Just In
- 11 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 12 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 13 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 14 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- News Realme: ಅಗ್ಗದ 5G ಸ್ಮಾರ್ಟ್ಫೋನ್ ಬಿಡುಗಡೆ ರೆಡಿ; ಇದರ ಬೆಲೆ ಎಷ್ಟು ಗೊತ್ತಾ?
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೇಮ್ 2 ಯೋಜನೆಯಡಿ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರವು ಭಾರತದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದೆ.
ಭಾರತದ ಪ್ರಮುಖ ನಗರಗಳು ಪೆಟ್ರೋಲ್, ಡೀಸೆಲ್ ವಾಹನಗಳಿಂದಾಗಿ ವಾಯುಮಾಲಿನ್ಯ ಸಮಸ್ಯೆಯನ್ನು ಎದುರಿಸುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಪ್ರಮುಖ ಕಾರಣ ವಾಯುಮಾಲಿನ್ಯ ಪ್ರಮಾಣವನ್ನು ಕಡಿಮೆಗೊಳಿಸುವುದು. ಇದರ ಜೊತೆಗೆ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆಗೊಳಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ.
ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಕ್ರಮಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಭಾರತದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಫೇಮ್ ಇಂಡಿಯಾ ಎಂಬ ಯೋಜನೆಯನ್ನು ಸಹ ಜಾರಿಗೆ ತಂದಿದೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್
ಈ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತದೆ. ಸದ್ಯಕ್ಕೆ ಫೇಮ್ ಇಂಡಿಯಾ ಯೋಜನೆಯ ಎರಡನೇ ಹಂತ (ಫೇಮ್ -2) ಜಾರಿಯಲ್ಲಿದೆ. ಇದರಡಿಯಲ್ಲಿ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಎಲೆಕ್ಟ್ರಿಕ್ ಬಸ್ ಹಾಗೂ ಚಾರ್ಜಿಂಗ್ ಸ್ಟೇಷನ್ ಗಳನ್ನು ಒದಗಿಸುತ್ತಿದೆ.
ಅದರಂತೆ ಗುಜರಾತ್, ಚಂಡೀಗಢ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಲಾಗಿದೆ. ಇದರ ಜೊತೆಗೆ ಗುಜರಾತ್, ತಮಿಳುನಾಡು, ಮಧ್ಯಪ್ರದೇಶ, ಕೇರಳ ಹಾಗೂ ಪೋರ್ಟ್ ಬ್ಲೇರ್ ಗಳಿಗೆ 241 ಚಾರ್ಜಿಂಗ್ ಸ್ಟೇಷನ್ ಗಳನ್ನು ನಿಗದಿಪಡಿಸಲಾಗಿದೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್
ಈ ಮೂಲಕ ಕೇಂದ್ರ ಸರ್ಕಾರವು ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಪರಿಸರ ಸ್ನೇಹಿ ಸಾರ್ವಜನಿಕ ಸಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿದೆ ಎಂದು ಅವರು ಹೇಳಿದರು. ಕೇರಳದ ಕೊಲ್ಲಂನಲ್ಲಿ 25, ತಿರುವನಂತಪುರಂನಲ್ಲಿ 27 ಹಾಗೂ ಮಲಪ್ಪುರಂಗಳಲ್ಲಿ 28 ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ಇದರ ಜೊತೆಗೆ ಪೋರ್ಟ್ ಬ್ಲೇರ್ನಲ್ಲಿ 10 ಹಾಗೂ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ 25 ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲಾಗುವುದು. ಎಲೆಕ್ಟ್ರಿಕ್ ವಾಹನಗಳನ್ನು ಜನಪ್ರಿಯಗೊಳಿಸಲು ಚಾರ್ಜಿಂಗ್ ಸ್ಟೇಷನ್ ಗಳ ನಿರ್ಮಾಣ ಅತಿ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಈಗಾಗಲೇ 450 ಎಲೆಕ್ಟ್ರಿಕ್ ಬಸ್ಗಳು ವಿವಿಧ ನಗರಗಳಲ್ಲಿ ಸಂಚರಿಸುತ್ತಿವೆ. ಈಗ 670 ಎಲೆಕ್ಟ್ರಿಕ್ ಬಸ್ಗಳನ್ನು ನೀಡಲಾಗಿದೆ. ಈ ಪೈಕಿ ಮಹಾರಾಷ್ಟ್ರಕ್ಕೆ 240, ಗುಜರಾತ್ ಗೆ 250, ಗೋವಾಗೆ 100 ಹಾಗೂ ಚಂಡೀಗಢಕ್ಕೆ 80 ಬಸ್ಗಳನ್ನು ನೀಡಲಾಗಿದೆ ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದರು.