶ್ಯಕತೆ ಎಂದಿದ್ದಾರೆ.

ಹೆಚ್ಚಿನ ಮಟ್ಟದ ಚಾರ್ಜಿಂಗ್ ನಿಲ್ದಾಣಗಳು ಲಭ್ಯವಾದರಲ್ಲಿ ಇವಿ ವಾಹನಗಳ ಮೂಲಕ ದೀರ್ಘಾವಧಿಯ ಪ್ರಯಾಣಕ್ಕೆ ಅನುಕೂರಲಕವಾಗಲಿದ್ದು, ಮಾರ್ಗಮಧ್ಯದಲ್ಲೇ ಚಾರ್ಜಿಂಗ್ ಸಮಸ್ಯೆಯನ್ನು ನಿವಾರಿಸಲು ಸಾಕಷ್ಟು ಸಹಕಾರಿಯಾಗಿದೆ.

ಇನ್ನು ದೇಶಾದ್ಯಂತ ಹೆಚ್ಚುತ್ತಿರುವ ಇಂಧನ ಚಾಲಿತ ವಾಹನಗಳಿಂದ ಭಾರೀ ಪ್ರಮಾಣದ ಮಾಲಿನ್ಯ ಉತ್ಪಾದನೆಯಾಗುತ್ತಿದ್ದು, ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾದ ನಿಯಮ ಜಾರಿಗೆ ತರುತ್ತಿವೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಖರೀದಿಗೂ ಮುಂದಾದರೂ ಇವಿ ವಾಹನಗಳ ಬ್ಯಾಟರಿ ರೇಂಜ್ ಮತ್ತು ಸಾರ್ವಜನಿಕ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯು ಹೊಸ ವಾಹನಗಳ ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನ ನೀತಿ ಅಡಿ ಹೊಸ ಯೋಜನೆಗೆ ಹಸಿರು ನಿಶಾನೆ ತೋರಿದೆ.

ದೆಹಲಿ ಸರ್ಕಾರವು ಹೊಸ ಇವಿ ಪಾಲಿಸಿ ಅಡಿ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಸಬ್ಸಡಿ ಜೊತೆಗೆ ನೋಂದಣಿ ಶುಲ್ಕ ವಿನಾಯ್ತಿ, ರಸ್ತೆ ತೆರಿಗೆ ವಿನಾಯ್ತಿ ಸೇರಿದಂತೆ ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಕೇಂದ್ರ ಸರ್ಕಾರ ಫೇಮ್ 2 ಯೋಜನೆ ಅಡಿಯಲ್ಲಿ ಜಿಎಸ್‌ಟಿ ವಿನಾಯ್ತಿ ಕೂಡಾ ಲಭ್ಯವಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ಫೇಮ್ 2 ಜೊತೆ ದೆಹಲಿ ಮಾದರಿಯ ಇವಿ ಪಾಲಿಸಿಯು ಇತರೆ ರಾಜ್ಯ ಸರ್ಕಾರಗಳು ಸಹ ಅಳವಡಿಸಿಕೊಳ್ಳುವ ಅವಶ್ಯಕತೆಯಿದ್ದು, ಭವಿಷ್ಯ ದೃಷ್ಠಿಯಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಸಾಕಷ್ಟು ಪ್ರಯೋಜನಕಾರಿಯಾಗಲಿದೆ.