ಫೇಮ್ 2 ಯೋಜನೆಯಡಿ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಭಾರತದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದೆ.

ಫೇಮ್ 2 ಯೋಜನೆಯಡಿ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ

ಭಾರತದ ಪ್ರಮುಖ ನಗರಗಳು ಪೆಟ್ರೋಲ್, ಡೀಸೆಲ್ ವಾಹನಗಳಿಂದಾಗಿ ವಾಯುಮಾಲಿನ್ಯ ಸಮಸ್ಯೆಯನ್ನು ಎದುರಿಸುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಪ್ರಮುಖ ಕಾರಣ ವಾಯುಮಾಲಿನ್ಯ ಪ್ರಮಾಣವನ್ನು ಕಡಿಮೆಗೊಳಿಸುವುದು. ಇದರ ಜೊತೆಗೆ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆಗೊಳಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ.

ಫೇಮ್ 2 ಯೋಜನೆಯಡಿ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಕ್ರಮಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಭಾರತದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಫೇಮ್ ಇಂಡಿಯಾ ಎಂಬ ಯೋಜನೆಯನ್ನು ಸಹ ಜಾರಿಗೆ ತಂದಿದೆ.

MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ಫೇಮ್ 2 ಯೋಜನೆಯಡಿ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ

ಈ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತದೆ. ಸದ್ಯಕ್ಕೆ ಫೇಮ್ ಇಂಡಿಯಾ ಯೋಜನೆಯ ಎರಡನೇ ಹಂತ (ಫೇಮ್ -2) ಜಾರಿಯಲ್ಲಿದೆ. ಇದರಡಿಯಲ್ಲಿ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಎಲೆಕ್ಟ್ರಿಕ್ ಬಸ್ ಹಾಗೂ ಚಾರ್ಜಿಂಗ್ ಸ್ಟೇಷನ್ ಗಳನ್ನು ಒದಗಿಸುತ್ತಿದೆ.

ಫೇಮ್ 2 ಯೋಜನೆಯಡಿ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ

ಅದರಂತೆ ಗುಜರಾತ್, ಚಂಡೀಗಢ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಲಾಗಿದೆ. ಇದರ ಜೊತೆಗೆ ಗುಜರಾತ್, ತಮಿಳುನಾಡು, ಮಧ್ಯಪ್ರದೇಶ, ಕೇರಳ ಹಾಗೂ ಪೋರ್ಟ್ ಬ್ಲೇರ್ ಗಳಿಗೆ 241 ಚಾರ್ಜಿಂಗ್ ಸ್ಟೇಷನ್ ಗಳನ್ನು ನಿಗದಿಪಡಿಸಲಾಗಿದೆ.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಫೇಮ್ 2 ಯೋಜನೆಯಡಿ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ

ಈ ಮೂಲಕ ಕೇಂದ್ರ ಸರ್ಕಾರವು ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ​​ಹೇಳಿದ್ದಾರೆ.

ಫೇಮ್ 2 ಯೋಜನೆಯಡಿ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ

ಪರಿಸರ ಸ್ನೇಹಿ ಸಾರ್ವಜನಿಕ ಸಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿದೆ ಎಂದು ಅವರು ಹೇಳಿದರು. ಕೇರಳದ ಕೊಲ್ಲಂನಲ್ಲಿ 25, ತಿರುವನಂತಪುರಂನಲ್ಲಿ 27 ಹಾಗೂ ಮಲಪ್ಪುರಂಗಳಲ್ಲಿ 28 ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಫೇಮ್ 2 ಯೋಜನೆಯಡಿ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ

ಇದರ ಜೊತೆಗೆ ಪೋರ್ಟ್ ಬ್ಲೇರ್‌ನಲ್ಲಿ 10 ಹಾಗೂ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ 25 ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲಾಗುವುದು. ಎಲೆಕ್ಟ್ರಿಕ್ ವಾಹನಗಳನ್ನು ಜನಪ್ರಿಯಗೊಳಿಸಲು ಚಾರ್ಜಿಂಗ್ ಸ್ಟೇಷನ್ ಗಳ ನಿರ್ಮಾಣ ಅತಿ ಅಗತ್ಯವಾಗಿದೆ ಎಂದು ಅವರು ​​ಹೇಳಿದರು.

ಫೇಮ್ 2 ಯೋಜನೆಯಡಿ ರಾಜ್ಯಗಳಿಗೆ 670 ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಿದ ಕೇಂದ್ರ ಸರ್ಕಾರ

ಈಗಾಗಲೇ 450 ಎಲೆಕ್ಟ್ರಿಕ್ ಬಸ್‌ಗಳು ವಿವಿಧ ನಗರಗಳಲ್ಲಿ ಸಂಚರಿಸುತ್ತಿವೆ. ಈಗ 670 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲಾಗಿದೆ. ಈ ಪೈಕಿ ಮಹಾರಾಷ್ಟ್ರಕ್ಕೆ 240, ಗುಜರಾತ್ ಗೆ 250, ಗೋವಾಗೆ 100 ಹಾಗೂ ಚಂಡೀಗಢಕ್ಕೆ 80 ಬಸ್‌ಗಳನ್ನು ನೀಡಲಾಗಿದೆ ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದರು.

Most Read Articles

Kannada
English summary
Central government sanctions 670 electric buses under Fame 2. Read in Kannada.
Story first published: Saturday, September 26, 2020, 11:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X