ಎಲ್ಲಾ ನಾಲ್ಕು ಚಕ್ರ ವಾಹನಗಳಿಗೂ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಟೋಲ್‌ಗೇಟ್‌ಗಳಲ್ಲಿ ವಾಹನಗಳು ಟೋಲ್ ಪಾವತಿಸುವ ವೇಳೆ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತದೆ. ಇದರಿಂದಾಗಿ ವಾಹನ ಸವಾರರಿಗೆ ಇಂಧನದ ಜೊತೆಗೆ, ಸಮಯವೂ ವ್ಯರ್ಥವಾಗುತ್ತದೆ. ಇವುಗಳನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರವು ಫಾಸ್ಟ್‌ಟ್ಯಾಗ್ ಗಳನ್ನು ಪರಿಚಯಿಸಿತು.

ಎಲ್ಲಾ ನಾಲ್ಕು ಚಕ್ರ ವಾಹನಗಳಿಗೂ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ವಾಹನದ ಮುಂಭಾಗದ ವಿಂಡ್‌ಶೀಲ್ಡ್ ನಲ್ಲಿ ಅಂಟಿಸಲಾಗುವ ಫಾಸ್ಟ್‌ಟ್ಯಾಗ್ ಗಳನ್ನು ಟೋಲ್‌ಗೇಟ್‌ಗಳಲ್ಲಿರುವ ಉಪಕರಣಗಳು ಸ್ಕ್ಯಾನ್ ಮಾಡುತ್ತವೆ. ಇದರಿಂದ ಟೋಲ್ ಶುಲ್ಕವು ಆಟೋಮ್ಯಾಟಿಕ್ ಆಗಿ ಕಡಿತಗೊಳ್ಳುತ್ತದೆ. ಇದಕ್ಕಾಗಿ ಫಾಸ್ಟ್‌ಟ್ಯಾಗ್ ಗಳನ್ನು ಪ್ರೀಪ್ರೇಯ್ಡ್ ಮೊಬೈಲ್ ಗಳ ರೀತಿಯಲ್ಲಿ ರೀಚಾರ್ಜ್ ಮಾಡಬೇಕಾಗುತ್ತದೆ.

ಎಲ್ಲಾ ನಾಲ್ಕು ಚಕ್ರ ವಾಹನಗಳಿಗೂ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಫಾಸ್ಟ್‌ಟ್ಯಾಗ್ ಗಳಿಂದ ಟೋಲ್‌ಗೇಟ್‌ಗಳಲ್ಲಿ ಗಂಟೆಗಟ್ಟಲೇ ಕಾಯುವುದು ತಪ್ಪುತ್ತದೆ. ಜೊತೆಗೆ ಪಾವತಿ ರಶೀದಿಯನ್ನು ನೀಡುವ ಅಗತ್ಯವಿಲ್ಲದ ಕಾರಣ ಕಾಗದದ ಬಳಕೆಯೂ ಸಹ ಕಡಿಮೆಯಾಗುತ್ತದೆ. ಈ ಮೂಲಕ ಫಾಸ್ಟ್‌ಟ್ಯಾಗ್‌ಗಳಿಂದ ಪರಿಸರಕ್ಕೂ ಲಾಭವಾಗುತ್ತದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಎಲ್ಲಾ ನಾಲ್ಕು ಚಕ್ರ ವಾಹನಗಳಿಗೂ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

2021ರ ಜನವರಿ 1ರಿಂದ ಟೋಲ್ ಗೇಟ್‌ ಮೂಲಕ ಸಾಗುವ ಎಲ್ಲಾ ನಾಲ್ಕು ಚಕ್ರ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಅಧಿಸೂಚನೆ ಹೊರಡಿಸಿದೆ.

ಎಲ್ಲಾ ನಾಲ್ಕು ಚಕ್ರ ವಾಹನಗಳಿಗೂ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

2017ರ ಡಿಸೆಂಬರ್ 1ಕ್ಕೂ ಮುನ್ನ ಮಾರಾಟವಾದ ಎಲ್ಲಾ ಎಂ ಹಾಗೂ ಎನ್ ವಿಭಾಗದ ನಾಲ್ಕು ಚಕ್ರ ವಾಹನಗಳಿಗೆ 2020ರ ಜನವರಿ 1ರಿಂದ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಿರಲಿದೆ. 1989ರ ಮೋಟಾರು ವಾಹನ ಕಾಯ್ದೆಯನ್ವಯ ಹೊಸ ನಾಲ್ಕು ಚಕ್ರ ವಾಹನಗಳನ್ನು ರಿಜಿಸ್ಟರ್ ಮಾಡುವಾಗ ಫಾಸ್ಟ್‌ಟ್ಯಾಗ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಎಲ್ಲಾ ನಾಲ್ಕು ಚಕ್ರ ವಾಹನಗಳಿಗೂ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಫಾಸ್ಟ್‌ಟ್ಯಾಗ್ ಹೊಂದಿರುವ ನಾಲ್ಕು ಚಕ್ರ ವಾಹನಗಳಿಗೆ ಮಾತ್ರ ಫಿಟ್ ನೆಸ್ ಸರ್ಟಿಫಿಕೇಟ್ ನೀಡಲಾಗುವುದು. ಥರ್ಡ್ ಪಾರ್ಟಿ ವಿಮೆ ಮಾಡಿಸಲು ನಾಲ್ಕು ಚಕ್ರ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಿದೆ.

ಎಲ್ಲಾ ನಾಲ್ಕು ಚಕ್ರ ವಾಹನಗಳಿಗೂ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

2021ರ ಏಪ್ರಿಲ್ 1ರಿಂದ ನಾಲ್ಕು ಚಕ್ರ ವಾಹನಗಳಿಗೆ ಥರ್ಡ್ ಪಾರ್ಟಿ ವಿಮೆ ಮಾಡಿಸುವಾಗ ಆ ನಾಲ್ಕು ಚಕ್ರ ವಾಹನಗಳಲ್ಲಿರುವ ಫಾಸ್ಟ್‌ಟ್ಯಾಗ್ ಸಂಖ್ಯೆಯನ್ನು ನೀಡಬೇಕೆಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಎಲ್ಲಾ ನಾಲ್ಕು ಚಕ್ರ ವಾಹನಗಳಿಗೂ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಈ ಅಧಿಸೂಚನೆಯ ಮೂಲಕ ಟೋಲ್‌ಗೇಟ್‌ಗಳಲ್ಲಿನ ಪಾವತಿಯನ್ನು ಡಿಜಿಟಲ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಫಾಸ್ಟ್‌ಟ್ಯಾಗ್ ಗಳು ಟೋಲ್‌ಗೇಟ್‌ಗಳಲ್ಲಿ ಟ್ರಾಫಿಕ್ ದಟ್ಟಣೆಯನ್ನು ತಪ್ಪಿಸುವುದರ ಜೊತೆಗೆ ವಾಹನ ಮಾಲೀಕರಿಗೆ ಸಮಯ ಹಾಗೂ ಇಂಧನವನ್ನು ಉಳಿಸುತ್ತವೆ.

ಎಲ್ಲಾ ನಾಲ್ಕು ಚಕ್ರ ವಾಹನಗಳಿಗೂ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಆದರೆ ಕೆಲವು ಟೋಲ್ ಗಳಲ್ಲಿ ನಿಗದಿತ ಶುಲ್ಕಕ್ಕಿಂತ ಹೆಚ್ಚು ಶುಲ್ಕವನ್ನು ಕಡಿತಗೊಳಿಸಲಾಗುತ್ತಿದೆ ಎಂದು ವಾಹನ ಸವಾರರು ದೂರಿದ್ದು, ಈ ಬಗ್ಗೆ ಕೇಂದ್ರ ಸರ್ಕಾರವು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.

Most Read Articles

Kannada
English summary
Central government mandates fastags for all four wheelers. Read in Kannada.
Story first published: Monday, November 9, 2020, 17:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X