Just In
Don't Miss!
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- News
ಖಾತೆ ಹಂಚಿಕೆ ಕುರಿತಂತೆ ಡಾ. ಸುಧಾಕರ್ ವಿಚಾರದಲ್ಲಿ ಎಲ್ಲರೂ ತಟಸ್ಥ ನಿಲುವು ತಾಳಿದ್ಯಾಕೆ?
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾರುಗಳಿಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ
ದೇಶದಲ್ಲಿ ವಾಹನಗಳ ಸುರಕ್ಷತೆಗೆ ಸಂಬಂಧಿಸಿದ ಹಲವಾರು ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇದರಿಂದಾಗಿ ಈಗ ವಾಹನಗಳು ಬಹುತೇಕ ಸುರಕ್ಷಿತವಾಗಿವೆ. ಕಳೆದ ವರ್ಷ ಕಾರುಗಳಲ್ಲಿ ಡ್ರೈವರ್ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗಿದೆ.

ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಹೊಸ ಪಾದಚಾರಿ ನಿಯಮಗಳನ್ನು ಜಾರಿಗೊಳಿಸಲಾಯಿತು. ಈಗ ಎಲ್ಲಾ ಕಾರುಗಳಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಬೇಕೆಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ತನ್ನ ವೆಬ್‌ಸೈಟ್‌ನಲ್ಲಿ ಹೊಸ ನಿಯಮಗಳ ಕರಡು ಪ್ರತಿಯನ್ನು ಹೊರಡಿಸಿದೆ.

ಇದರಂತೆ 2021ರ ಏಪ್ರಿಲ್ 1ರಿಂದ ಬಿಡುಗಡೆಯಾಗುವ ಕಾರುಗಳಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಎಂ 1ಸೆಗ್ ಮೆಂಟಿನಲ್ಲಿರುವ 8ಕ್ಕಿಂತ ಹೆಚ್ಚು ಸೀಟುಗಳನ್ನು ಹೊಂದಿರದ ಎಲ್ಲಾ ವಾಹನಗಳಿಗೆ ಈ ಹೊಸ ಸುರಕ್ಷತಾ ನಿಯಮವು ಅನ್ವಯಿಸುತ್ತದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಾರುಗಳಲ್ಲಿ ಈಗಾಗಲೇ ಡ್ರೈವರ್ ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗಿದೆ. ಎಂ 1 ಸೆಗ್ ಮೆಂಟ್ ಪ್ರಯಾಣಿಕರ ಸಂಚಾರಕ್ಕೆ ಬಳಸುವ ವಾಹನಗಳನ್ನು ಹೊಂದಿರುತ್ತದೆ. ಈ ವಾಹನಗಳಲ್ಲಿ ಚಾಲಕರ ಆಸನವನ್ನು ಹೊರತುಪಡಿಸಿ 8 ಸೀಟುಗಳಿಗಿಂತ ಹೆಚ್ಚಿನ ಸೀಟುಗಳಿರುವುದಿಲ್ಲ.

2021ರ ಏಪ್ರಿಲ್ 1ಕ್ಕೂ ಮುನ್ನ ಬಿಡುಗಡೆಯಾಗಿರುವ ಕಾರುಗಳು 2021ರ ಜೂನ್ 1ರ ವೇಳೆಗೆ ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಹೊಂದುವುದು ಕಡ್ಡಾಯವಾಗಿರುತ್ತದೆ.ಈ ಹೊಸ ನಿಯಮದ ನಂತರ ಕಾರಿನಲ್ಲಿ ಸಂಚರಿಸುವ ಪ್ರಯಾಣಿಕರು ಅಪಘಾತವಾದಾಗ ಗಾಯಗೊಳ್ಳುವ ಸಾಧ್ಯತೆಗಳು ಕಡಿಮೆಯಾಗುತ್ತವೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಡಿಸೆಂಬರ್ 15ರ ಕರಡು ಪ್ರತಿಯಲ್ಲಿ ಮುಂಭಾಗದ ಪ್ರಯಾಣಿಕರ ಸೀಟ್ ಬೆಲ್ಟ್ ರಿಮ್ಯಾಂಡರ್, ಸೆಂಟ್ರಲ್ ಲಾಕಿಂಗ್ ಸಿಸ್ಟಂ, ರಿವರ್ಸ್ ಪಾರ್ಕಿಂಗ್ ವಾರ್ನಿಂಗ್ ಸೇರಿದಂತೆ ಇನ್ನೂ ಹಲವು ಹೊಸ ಸುರಕ್ಷತಾ ಫೀಚರ್'ಗಳ ಬಗ್ಗೆ ಹೇಳಲಾಗಿದೆ.

ಆದರೆ ಇವುಗಳನ್ನು ಅಳವಡಿಸಿಕೊಳ್ಳುವ ಗಡುವಿನ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಮುಂಬರುವ ದಿನಗಳಲ್ಲಿ ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಅಟಾನಮಾಸ್ ಬ್ರೇಕಿಂಗ್ ಸಿಸ್ಟಂನಂತಹ ಫೀಚರ್ ಗಳನ್ನು ಕಡ್ಡಾಯಗೊಳಿಸಲು ಸರ್ಕಾರವು ಚಿಂತನೆ ನಡೆಸುತ್ತಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಸದ್ಯಕ್ಕೆ ಕೆಲವು ಕಾರು ತಯಾರಕ ಕಂಪನಿಗಳು ಮಾತ್ರ ಸುರಕ್ಷಿತ ಕಾರುಗಳನ್ನು ಮಾರಾಟ ಮಾಡುತ್ತಿವೆ. ಸುರಕ್ಷತಾ ಸಾಧನಗಳ ಅಳವಡಿಕೆ ಕಡ್ಡಾಯಗೊಂಡಿರುವುದರಿಂದ ಕಾರುಗಳ ಬೆಲೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಕಳೆದ ಕೆಲ ತಿಂಗಳುಗಳಿಂದ ಹೊಸ ಸುರಕ್ಷತಾ ಫೀಚರ್, ಬಿಎಸ್ 6 ಎಂಜಿನ್ ಮುಂತಾದ ಕಾರಣಗಳಿಂದಾಗಿ ಕಾರುಗಳ ಬೆಲೆಗಳು ಏರಿಕೆಯಾಗಿವೆ.

ಜಾಗತಿಕ ಸುರಕ್ಷಾ ಗುಣಮಟ್ಟಕ್ಕೆ ಹೋಲಿಸಿದರೆ ಭಾರತದಲ್ಲಿರುವ ಸುರಕ್ಷತಾ ಫೀಚರ್ ಗಳು ತೀರಾ ಕಡಿಮೆ. ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಕಡ್ಡಾಯವಾಗಿ ಅಳವಡಿಸುವುದರ ಬಗ್ಗೆ ಮಾತನಾಡಿರುವ ಫಾಡಾ ಅಧ್ಯಕ್ಷ ವಿಂಕೇಶ್ ಗುಲಾಟಿ, ಇವುಗಳಿಂದಾಗಿ ಕಾರುಗಳ ಬೆಲೆ ಹೆಚ್ಚಾಗಿ ಗ್ರಾಹಕರ ಮೇಲೆ ಅಧಿಕ ಹೊರೆ ಬೀಳುತ್ತದೆ ಎಂದು ಹೇಳಿದ್ದಾರೆ.